Kodi Mutt Shree: ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಸ್ಪೋ’ಟಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು

0 10,600

Kodi Mutt Shree prediction: ನಿಜ ಭವಿಷ್ಯಕ್ಕೆ ಹೆಸರಾಗಿರುವ ಕೋಡಿಮಠದ ಶ್ರೀಗಳು (Kodi Mutt Shree) ನುಡಿದಂತೆ ಈಗಾಗಲೇ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ನವರು ಅಧಿಕಾರವನ್ನು ಸ್ವೀಕರಿಸಿದ್ದು ಚುನಾವಣೆಗೂ ಮೊದಲೇ ಕೋಡಿಮಠಕ್ಕೆ ಬೇಟಿ ನೀಡಿದ ಸಿದ್ದರಾಮಯ್ಯನವರಿಗೆ ಶ್ರೀಗಳಿಂದ ಆಶೀರ್ವಾದ ದೊರಕಿದ್ದು ಅಧಿಕಾರ‌ ನಿನ್ನ ಕೈಯಲ್ಲಿ ಇರುತ್ತದೆ ಶ್ರೀಗಳು ಅಧಿಕಾರ ನಿನ್ನ ಕೈಯಲ್ಲಿ ಇರುತ್ತದೆ ಎಂದು ಹೇಳಿದ್ದರು.ಈಗ ರಾಜ್ಯದ ರಾಜಕೀಯದ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ ಅದು ಏನೆಂದು ಈ ಲೇಖನದಲ್ಲಿ ನೋಡೋಣ.

2023ರ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳ ಬಹುಮತದಿಂದ ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿದೆ.ಇದೀಗ ಕಾಂಗ್ರೆಸ್ ಸರ್ಕಾರದ ಬಗ್ಗೆ ಕೋಡಿಮಠದ ಶ್ರೀ ಮಹತ್ವದ ಭವಿಷ್ಯ ನುಡಿದಿದ್ದಾರೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಜನತೆಯ ಭಾವನೆಗಳಿಗೆ ಪೂರಕವಾಗಿ ಸ್ಪಂದಿಸಿ ಕೆಲಸ ಮಾಡುವ ಮೂಲಕ ಜನಾದೇಶದ ತೀರ್ಪಿಗೆ ಅನುಗುಣವಾಗಿ 5 ವರ್ಷಗಳನ್ನ ಪೂರ್ಣಗೊಳಿಸಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೋಡಿಮಠದ ಶ್ರೀಗಳು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ KPCC ಅಧ್ಯಕ್ಷ ರಾದ ಡಿಕೆ ಶಿವಕುಮಾರ್ ಅವರಿಗೂ ಕೂಡ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲು ಡಿಕೆ ಶಿವಕುಮಾರ್ ಕೊಡುಗೆಯು ಅಪಾರವಾಗಿದೆ ಮಂತ್ರಿಮಂಡಲ ವಿಸ್ತರಣೆಯಲ್ಲಿ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡದೆ ಪ್ರಾದೇಶಿಕವಾರು, ಜಿಲ್ಲಾವಾರು ಸೂಕ್ತ ಪ್ರಾತಿನಿಧ್ಯ ನೀಡಿ ಸಂಪುಟ ವಿಸ್ತರಣೆ ಮಾಡಬೇಕೆಂದು ಶ್ರೀಕೋಡಿ ಮಠದ ಶ್ರೀಗಳು ಸಲಹೆ ನೀಡಿದ್ದಾರೆ.

ಅರಸೀಕೆರೆಗೆ ಪ್ರಚಾರಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ನಿಮಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಹೇಳಿದ್ದರು. ಅದು ನಿಜವಾಗಿದೆ ಅಲ್ಲದೆ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಯಾರದು ಹಂಗಿಲ್ಲದೆ ಸ್ವತಂತ್ರವಾಗಿ ಅಧಿಕಾರ ಹಿಡಿಯಲಿದೆ ಎಂದು ಕೋಡಿಮಠದ ಶ್ರೀಗಳು ತಿಳಿಸಿದ್ದರು. ಸದ್ಯಕ್ಕೆ ಸರ್ಕಾರಕ್ಕೆ ಯಾವುದೇ ಕಂಟಕವಿಲ್ಲ ಆದರೆ ಲೋಕಸಭಯ ಚುನಾವಣೆಯ ನಂತರ ಕಂಟಕ ಬರಲಿದೆ ಅದು ಏನು ಎಂದು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಶ್ರೀಗಳು ಹೇಳಿದ್ದಾರೆ. June 2023 Horoscope: ಇದೆ ಜೂನ್ 3 ನೇ ತಾರೀಕು ಭಯಂಕರ ಹುಣ್ಣಿಮೆ ಇರುವುದರಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ನಿಮ್ಮ ರಾಶಿ ಇದೆಯಾ ತಿಳಿದುಕೊಳ್ಳಿ

Leave A Reply

Your email address will not be published.