ಪಶು ಸಂಗೋಪನೆ ಇಲಾಖೆಯ ಹಳ್ಳಿ ಜನರ ಆರ್ಥಿಕ ಬೆಳವಣಿಗೆಯಲ್ಲಿ ಹಾಗೂ ಅವರುಗಳಿಗೆ ಉದ್ಯೋಗ ದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿಕೊಂಡಿದೆ. ಹಳ್ಳಿಗಳಲ್ಲಿ ಬಡಜನರು ಅದರಲ್ಲೂ ಸಣ್ಣ ಮತ್ತು ಅತೀ ಸಣ್ಣ ರೈತರು ತಮಗೆ ಲಭ್ಯವಾದ ಬೆಳೆಗಳಿಂದ ಪಶು ಸಂಪತ್ತು ಬೆಳೆಸಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ಪಶುಪಾಲನೆ ಮಾಡುವವರಿಗೆ ಸಂತಸದ ಸುದ್ದಿ. ಈಗ ಮನೆಯಲ್ಲಿಯೂ ಕುಳಿತು ಪಶುಪಾಲನೆ ಕುರಿತು ಕ್ಷಣಾರ್ಧದಲ್ಲಿ ಮಾಹಿತಿ ಪಡೆಯಬಹುದು.

ಕುರಿಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಮೊಲ ಸಾಕಾಣಿಕೆ ಮಾಡಲು ಬಯಸಿದ್ದರೆ ಪಶು ಇಲಾಖೆಯ ತಜ್ಞರಿಂದ ಮಾಹಿತಿ ಪಡೆಯಬಹುದು. ಕುರಿ ಸಾಕಾಣಿಕೆಗೆ ಸಾಲಸೌಲಭ್ಯ ಬೇಕಿದ್ದರೆ ನಿಮಗೆ ಸರಿಯಾದ ಮಾಹಿತಿ ಇಲ್ಲವೆಂದು ಇನ್ನುಮುಂದೆ ಚಿಂತೆ ಮಾಡುವ ಅವಶ್ಯಕತೆಯಿಲ್ಲ. ಮನೆಯಲ್ಲಿಯೇ ಕುಳಿತು ಉಚಿತ ಸಹಾಯವಾಣಿಗೆ ಕರೆ ಮಾಡಿದರೆ ಸಾಕು ನಿಮ್ಮ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ಪಡೆಯಬಹುದು. ನಿಮಗೆ ಬೇಕಾದ ಮಾಹಿತಿಯನ್ನು ಕ್ಷಣಾರ್ಧರದಲ್ಲಿ ನೀವು ಮನೆಯಲ್ಲಿಯೇ ಕುಳಿತು ಪಡೆಯಬಹುದು. ಅದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಕಾಣಬಹುದು.

ರಾಜ್ಯದ ಪಶುಸಂಗೋಪನಾ ಚಟುವಟಿಕೆಗಳಲ್ಲಿ ನಿರತರಾಗಿರುವ ರೈತರು ದೂರವಾಣಿ ಸಂಖ್ಯೆ 1800 425 0012 (ಉಚಿತ) ಅಥವಾ 080-23417100 ಕ್ಕೆ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಕರೆ ಮಾಡಿ, ಪಶುವೈದ್ಯರು ಮತ್ತು ಇತರೆ ವಿಷಯ ತಜ್ಞರಿಂದ ಅಗತ್ಯ ಮಾಹಿತಿ ಪಡೆಯಬಹುದು. ವಾಟ್ಸ್ ಅ್ಯಪ್ ನಂಬರ್ ದಿಂದಲೂ ಮಾಹಿತಿ ಪಡಯಲಿಚ್ಚಿಸುವವರು ಮೊ.948 391 4000 ಗೆ ಕೋರಿಕೆ ನೀಡಬೇಕು. ಪಶುಸಾಕಾಣಿಕೆ, ಪಶುಗಳಿಗೆ ಬರುವ ರೋಗ, ತರಬೇತಿ, ಲಸಿಕೆ, ತಳಿಗಳು ಸೇರಿದಂತೆ ಇತರ ಎಲ್ಲಾ ಮಾಹಿತಿಯೂ ಸಿಗುತ್ತದೆ. ಪಶುಪಾಲನಾ ಇಲಾಖೆಯು, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ‘ಪ್ರಾಣಿ ರೋಗ ಕಣ್ಗಾವಲು ಜಾಲದ ಬಲವರ್ಧನೆ’ ಕಾರ್ಯಕ್ರಮದ ಅಡಿಯಲ್ಲಿ ಪಶುಪಾಲಕರಿಗಾಗಿ ‘ಸಹಾಯವಾಣಿ’ ಯನ್ನು ಆರಂಭಿಸಲಾಗಿದೆ. ಬೆಂಗಳೂರಿನ ಜಂಟಿ ನಿರ್ದೇಶಕರು (ಪಶು ಆರೋಗ್ಯ)  ಕಛೇರಿಯಲ್ಲಿ ಈ ಸಹಾ.ಯವಾಣಿ ಆರಂಭಿಸಲಾಗಿದೆ.

ಸಹಾಯವಾಣಿಯ ಮೂಲಕ ಲಭ್ಯವಿರುವ ಮಾಹಿತಿಗಳು: ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ. ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹಾಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವಿವರ. ದೇಶಿ ಹಾಗೂ ವಿದೇಶಿ ಜಾನವಾರು ತಳಿಗಳ ಬಗ್ಗೆ ಮಾಹಿತಿ. ಜಾನುವಾರುಗಳಲ್ಲಿ ನಿಯಮಿತವಾಗಿ ನೀಡಬೇಕಾಗಿರುವ ಲಸಿಕೆಗಳ ಕುರಿತು ವಿವರಣೆ. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲ ಸೌಲಭ್ಯ ಕುರಿತು ಮಾಹಿತಿ. ಮಿಶ‍್ರತಳಿ ಹಸು, ಕುರಿ ಮತ್ತು ಮೇಕೆ, ಹಂದಿಗಳ ಅಂದಾಜು ಬೆಲೆ ಹಾಗೂ ಅವುಗಳ ಲಭ್ಯತೆ ಕುರಿತಂತೆ ಸೂಕ್ತ ಸ್ಥಳಗಳ ವಿವರ. ಯಶಸ್ವಿ ಹೈನುಗಾರಿಕೆಗೆ ಅಗತ್ಯವಿರುವ ಮೇವಿನ ಬೆಳೆಗಳ ಬಗ್ಗೆ ಮಾಹಿತಿ. ತುರ್ತು ಪಶುವೈದ್ಯ ಸೇವೆಗಾಗಿ ಒಳಬರುವ ಕರೆಗಳನ್ನು ಹತ್ತಿರದ ಇಲಾಖಾ ತಾಂತ್ರಿಕ ಸಿಬ್ಬಂದಿ/ಅಧಿಕಾರಿಗೆ ವರ್ಗಾಯಿಸಿ, ಅಗತ್ಯ ಸೇವೆ ದೊರೆಯುವಂತೆ ಸಹಕರಿಸುವುದು. call the free helpline number1800 425 0012

Leave a Reply

Your email address will not be published. Required fields are marked *