ಸತತವಾಗಿ 2ನೇ ದಿನವೂ ಪೆಟ್ರೋಲ್ ಡೀಸೆಲ್​ ದರ ಇಳಿಕೆ ಈಗ ಬೆಲೆ ಎಷ್ಟಿದೆ ನೋಡಿ

0 0

ಸತತವಾಗಿ 2ನೇ ದಿನವೂ ಡೀಸೆಲ್​ ದರ ಇಳಿಕೆ ಕಂಡಿದೆ. ಆಗಸ್ಟ್ 19, ಗುರವಾರ ಕೂಡಾ ಡೀಸೆಲ್​ ದರವನ್ನು 20 ಪೈಸೆ ಇಳಿಕೆ ಮಾಡಲಾಯಿತು. ಆ ನಂತರ ಡೀಸೆಲ್​ ದರದಲ್ಲಿ ಇಳಿಕೆ ಕಂಡು ಬಂದಿದೆ. ಆದರೆ ಪೆಟ್ರೋಲ್​ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡಿಲ್ಲ. ಸತತವಾಗಿ 33 ದಿನಗಳಿಂದ ಪೆಟ್ರೋಲ್​ ದರ ಸ್ಥಿರವಾಗಿಯೇ ಉಳಿದಿದೆ. ಇಂದು ಲೀಟರ್​ ಡೀಸೆಲ್​ ಬೆಲೆಯಲ್ಲಿ 20 ರಿಂದ 25 ಪೈಸೆ ಕಡಿತಗೊಳಿಸಲಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ ಪರಿಶೀಲಿಸಿ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ.

ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.84 ರೂಪಾಯಿ ಇದೆ. ಹಾಗೆಯೇ ಡೀಸೆಲ್ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಲೀಟರ್​ಗೆ 89.47 ರೂಪಾಯಿಗೆ ಇಳಿಕೆ ಆಗಿದೆ. ಅದೇ ರೀತಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್​ಗೆ 107.83 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 97.04 ರೂಪಾಯಿಗೆ ಇಳಿಕೆ ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಇದೆ. ಲೀಟರ್ ಡೀಸೆಲ್ ದರದಲ್ಲಿ 25 ಪೈಸೆ ಇಳಿಕೆ ಕಂಡು ಬಂದಿದ್ದು 89.67 ರೂಪಾಯಿಗೆ ಇಳಿಕೆಯಾಗಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 99.47 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 18 ಪೈಸೆ ಇಳಿಕೆ ಬಳಿಕ 94.02 ರೂಪಾಯಿಗೆ ಇಳಿಕೆಯಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 98.26 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.83 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 97.53 ರೂಪಾಯಿಗೆ ಇಳಿಕೆಯಾಗಿದೆ.

ಅದೇ ರೀತಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 94.86 ರೂಪಾಯಿಗೆ ಇಳಿಕೆ ಆಗಿದೆ. ಆತ್ಮೀಯ ಓದುಗರೇ ಬರಿ ಪೈಸೆಲೆಕ್ಕದಲ್ಲಿ ಪೆಟ್ರೋಲ್ ಡೀಸೆಲ್ ದರ ಕಡಿಮೆ ಆದ್ರೂ ಸಾಲದು ರೂಪಾಯಿ ಲೆಕ್ಕದಲ್ಲಿ ಇಳಿಕೆ ಕಾಣಬೇಕು ಅನ್ನೋದು ಸಾರ್ವಜನಿಕರ ಅಭಿಪ್ರಾಯವಾಗಿದೆ ಅದೇನೇ ಇರಲಿ ಆದಷ್ಟು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಮಟ್ಟದಲ್ಲಿ ಬೆಲೆ ಇಳಿಕೆಯಾಗಬೇಕಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.