Kodi mutt swamiji prediction: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೆಲವು ತಿಂಗಳುಗಳಾಗಿವೆ, ಇದರ ನಡುವೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೊದಲು ಈ 5ಗ್ಯಾರಂಟಿಗಳನ್ನು ಕೊಟ್ಟಿತ್ತು ಇದೀಗ ಅಧಿಕಾರಕ್ಕೆ ಬಂದ ಮೇಲೆ ಒಂದೊಂದೇ ಯೋಜನೆಗಳನ್ನು ಜಾರಿಗೆ ತರುತ್ತಿದೆ ಕೆಲವರಿಗೆ ಸಮಾಧಾನ ಆದ್ರೆ ಇನ್ನೂ ಕೆಲವರಿಗೆ ಈ ಕಾಂಗ್ರೆಸ್ ಗ್ಯಾರಂಟಿಯ ಬಗ್ಗೆ ಅಸಮಾಧಾನವಿದೆ.
ಐದು ವರ್ಷಗಳ ಅವಧಿಯವರೆಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿರುತ್ತಾರಾ ಅಥವಾ 2.5 ವರ್ಷ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಆಡಳಿತ ಮಾಡುತ್ತಾರೆ ಎನ್ನುವುದು ಎಲ್ಲರ ಪ್ರಶ್ನೆಯಾಗಿದೆ. ಕಾಂಗ್ರೆಸ್ ನಾಯಕರಿಗೂ ಕೂಡ ಈ ಬಗ್ಗೆ ಸ್ಪಷ್ಟತೆ ಇಲ್ಲ ಅವರಿಗೂ ಕೂಡ ಇದು ಒಂದು ಯಕ್ಷಪ್ರಶ್ನೆಯಾಗಿದೆ. ಈ ಬಗ್ಗೆ ತುಂಬಾ ಚರ್ಚೆ ನಡೆಸುತ್ತಿದ್ದ ಕಾರಣ ಹೈಕಮಾಂಡ್ ವಾರ್ನಿಂಗ್ ಕೊಟ್ಟಿದ ನಂತರ ಈ ಬಗ್ಗೆ ಚರ್ಚೆ ತಣ್ಣಗಾಗಿದೆ.
Kodi mutt swamiji prediction
ನಿಖರ ಭವಿಷ್ಯಕ್ಕೆ ಪ್ರಸಿದ್ಧರಾದ ಶ್ರೀ ಕೋಡಿಮಠದ ಶ್ರೀಗಳು ಸಿದ್ದರಾಮಯ್ಯರವರು 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರಾ ಅಥವಾ 2.5 ವರ್ಷ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಾರಾ ಎನ್ನುವುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಶ್ರೀಗಳು 2024ರ ಲೋಕಸಭಾ ಚುನಾವಣೆಯ ನಂತರ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರಾ ಅಥವಾ ಇಲ್ವಾ ಎಂದು ತಿಳಿಯುತ್ತದೆ ಎಂದಿದ್ದಾರೆ. ಚುನಾವಣೆಯ ನಂತರ ತೀರ್ಮಾನವಾಗಲಿದೆ ಎಂದು ಹೇಳಿದರು. ಈ ಮೂಲಕ ಲೋಕಸಭಾ ಚುನಾವಣೆ ನಂತರ ರಾಜ್ಯದ ಸಿಎಂ ಬದಲಾದರೂ ಅಚ್ಚರಿಯಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: Free Bus Scheme: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ರದ್ದಾಯ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ