ನಟ ಮತ್ತು ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಅವರು ಇಂದು, ಅಂದರೆ ಸೆಪ್ಟೆಂಬರ್ 24ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಗು ಜನಿಸಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಹೊಸ ಸದಸ್ಯನ ಆಗಮನದಿಂದ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ದಂಪತಿಗೆ ಗಂಡು ಮಗು ಜನನವಾಗಿದೆ.
ಈ ಮೂಲಕವಾಗಿ ತಾವು ತಾತ ಆಗಿರುವ ಸಂತೋಷದ ವಿಚಾರವನ್ನು ಹೆಚ್‍ಡಿಕೆ ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’ ಎಂದು ಹೇಳಿದ್ದಾರೆ. ಇನ್ನು, ಮಗನೊಂದಿಗೆ ಫೋಟೋವನ್ನು ಹಂಚಿಕೊಂಡಿರುವ ನಟ ನಿಖಿಲ್ ಕುಮಾರಸ್ವಾಮಿ ಅವರು, ‘ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ’ ಎಂದಿದ್ದಾರೆ. ಮಗನಿಗೆ ‘ಲವ್ ಯೂ ಮೈ ಸನ್’ ಎಂದು ಹೇಳಿದ್ದಾರೆ.
2020ರ ಏಪ್ರಿಲ್ 17ರಂದು ಲಾಕ್‍ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನ ಹಳ್ಳಿಯಲ್ಲಿರುವ ಫಾರ್ಮ್ ಹೌಸ್‍ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಇದೀಗ ಮುದ್ದಿನ ಸೊಸೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.
ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಕೆಲವು ದಿನಗಳ ಹಿಂದೆ ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಮಾನ್ವಿ ಕನ್ವೆನ್ಷನ್ ಹಾಲ್‍ನಲ್ಲಿ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೊರೊನಾ ಕಾರಣದಿಂದಾಗಿ ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ಮಗು ಆಗಮನದ ಬಗ್ಗೆ ಜೆಡಿಎಸ್ ಶಾಸಕ ಶರವಣ ಟ್ಟೀಟ್ ಮೂಲಕ ತಿಳಿಸಿದ್ದಾರೆ. ‘ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರಿಗೆ ಗಂಡು ಮಗು ಜನನವಾಗಿದೆ. ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಮರಿ-ಮೊಮ್ಮಗ ಆಗಮನ ಅತ್ಯಂತ ಸಂತೋಷ ತಂದಿರುವಂತಹ ವಿಷಯ.
ಶಿರಡಿ ಸಾಯಿಬಾಬನ ಅನುಗ್ರಹ ಮಗುವಿನ ಮೇಲಿರಲೆಂದು ಆಶಿಸುತ್ತೇನೆ ಎಂದು ಟ್ಟೀಟ್ ಮಾಡಿದ್ದಾರೆ. ನಿಖಲ್ ಕುಮಾರಸ್ವಾಮಿ ಮತ್ತು ರೇವತಿ ದಂಪತಿ ಮಗನನ್ನು ಬರಮಾಡಿಕೊಂಡಿದ್ದಾರೆ, ಸಹಜವಾಗಿಯೇ ಸೋಶಿಯಲ್ ಮೀಡಿಯಾದಲ್ಲಿ ದೇವೇಗೌಡರ ಕುಟುಂಬದ ಅಭಿಮಾನಿಗಳು ಸಂತಸ ಹಂಚಿಕೊಂಡಿದ್ದಾರೆ. ಮುದ್ದು ಮಗುವನ್ನು ಮುತ್ತಾತ ದೇವೇಗೌಡ ಎತ್ತಿ ಆಡಿಸಿದ್ದಾರೆ.
ಜುಲೈ ತಿಂಗಳಿನಲ್ಲಿ ಮಾಜಿ ಸಿಎಂ ನಿವಾಸಕ್ಕೆ ಅವಧೂತ ವಿನಯ್ ಗುರೂಜಿ ಭೇಟಿ ನೀಡಿದಾಗ ಮನೆಗೆ ಗಂಡು ಮಗುವಿನ ಆಗಮನ ಆಗುತ್ತದೆ. ನಿಖಿಲ್‌ಗೆ ಒಳ್ಳೆಯ ಯೋಗ ಬರುತ್ತದೆ ಎಂದು ಆಶೀರ್ವಾದ ಮಾಡಿದ್ದರು. ಅಂದು ವಿನಯ್ ಗುರೂಜಿ ಆಡಿದ ಮಾತು ಇಂದು ಸತ್ಯವಾಗಿದೆ.
ಮಗುವನ್ನು ಎತ್ತಿ ಮುದ್ದಾಡಿದ ತಾತ ಎಚ್‌ಡಿ ಕುಮಾರಸ್ವಾಮಿ ಮತ್ತು ಅಜ್ಜಿ ಅನಿತಾ ಕುಮಾರಸ್ವಾಮಿ. ಸಂಭ್ರಮವನ್ನು ಅಭಿಮಾನಿಗಳ ಜತೆ ಹಂಚಿಕೊಂಡಿದ್ದಾರೆ. ಮಗುವಿನ ಪೋಟೋ ರಿವೀಲ್ ಮಾಡಲಾಗಿದ್ದು ಅಭಿಮಾನಿಗಳು ಶೇರ್ ಮಾಡಿಕೊಂಡಿದ್ದಾರೆ. ನಿಖಿಲ್ ದಂಪತಿಗೆ ಶುಭಾಶಯ ಕೋರಿದ್ದಾರೆ. ದೇವೇಗೌಡರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ ಎಂದೇ ಹೇಳಬಹುದು.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430