New Ration Card Application In Karnataka: ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳು ಜಾರಿಗೆ ಬಂದಾಗಿನಿಂದ ರೇಷನ್ ಕಾರ್ಡ್ ಗೆ ಬೇಡಿಕೆ ಜಾಸ್ತಿ ಆಗಿದೆ. ಬಹಳಷ್ಟು ಜನರು ಬಡತನದಲ್ಲಿ ಇದ್ದರು ಸಹ ಅವರ ಬಳಿ ಬಿಪಿಎಲ್ ಕಾರ್ಡ್ ಇಲ್ಲದ ಕಾರಣ ಗ್ಯಾರೆಂಟಿ ಯೋಜನೆಗಳ ಸೌಲಭ್ಯ ಪಡೆಯಲು ಆಗುತ್ತಿಲ್ಲ. ಇನ್ನಷ್ಟು ಜನರು 2 ವರ್ಷಗಳ ಹಿಂದೆಯೇ ಹೊಸ ರೇಶನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದು ಅವರಿಗೆ ಸಹ ಇನ್ನು ಹೊಸ ರೇಷನ್ ಕಾರ್ಡ್ ಸಿಕ್ಕಿಲ್ಲ.

ಈಗಾಗಲೇ ರಾಜ್ಯದಲ್ಲಿ ಹೆಚ್ಚಿನ ಜನರ ಬಳಿ ರೇಷನ್ ಕಾರ್ಡ್ ಇರುವ ಕಾರಣಕ್ಕೆ, ಗ್ಯಾರೆಂಟಿ ಯೋಜನೆಗಳಿಂದ ಸರ್ಕಾರಕ್ಕೂ ಹೊರೆ ಆಗಿದೆ ಎನ್ನುವ ಕಾರಣಕ್ಕೆ ಇನ್ನು ಕೂಡ ಹೊಸ ರೇಷನ್ ಕಾರ್ಡ್ ಗಳ ವಿತರಣೆ ಮಾಡಿರಲಿಲ್ಲ. ಆದರೆ ಇತ್ತೀಚೆಗೆ ಸುಮಾರು 20,000 ಹೊಸ ರೇಶನ್ ಕಾರ್ಡ್ ಗಳ ವಿತರಣೆ ಮಾಡಿದೆ ಸರ್ಕಾರ. ಜೊತೆಗೆ 2 ವರ್ಷಗಳ ಹಿಂದೆಯೇ 2 ಲಕ್ಷ ಜನರು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದರು.

ತುರ್ತು ಪರಿಸ್ಥಿತಿಗಾಗಿ ಅಪ್ಡೇಟ್ ಮಾಡಿಸಲು ಅವಕಾಶ ನೀಡಿದ್ದಾಗಲೂ ಸುಮಾರು 1 ಲಕ್ಷ ಜನರು ರೇಷನ್ ಕಾರ್ಡ್ ಅಪ್ಡೇಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಷ್ಟು ದಿವಸ ಸರ್ಕಾರದಿಂದ ತಡವಾಗಿದೆ ಎಂದು ಜನರು ಸಹ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಈಗ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಈಗಾಗಲೇ 20,000 ರೇಷನ್ ಕಾರ್ಡ್ ವಿತರಣೆ ಮಾಡಲಾಗಿದ್ದು, ಇನ್ನುಳಿದ ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ಅರ್ಜಿ ಹಾಕಿರುವವರಿಗೆ ಶೀಘ್ರದಲ್ಲೇ ರೇಷನ್ ಕಾರ್ಡ್ ವಿತರಣೆ ಕೆಲಸ ನಡೆಯುತ್ತದೆ, ಒಂದೊಂದು ಜಿಲ್ಲೆಯಲ್ಲಿ ಎಷ್ಟೆಷ್ಟು ಜನರು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೋ ಅದರ ಅನುಸಾರ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಹಾಗೆಯೇ ಇನ್ನುಮುಂದೆ ಪ್ರತಿ ತಿಂಗಳು ಕೂಡ ರೇಶನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಎರಡನ್ನು ಕೂಡ ಅಪ್ಡೇಟ್ ಮಾಡಿಸುವುದಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದಿದ್ದಾರೆ.

ಇನ್ನು ಒಂದು ಗುಡ್ ನ್ಯೂಸ್ ನೀಡಿದ್ದು, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದಕ್ಕೆ ಕೂಡ ಶೀಘ್ರದಲ್ಲೇ ಅವಕಾಶ ಮಾಡಿಕೊಡುವುದಾಗಿ ಆಹಾರ ಇಲಾಖೆಯ ಸಚಿವರೇ ತಿಳಿಸಿದ್ದಾರೆ. ಸರ್ಕಾರ ಜನರಿಗೆ ಈ ಒಂದು ಗುಡ್ ನ್ಯೂಸ್ ನೀಡಿದ್ದು, ಇದೀಗ ಜನರಲ್ಲಿ ಹೊಸ ಭರವಸೆ ಶುರುವಾಗಿದೆ.

By AS Naik

Leave a Reply

Your email address will not be published. Required fields are marked *