ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ್ದರೆ, ಗ್ಯಾಸ್ ಮೇಲೆ 200 ರೂಪಾಯಿ ಸಬ್ಸಡಿ ಘೋಷಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ ಮಾಡಿದ ಕೇಂದ್ರ ಸರ್ಕಾರದ ಅಬಕಾರಿ ಸುಂಕ ಕಡಿತದಿಂದ ಪೆಟ್ರೋಲ್ ಬೆಲೆ 9.50 ರೂ ಇಳಿಕೆ ಮತ್ತು ಡೀಸೆಲ್ ಬೆಲೆ 7 ರೂ ಇಳಿಕೆ ಆಗಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಕೊನೆಗೂ ಕೇಂದ್ರ ಸರ್ಕಾರ ತುಸು ನೆಮ್ಮದಿಯ ಸುದ್ದಿ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿತ ಮಾಡಿದೆ. ಲೀಟರ್ ಪೆಟ್ರೋಲ್ ದರ 8 ರೂ ಮತ್ತು ಡೀಸೆಲ್ ದರ 6 ರೂ ಇಳಿಸಲಾಗಿದೆ. ಈ ಮಹತ್ವದ ಮಾಹಿತಿಯನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮೇ 22 ಶನಿವಾರ ತಿಳಿಸಿದ್ದಾರೆ. ಅಬಕಾರಿ ಸುಂಕ ಇಳಿಕೆ, ಹಣಕಾಸು ಸಚಿವೆ ಘೋಷಣೆ
ಗಗನಕ್ಕೇರಿದ ತೈಲ ಬೆಲೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಣದುಬ್ಬರ ಸರಿದೂಗಿಸಲು ಇದೀಗ ಕೇಂದ್ರ ಸರ್ಕಾರ ಅಬಕಾರಿ ಸುಂಕ ಇಳಿಕೆ ಮಾಡಿದೆ. ಪೆಟ್ರೋಲ್ ಮೇಲೆ 9.50 ರೂಪಾಯಿ ಹಾಗೂ ಡೀಸೆಲ್ ಬೆಲೆ 7 ರೂಪಾಯಿ ಇಳಿಕೆ ಮಾಡಲಾಗಿದೆ. ಈ ಕುರಿತು ಟ್ವಿಟರ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಬಿಜೆಪಿ ನಾಯಕರು ನಿರ್ಮಲಾ ಸೀತಾರಾಮನ್ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಜನರ ಧನಿಯಾಗಿರುವ ಕೇಂದ್ರ ಸರ್ಕಾರ ಇಂಧನ ಬೆಲೆ ಇಳಿಕೆ ಮಾಡುವ ಮೂಲಕ ಜನ ಸಾಮಾನ್ಯರಿಗೆ ನೆರವಾಗಿದೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.
ಏಪ್ರಿಲ್ ತಿಂಗಳಲ್ಲಿ ಹಣದುಬ್ಬರ ಕಳೆದ ಎಂಟು ವರ್ಷಗಳಲ್ಲಿಯೇ ಅತ್ಯಧಿಕ ಮಟ್ಟಕ್ಕೆ ಏರಿಕೆಯಾಗಿರುವ ನಡುವೆ, ಗ್ರಾಹಕರಿಗೆ ಕೊಂಚ ನಿರಾಳತೆ ನೀಡುವ ಗುರಿ ಹೊಂದಿದೆ. ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ನ ದೈನಂದಿನ ಬೆಲೆ ವಿವರ ಇಲ್ಲಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 111.09 ರೂಪಾಯಿ ಆಗಿತ್ತು. ಸುಂಕ ಇಳಿಕೆಯಿಂದ ಬೆಂಗಳೂರಿನಲ್ಲಿ 101.59 ರೂಪಾಯಿಗೆ ಪೆಟ್ರೋಲ್ ಲಭ್ಯವಾಗಲಿದೆ. ಇನ್ನು ಡೀಸೆಲ್ ಬೆಲೆ ಇಂದು 94.79 ರೂಪಾಯಿ ಆಗಿತ್ತು. ಸುಂಕ ಇಳಿಕೆ ಬಳಿಕ ನಗರದಲ್ಲಿ ಡೀಸೆಲ್ ಬೆಲೆ 87.79 ರೂಪಾಯಿಗೆ ಇಳಿಕೆಯಾಗಿದೆ.
ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಪೆಟ್ರೋಲ್ ಮೇಲಿನ 9.50 ರೂಪಾಯಿ ಹಾಗೂ ಡೀಸೆಲ್ ಮೇಲೆ 7 ರೂಪಾಯಿ ಕಡಿಮೆಯಾಗಿದೆ. ದೆಹಲಿಯಲ್ಲಿ 105.41 ರೂಪಾಯಿ ಆಗಿದ್ದ ಪೆಟ್ರೋಲ್ ಬೆಲೆ ಇದೀಗ 95.91 ರೂಪಾಯಿ ಆಗಿದೆ. 96.67 ರೂಪಾಯಿ ಆಗಿದ್ದ ಡೀಸೆಲ್ ಬೆಲೆ ಇದೀಗ 89.67 ರೂಪಾಯಿ ಆಗಿದೆ. ಇನ್ನು ಮುಂಬೈನಲ್ಲಿ ಸುಂಕ ಇಳಿಕೆ ಬಳಿಕ ಪೆಟ್ರೋಲ್ ಬೆಲೆ 111.01 ರೂಪಾಯಿ ಆಗಿದ್ದರೆ, ಡೀಸೆಲ್ ಬೆಲೆ 97.77 ರೂಪಾಯಿ ಆಗಿದೆ.
ಪೆಟ್ರೋಲ್ ಮಾತ್ರವಲ್ಲದೇ ಇತರೆ ವಸ್ತುಗಳ ಬೆಲೆ ಕೂಡ ಇಳಿಕೆಯಾಗಿದ್ದು ಈ ಬಗ್ಗೆ ಮಾಹಿತಿ ನೀಡಿದ ನಿರ್ಮಲಾ ಸೀತಾರಾಮನ್, ಸಿಮೆಂಟ್ ಲಭ್ಯತೆಯನ್ನು ಸುಧಾರಿಸಲು ಮತ್ತು ಸಿಮೆಂಟ್ ಬೆಲೆಯನ್ನು ಕಡಿಮೆ ಮಾಡಲು ಉತ್ತಮ ಲಾಜಿಸ್ಟಿಕ್ಸ್ ಮೂಲಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ನಮ್ಮ ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಹ ನಾವು ಕಡಿಮೆ ಮಾಡುತ್ತಿದ್ದೇವೆ.
ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲಾಗುವುದು. ಕೆಲವು ಉಕ್ಕಿನ ಉತ್ಪನ್ನಗಳ ಮೇಲೆ ರಫ್ತು ಸುಂಕವನ್ನು ವಿಧಿಸಲಾಗುವುದು ಎಂದು ಹೇಳಿದರು. ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡುವ ಮೂಲಕ ಜನಸಾಮನ್ಯರ ಕಲ್ಯಾಣಕ್ಕೆ ಬದ್ಧರಾಗಿದ್ದಾರೆಂದ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.