New ration Card Updates: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡ್ ಎರಡು ಕೂಡ ಬಹಳ ಪ್ರಮುಖವಾದವು, ಜನರಿಗೆ ಹೆಚ್ಚಿನ ಸೌಲಭ್ಯ ನೀಡುವಲ್ಲಿ ಈ ಎರಡು ಕಾರ್ಡ್ ಗಳು ಸಹಾಯ ಮಾಡುತ್ತಿವೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಹೆಚ್ಚಿನ ಸೌಲಭ್ಯ ಸಿಗುತ್ತಿದೆ ಎಂದರೆ ತಪ್ಪಲ್ಲ. ಉಚಿತ ರೇಶನ್ ಜೊತೆಗೆ ಇನ್ನು ಹಲವು ಸರ್ಕಾರದ ಸೌಲಭ್ಯಗಳು ಸಿಗುತ್ತಿವೆ. ಬಿಪಿಎಲ್ ಕಾರ್ಡ್ ಅನ್ನು ಬಡತನದ ರೇಖೆಗಿಂತ ಕೆಳಗಿರುವವರಿಗೆ ವಿತರಿಸಲಾಗುತ್ತದೆ.

ಆದರೆ ಎಲೆಕ್ಷನ್ ನಡೆಯುವುದಕ್ಕಿಂತ ಮೊದಲೇ ಅನೇಕ ಜನರು ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ, ಅಂಥವರಿಗೆ ಸರ್ಕಾರವು ಇನ್ನು ಹೊಸ ರೇಷನ್ ಕಾರ್ಡ್ ವಿತರಣೆ ಮಾಡಿಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಅವರ ಅರ್ಜಿಗಳನ್ನು ಪರಿಶೀಲಿಸಿ, ಹೊಸ ರೇಷನ್ ಕಾರ್ಡ್ ಅನ್ನು ವಿತರಣೆ ಮಾಡಿಲ್ಲ. ಹಾಗೆಯೇ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವುದಕ್ಕೆ ಕೂಡ ಅವಕಾಶ ನೀಡಿತ್ತು.

ಆ ವೇಳೆ ಸಾಕಷ್ಟು ಜನರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಂಡಿದ್ದರು ಸಹ, ಇನ್ನು ಹಲವರು ರೇಷನ್ ಕಾರ್ಡ್ ತಿದ್ದುಪಡಿಗೆ ಮಾಡಲು ಸಾಧ್ಯವಾಗಿಲ್ಲ. ಆದರೆ ರೇಷನ್ ಕಾರ್ಡ್ ಹೊಂದಿರುವ ಸುಮಾರು ಜನರು 2016ರ ಬಿಪಿಎಲ್ ರೇಷನ್ ಕಾರ್ಡ್ ನಿಯಮಗಳನ್ನು ಪಾಲಿಸದೇ ರೇಷನ್ ಕಾರ್ಡ್ ಹೊಂದಿದ್ದಾರೆ. ಹಾಗಾಗಿ ಈ ರೀತಿ ಸುಳ್ಳು ಮಾಹಿತಿ ನೀಡಿ, ರೇಷನ್ ಕಾರ್ಡ್ ಹೊಂದಿರುವವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ.

ಅಂಥವರ ರೇಶನ್ ಕಾರ್ಡ್ ಅನ್ನು ರದ್ದು ಮಾಡುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದ್ದು, ಅದಕ್ಕಾಗಿ ಎಲ್ಲರ ರೇಶನ್ ಕಾರ್ಡ್ ಹಾಗೂ ಅದಕ್ಕೆ ಸಂಬಂಧಿಸಿದ ಪರಿಶೀಲನೆ ಕೆಲಸ ಕೂಡ ನಡೆಯುತ್ತಿದೆ. ಅರ್ಹತೆ ಇಲ್ಲದವರ ರೇಶನ್ ಕಾರ್ಡ್ ಗಳನ್ನು ಬಂದ್ ಮಾಡಲಿದ್ದು, ಈಗಾಗಲೇ ಹೊಸ ರೇಶನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರ ಅರ್ಜಿಗಳನ್ನು ಪರಿಶೀಲಿಸಿ, ಅವರುಗಳಿಗೆ ಆದಷ್ಟು ಬೇಗ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಹಾಗೆಯೇ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸರ್ಕಾರದಿಂದ ಮಾಹಿತಿ ಸಿಕ್ಕಿದೆ. ನಿಮ್ಮ ರೇಷನ್ ಕಾರ್ಡ್ ಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದುಕೊಳ್ಳಲು, ಮೊದಲಿಗೆ ನೀವು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಇಸರ್ವಿಸ್ ವಿಭಾಗದಲ್ಲಿ ಸ್ಟೇಟಸ್ ಚೆಕ್ ಮಾಡಬಹುದು.

Leave a Reply

Your email address will not be published. Required fields are marked *