ಕರ್ನಾಟಕ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್‌-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಪ್ರಸ್ತುತ ಸೇವೆಯಲ್ಲಿರುವ ಸಿಬ್ಬಂದಿಗಳಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಆದೇಶ ಹೊರಡಿಸಲಾಗಿದೆ. 

ಗ್ರಾಮ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್‌–2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ (ಎಸ್‌ಡಿಎಎ) ಹುದ್ದೆಗಳಿಗೆ ಗ್ರಾಮ ಪಂಚಾಯಿತಿ ನೌಕರರ ವೃಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ರಾಜ್ಯದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್‌-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿ ಆದೇಶ ಪ್ರಕಟಿಸಿದೆ. ಅಂದಹಾಗೆ ಈ ಹುದ್ದೆಗಳಿಗೆ ಪ್ರಸ್ತುತ ಸೇವೆಯಲ್ಲಿರುವ ಗ್ರಾಮ ಪಂಚಾಯಿತಿ ನೌಕರರ ವಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿರುವುದು. ಇದರಿಂದ ಗ್ರಾಮ ಪಂಚಾಯ್ತಿ ನೌಕರರಿಗೆ ಬಡ್ತಿ ಭಾಗ್ಯವು ದೊರೆಯಲಿದೆ. ಕೋವಿಡ್‌ ಕಾರಣದಿಂದ ನೇರ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿತ್ತು. ಇದೀಗ ತಡೆಯನ್ನು ತೆರವುಗೊಳಿಸಲಾಗಿದೆ.

ಆ ಮೂಲಕ, ಹಲವು ವರ್ಷಗಳಿಂದ ಪದೋನ್ನತಿಗೆ ಕಾಯುತ್ತಿರುವ ಗ್ರಾಮ ಪಂಚಾಯಿತಿಯ ವಿವಿಧ ವೃಂದಗಳ ಸಿಬ್ಬಂದಿಗೆ ಅನುಕೂಲ ಆಗಲಿದೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್‌–2) ಮತ್ತು ಎಸ್‌ಡಿಎಎ ಹುದ್ದೆಗಳಿಗೆ ಬಿಲ್‌ ಕಲೆಕ್ಟರ್‌, ಅಕೌಂಟೆಂಟ್‌, ಕ್ಲರ್ಕ್‌, ಟೈಪಿಸ್ಟ್‌, ಕ್ಲರ್ಕ್‌ ಕಂ ಡೇಟಾ ಎಂಟ್ರಿ ಆಪರೇಟರ್‌ ವೃಂದದ ಹುದ್ದೆಗಳಿಂದ ನೇರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ.

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್‌-2) ಒಟ್ಟು ಖಾಲಿ ಹುದ್ದೆಗಳು 1143 ಇದ್ದು ಗ್ರಾಮ ಪಂಚಾಯ್ತಿ ನೌಕರರಿಂದ 800 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ದ್ವಿತೀಯ ದರ್ಜೆ ಲೆಕ್ಕಸಹಾಯಕರ ಹುದ್ದೆಗಳ ಪೈಕಿ ಒಟ್ಟು 316 ಹುದ್ದೆಗಳು ಖಾಲಿ ಇದ್ದು ಗ್ರಾಮ ಪಂಚಾಯ್ತಿ ನೌಕರರಿಂದ 158 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಈ ರೀತಿಯ ನೇರ ನೇಮಕಾತಿಗೆ ಅವಕಾಶ ಕಲ್ಪಿಸಲು ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) (ವೃಂದ ಮತ್ತು ನೇಮಕಾತಿ) ನಿಯಮಗಳು 2008 ಕ್ಕೆ ತಿದ್ದುಪಡಿ ತರಬೇಕಾಗಿದೆ. ಆದರೆ ತಿದ್ದುಪಡಿಗೆ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ಅದರ ಬದಲು ಕಾರ್ಯಕಾರಿ ಆದೇಶದ ಮೂಲಕ ನೇಮಕಾತಿ ವಿಧಾನವನ್ನು ರೂಪಿಸಲಾಗಿದೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್‌–2) ವೃಂದದ ಶೇ 70ರಷ್ಟು ಹುದ್ದೆಗಳನ್ನು 3:2 ಅನುಪಾತದಲ್ಲಿ ನೇಮಕಾತಿಗೆ ಅವಕಾಶ ನೀಡಲಾಗಿದೆ.

ಅಂದರೆ, ಮೊದಲ ಮೂರು ಹುದ್ದೆಗಳನ್ನು ಬಿಲ್‌ ಕಲೆಕ್ಟರ್‌ ವೃಂದದ ನೌಕರರಿಂದ, ನಂತರ ಎರಡು ಹುದ್ದೆಗಳನ್ನು ಅಕೌಂಟೆಂಟ್‌, ಕ್ಲರ್ಕ್‌, ಟೈಪಿಸ್ಟ್‌, ಕಂ ಡೇಟಾ ಎಂಟ್ರಿ ಆಪರೇಟರ್‌ ವೃಂದದಿಂದ ನೇಮಕಾತಿ ಮಾಡಿಕೊಳ್ಳಬೇಕು. ಸಿಬ್ಬಂದಿಯ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ, ಮೀಸಲಾತಿ ನಿಯಮ ಅನ್ವಯ ಆಯ್ಕೆ ಪಟ್ಟಿ ಪ್ರಕಟಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉಳಿದ ಶೇ 30ರಷ್ಟು ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ನೇಮಕಾತಿ ಪ್ರಕ್ರಿಯೆ ಹೇಗೆ? ಎಂದು ನೋಡುವುದಾದರೆ, ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ ಆರು ವರ್ಷ ಕೆಲಸ ಮಾಡಿದ ಸಿಬ್ಬಂದಿ ನೇರ ನೇಮಕಾತಿಗೆ ಅರ್ಹತೆ ಪಡೆಯಲಿದ್ದಾರೆ. ಈ ರೀತಿ ಬಡ್ತಿಗೆ ಅರ್ಹತೆ ಪಡೆದವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯ 100 ಅಂಕಗಳ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ಶೇ 50ರಷ್ಟು ಹುದ್ದೆಗಳನ್ನು 1:1 ಅನುಪಾತದಲ್ಲಿ ನೇಮಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಅಂದರೆ, ಮೊದಲ ಖಾಲಿ ಹುದ್ದೆಯನ್ನು ಬಿಲ್‌ ಕಲೆಕ್ಟರ್‌ ವೃಂದಿಂದ, ಎರಡನೇ ಹುದ್ದೆಯನ್ನು ಅಕೌಂಟೆಂಟ್‌, ಕ್ಲರ್ಕ್‌, ಟೈಪಿಸ್ಟ್‌, ಕಂ ಡೇಟಾ ಎಂಟ್ರಿ ಆಪರೇಟರ್‌ ವೃಂದದಿಂದ ನೇಮಕಾತಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಉಳಿದ ಶೇ 50ರಷ್ಟು ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!