ವಸತಿ ರಹಿತರಿಗೆ ಮುಖ್ಯಮಂತ್ರಿ ಬೊಮ್ಮಾಯಿರವರು ಶುಭಸುದ್ದಿ ನೀಡಿದ್ದಾರೆ. ಮನೆ ಕಟ್ಟುವ ಕನಸು ಕಾಣುತ್ತಿರುವರಿಗೆ ಇದು ಸುಸಂದರ್ಭ. ಸ್ವಂತ ಮನೆಯನ್ನು ಇಲ್ಲದವರಿಗೆ ಹೊಸ ಆದೇಶವನ್ನು ಮುಖ್ಯಮಂತ್ರಿಗಳು ಹೊರಡಿಸಿದ್ದಾರೆ. ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.

2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. 2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿ, ಈ ಮುಖ್ಯಾಂಶಗಳನ್ನು ತಿಳಿಸಿದ್ದಾರೆ.ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಗರಿಷ್ಠ ಮೂರು ತಿಂಗಳೊಳಗೆ ಮುಕ್ತಾಯವಾಗಬೇಕು.

ನಿವೇಶನ ಹಂಚಿಕೆ ಸಂಬಂಧ ರಾಜ್ಯದ ವಿವಿಧ ಭಾಗಗಳಲ್ಲಿರುವ ಆಸ್ತಿಗೆ ಆದ್ಯತೆ ಮೇರೆಗೆ ಡಿಪಿಆರ್ ಮಾಡಿ ಸಲ್ಲಿಸುವುದು. 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಬಹುಮಹಡಿ ಮನೆಗಳ ನಿರ್ಮಾಣ ಕಾಮಗಾರಿಗಳ ಪೈಕಿ 20000 ಮನೆಗಳನ್ನು ಪೂರ್ಣಗೊಳಿಸುವ ಗುರಿ ಇದೆ.

20,000 ಮನೆಗಳನ್ನು ಪೂರ್ಣಗೊಳಿಸಲು ಅನುದಾನವನ್ನು ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುವುದು. ಕೀಲಿ ಕೈ ಹಸ್ತಾಂತರ ಮಾಡುವ ಮುನ್ನ ಷರತ್ತುಗಳನ್ನು ವಿಧಿಸುವುದು. ಮುಗಿಯುವ ಹಂತದಲ್ಲಿರುವ ಮನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ, ಸಾಲವನ್ನು ಫಲಾನುಭವಿಗಳ ಹೆಸರಿಗೆ ವರ್ಗಾವಣೆ ಮಾಡಿಸುವುದು.

Leave a Reply

Your email address will not be published. Required fields are marked *