ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರ್ವಜನಿಕರಿಗೆ ಕೊರೊನ ಬಗ್ಗೆ ಅಭಯ ನೀಡಿದ್ದಾರೆ, ಜೊತೆಗೆ ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ, ಶಾಲಾ ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟ ಪಡಿಸಿದ್ದಾರೆ.
ಸುದ್ದಿಗರರೊಂದಿಗೆ ಮಾತನಾಡಿದ ಅವರು ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಕುರಿತು ಜನತೆ ಭಯಪಡುವ ಅಗತ್ಯ ಇಲ್ಲಾ.ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.ಬರುವ ದಿನದಲ್ಲಿ ಸುದೀರ್ಘ ಕ್ರಮ ಕೈಗೊಳ್ಳಬೇಕಾಗಿದೆ. ಔಷದಿ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಾಲೆಗಳಿಗೆ ರಜೆ ಬಗ್ಗೆ ತಜ್ಞರನ್ನು ಕೇಳಿ ತೀರ್ಮಾನ ಮಾಡುತ್ತೇವೆ.
ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ತಜ್ಞರ ಸಭೆಯ ನಂತರ ನಿರ್ಧಾರ ಮಾಡಲಾಗುತ್ತದೆ.ವಿಮಾನ ನಿಲ್ದಾಣದಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಿ ಎಂ, ಇಂದು ಸಂಜೆ ಕೋವಿಡ್ ಬಗ್ಗೆ ಸಭೆ ಮಾಡುತ್ತಿದ್ದೇವೆ. ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರಿರುತ್ತಾರೆ. ಕೋವಿಡ್ ಮತ್ತೆ ಹೆಚ್ಚಳ ಹಿನ್ನಲೆಯಲ್ಲಿ ವಿಶ್ವ ಅರೋಗ್ಯ ಸಂಸ್ಥೆ, ಭಾರತ ಸರ್ಕಾರ ಮಾರ್ಗದರ್ಶನ ನೀಡಿದೆ.
ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚಾಗಿದೆ ನಮ್ಮ ರಾಜ್ಯದಲ್ಲಿ ಹೆಚ್ಚಾಗುತ್ತದೆ ಇದರ ಬಗ್ಗೆ ಕಟ್ಟೆಚ್ಚರ ವಹಿಸುವ ಅವಶ್ಯಕತೆ ಇದೆ ಎಂದರು.ಗಡಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇನ್ನಷ್ಟು ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದು ಸಿ ಎಂ ಹೇಳಿದ್ದಾರೆ.