ಕರ್ನಾಟಕ ಬಾಲ ಕಾರ್ಮಿಕ ಸಂಘದಲ್ಲಿ ಖಾಲಿ ಇರುವ ಕ್ಲರ್ಕ್ ಕಮ್ ಅಕೌಂಟೆಂಟ್ ಮತ್ತು ಡೇಟಾ ಎಂಟ್ರಿ  ಆಪರೇಟರ್ ( DEO ) ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಆಗಿದೆ. ಮಹಿಳೆ ಮತ್ತು ಪುರುಷ ಅಭ್ಯರ್ಥಿಗಳು ಇಬ್ಬರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಈ ಹುದ್ದೆಗಳು ಪರ್ಮನೆಂಟ್ ಹುದ್ದೆಗಳಾಗಿ ಇರುತ್ತವೆ. ಅರ್ಜಿ ಸಲ್ಲಿಕೆ ಮಾಡಲು ಆಸಕ್ತಿ ಇರುವ ಅರ್ಜಿದಾರರು. ಕ್ಲರ್ಕ್ ಕಮ್ ಅಕೌಂಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಕರ್ನಾಟಕದ ಯಾವುದೇ ಭಾಗದಿಂದ ಅರ್ಜಿ ಸಲ್ಲಿಕೆ ಮಾಡಬಹುದು.

ವೇತನ ಶ್ರೇಣಿ :-₹30,000 – ₹60,000 ದ ತನಕ ಸಂಬಳ ಇರುತ್ತದೆ.
ಶೈಕ್ಷಣಿಕ ಅರ್ಹತೆ :-ಕ್ಲರ್ಕ್ ಕಮ್ ಅಕೌಂಟೆಂಟ್ ಹುದ್ದೆಗೆ ಅರ್ಜಿದಾರರು ಬಿ.ಕಾಂ. ಮೂಗಿಸಿರಬೇಕು.ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿದಾರರು ಯಾವುದೇ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯಸ್ಸಿನ ಮಿತಿ :-ಅರ್ಜಿ ಸಲ್ಲಿಕೆ ಮಾಡುವ ಕೊನೆ ದಿನಾಂಕದ ಒಳಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು 40 ವರ್ಷ ಮೀರಿರಬಾರದು.ಒಬಿಸಿ ( OBC ) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್ . ಸಿ / ಎಸ್. ಟಿ  ( SC/ST ) ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ :-ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಯಾವ ರೀತಿಯ ಶುಲ್ಕ ಇರುವುದಿಲ್ಲ.
ಆಯ್ಕೆ ಮಾಡುವ ವಿಧಾನ :-ಅಭ್ಯರ್ಥಿಯನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ಅಥವಾ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಡಿಸಿ ಕಚೇರಿಯಲ್ಲಿ ನೇಮಕಾತಿ ಆಗುತ್ತದೆ.

ಆಸಕ್ತಿ ಮತ್ತು ಅರ್ಹತೆ ಇರುವ ವ್ಯಕ್ತಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು, ಇತ್ತೀಚಿನ ಭಾವಚಿತ್ರ, ಅಗತ್ಯ ಇರುವ ವಿದ್ಯಾರ್ಹತೆ, ಅನುಭವ ಮತ್ತು ಇನ್ನು ಇತರೆ ಅಗತ್ಯ ದಾಖಲೆಗಳ ಜೊತೆ ಲಗತಿಗೆ 23/05/2024 ರ ಒಳಗೆ ಖುದ್ದಾಗಿ ಇಲ್ಲವೇ ಅಂಚೆ ಮೂಲಕ ಸಲ್ಲಿಸಬೇಕು.

ಅಂಚೆ ವಿಳಾಸ :-ಸಹಾಯಕ ಕಾರ್ಮಿಕ ಆಯುಕ್ತರು ಮತ್ತು ಸದಸ್ಯ ಕಾರ್ಯದರ್ಶಿಗಳು, ಬಾಲಕಾರ್ಮಿಕ ಯೋಜನಾ ಸಂಸ್ಥೆ ಕೊಠಡಿ  ಸಂಖ್ಯೆ 3, ಕಾರ್ಮಿಕ ಇಲಾಖೆ, ಕಾರ್ಮಿಕ ಭವನ, ಬನ್ನೇರುಘಟ್ಟ ರಸ್ತೆ, ಬೆಂಗಳೂರು.

ಈ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನ :- 23/05/2024.
https://childlabour.karnataka.gov.in/english
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಆಸಕ್ತಿ ಇರುವ ಅರ್ಹ ವ್ಯಕ್ತಿಗಳು ಈ ಹುದ್ದೆಗಳಿಗೆ ಅಪ್ಲಿಕೇಶನ್ ಸಲ್ಲಿಸುವ ಅವಕಾಶ ಇದೆ. ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.

By

Leave a Reply

Your email address will not be published. Required fields are marked *