ಸಿಎಂ ಯಾವುದೇ ವಿವಾದವನ್ನು ಸೃಷ್ಟಿಸಿಕೊಳ್ಳದೇ ರಾಜ್ಯವನ್ನು ಮುನ್ನಡೆಸಲಿದ್ದಾರೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಸದ್ಯ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶ್ರೀಗಳು ಜಡೆ ಸಂಸ್ಥಾನದ ಮಠದ ಜಗದ್ಗುರು ಕೆಂಪಿನ ಸಿದ್ದವೃಷಭೇಂದ್ರ ಸ್ವಾಮೀಜಿ ಕರ್ತೃ ಗದ್ದುಗೆಗೆ ಭೇಟಿ ನೀಡಿದರು. ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ, ಯಾವುದೇ ವಿವಾದಗಳಿಗೆ ಆಸ್ಪದವನ್ನು ನೀಡದೇ ನಮ್ಮ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯವನ್ನು ಮುನ್ನಡೆಸಲಿದ್ದಾರೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾವೈರಸ್, ರಾಜಕೀಯ, ನೈಸರ್ಗಿಕ ವಿಕೋಪದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಜಲಪ್ರಳಯದಿಂದ ಜನರು ತತ್ತರಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಇನ್ನು ರಾಜಕೀಯದ ಬಗ್ಗೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಡೆತಡೆಗಳು ಎದುರಾದರೂ, ಯಾವುದೇ ಅಡ್ಡಿಯಿಲ್ಲದೆ, ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು, ಆಡಳಿತ ಮುಂದುವರೆಸಲಿದ್ದಾರೆ ಎಂದು ಭವಿಷ್ಯ ನುಡಿದರು. ಶಿವಮೊಗ್ಗ ಜಿಲ್ಲೆಯ ಸೊರಬದ ಜಡೆ ಸಂಸ್ಥಾನ ಮಠದ ಶ್ರೀ ಸಿದ್ದವೃಷಭೇಂದ್ರ ಸ್ವಾಮೀಜಿ ಅವರ ಕರ್ತೃ ಗದ್ದುಗೆಯ ದರ್ಶನ ಪಡೆದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಶ್ರೀಗಳು, ಬೊಮ್ಮಾಯಿ ಅವರು ಸರಳ, ಸಜ್ಜನಿಕೆಯ ಚಾಣಕ್ಷ್ಯ ಬುದ್ದಿಯಿಂದ ಮುಖ್ಯಮಂತ್ರಿ ಆಗಿ ಅವರ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ ಎಂದು ಹೇಳಿದರು.

ಅಷ್ಟೇ ಅಲ್ಲದೆ ಈ ಹಿಂದೆ ಬೊಮ್ಮಾಯಿ ಅವರು ಆಡಳಿತ ವಹಿಸಿಕೊಳ್ಳುವುದಕ್ಕೂ ಮೊದಲು ಬಿ ಎಸ್ ಯಡಿಯೂರಪ್ಪ ಅವರ ಕುರಿತಾಗಿ ಕೂಡಾ ಮಾತನಾಡಿ, ರಾಜರ ಆಡಳಿತದ ಕಾಲದಿಂದಲೂ ಮಠಾಧೀಶರು ಹಾಗೂ ಗುರುಗಳು ರಾಜರಿಗೆ ರಾಜಾಡಳಿತದ ಕಾಲದಿಂದಲೂ ಮಠಾಧೀಶರು ಹಾಗೂ ಗುರುಗಳು ರಾಜರಿಗೆ ಮಾರ್ಗದರ್ಶನ ಮಾಡುತ್ತಾ ಬಂದಿದ್ದಾರೆ.

ಕೊರೊನಾ ಮತ್ತು ನೆರೆ ಪರಿಸ್ಥಿತಿಯಂತಹ ಸಂಕಷ್ಟದ ಸಮಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಸಮರ್ಥವಾಗಿ ಆಡಳಿತ ನಡೆಸಿದ್ದರು. ಇಂತಹ ಸಂಕಷ್ಟದ ಸಮಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಲ್ಲದು ಎಂದು ಮಠಾಧೀಶರು ಒಗ್ಗೂಡಿ ಅವರ ಬೆಂಬಲಕ್ಕೆ ನಿಂತಿದ್ದರು ಹೊರತು ಇದರಲ್ಲಿ ಸ್ವಾಮೀಜಿಗಳ ಯಾವುದೇ ಸ್ವಾರ್ಥ ಇರಲಿಲ್ಲ ಎಂದರು. ಮಾಡುತ್ತಾ ಬಂದಿರುವ ಇತಿಹಾಸವಿದೆ.

ಕೊರೊನಾ ಮತ್ತು ನೆರೆ ಪರಿಸ್ಥಿತಿಯಂತಹ ಸಂಕಷ್ಟದ ಸಮಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಸಮರ್ಥವಾಗಿ ಆಡಳಿತ ನಡೆಸಿದ್ದರು. ಇಂತಹ ಸಂಕಷ್ಟದ ಸಮಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಲ್ಲದು ಎಂದು ಮಠಾಧೀಶರು ಒಗ್ಗೂಡಿ ಅವರ ಬೆಂಬಲಕ್ಕೆ ನಿಂತಿದ್ದರು ಹೊರತು ಇದರಲ್ಲಿ ಸ್ವಾಮೀಜಿಗಳ ಯಾವುದೇ ಸ್ವಾರ್ಥವಿರಲಿಲ್ಲ ಎಂದಿದ್ದಾರೆ.

ಹಾಗೆಯೇ ರಾಜ್ಯದ ಆಡಳಿತ ಸಮರ್ಥವಾಗಿ ನಡೆಯಲು ಗುರುಗಳಾದವರು ಮಾರ್ಗದರ್ಶನ ನೀಡುವುದು ಕರ್ತವ್ಯ. ಆದರೆ ಇಂತಹ ಸಂದರ್ಭದಲ್ಲಿ ಸಾಧು ಸಂತರು ಧ್ವನಿ ಎತ್ತಿದರೂ ಸಹ ಮನ್ನಣೆ ಸಿಗಲಿಲ್ಲ ಎಂಬುದು ಬೇಸರ ತರಿಸಿದೆ ಎಂದರು. ನಂತರ ಕೋರೋನ ಆರಂಭ ಆದಾಗಿನಿಂದ ಮೊದಲಿನಿಂದಲೂ ಕೋರೋನ ಬಗ್ಗೆ ಭವಿಷ್ಯ ನುಡಿಯುತ್ತಾ ಬಂದಿದ್ದ ಕೊಡಿ ಮಠದ ಶ್ರೀಗಳು ಈ ಬಾರಿ ಕೂಡಾ ಶಿವಮೊಗ್ಗದಲ್ಲಿ ಕೋರೋನ ಸಾಂಕ್ರಾಮಿಕ ವೈರಸ್ ನ ಬಗ್ಗೆ ಮತ್ತೆ ಭವಿಷ್ಯ ನುಡಿದಿದ್ದಾರೆ. ಮುಂದಿನ ಐದು ವರ್ಷದವರೆಗೆ ಕೊರೋನಾ ಸೋಂಕು ಸಂಪೂರ್ಣ ನಾಶವಾಗುವುದಿಲ್ಲ. ಆದರೆ ಜನತೆ ಕೊರೊನಾ ಬಗ್ಗೆ ಭಯಪಡುವ ಅಗತ್ಯವಿಲ್ಲ. ಮಕ್ಕಳ ಬಗ್ಗೆಯೂ ಆತಂಕಪಡುವ ಅಗತ್ಯವಿಲ್ಲ.

ಸ್ವಚ್ಛತೆ ಬಗ್ಗೆ ಗಮನಹರಿಸಿ ಮುಂಜಾಗ್ರತಾ ಕ್ರಮ ವಹಿಸುವುದು ಸೂಕ್ತವಾದುದು ಎಂದು ಕೋಡಿಮಠದ ಶ್ರೀಗಳು ಹೇಳಿದರು. ಅದೇ ರೀತಿ ಮೊದಲು ತಾವು ನುಡಿದ ಭವಿಷ್ಯ, ಅಂದರೆ ಜಗತ್ತಿನ ಭೂಪಟದಲ್ಲಿ ಒಂದು ದೇಶ ಅಸ್ತಿತ್ವದಲ್ಲೇ ಇರುವುದಿಲ್ಲ ಎಂದು ಮೊದಲೇ ಭವಿಷ್ಯ ನುಡಿದಿದ್ದರು. ಈಗ ಆ ಮಾತಿನ ಹಾಗೆ ಅಫ್ಘಾನಿಸ್ತಾನದ ಸ್ಥಿತಿ ಹೇಗೆ ಬದಲಾಗಿದೆ ನೋಡಿ ತಾಲಿಬಾನಿಗಳ ಕೈಯಲ್ಲಿ ಸಿಲುಕಿ ನಲುಗುತ್ತಿದೆ ಎಂದು ಸಹ ತಿಳಿಸಿದರು. ನೈಸರ್ಗಿಕ ವಿಕೋಪದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಜಲಪ್ರಳಯದಿಂದ ಜನರು ತತ್ತರಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ. ಅಕಾಲಿಕ ಮಳೆ, ನೆರೆ, ಬರದಿಂದ ಜನ ತತ್ತರಿಸಲಿದ್ದು, ಪ್ರಕೃತಿ ವಿಕೋಪಕ್ಕೆ ಸಿದ್ಧರಾಗಬೇಕಿದೆ ಎಂದು ತಿಳಿಸಿದ್ದಾರೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *