ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ದೀಪಾವಳಿಯ ಬಂಪರ್ ಕೊಡುಗೆ

0 2

ದೇಶದ ಜನತೆಗೆ ಸರ್ಕಾರ ದೀಪಾವಳಿ ಉಡುಗೊರೆ ಕೊಟ್ಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಆಗಲಿದೆ. ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂಪಾಯಿ ಕಡಿತ ಮಾಡಲಾಗಿದೆ. ಪೆಟ್ರೋಲ್ ಮೇಲೆ ಅಬಕಾರಿ ಸುಂಕ 5 ರೂಪಾಯಿ ಕಡಿತಗೊಳಿಸಲಾಗಿದೆ. ನವೆಂಬರ್ 3 ರ ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ ಆಗಲಿದೆ. ಅಬಕಾರಿ ಸುಂಕ ಕಡಿತದಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಆಗಿದೆ.

ಈ ಮೂಲಕ ಕೇಂದ್ರ ಸರ್ಕಾರ ಪೆಟ್ರೋಲ್​ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಮೂಲಕ ದೇಶದ ಜನತೆಗೆ ದೀಪಾವಳಿ ಉಡುಗೊರೆ​ ಕೊಟ್ಟಿದೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರವೂ ಸಹ ಪೆಟ್ರೋಲ್​, ಡಿಸೇಲ್ ಮೇಲಿನ ಸುಂಕ ಕಡಿತಸೊಳಿಸುವ ಮೂಲಕ ಜನಸಾಮಾನ್ಯರ ಮೇಲಿನ ಹೊರೆ ಕಡಿಮೆ ಮಾಡಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
 
ಸಿಎಂ  ಬೊಮ್ಮಾಯಿ ಅವರ ಸರ್ಕಾರ ಪೆಟ್ರೋಲ್​ ಡಿಸೇಲ್ ಬೆಲೆಯನ್ನು ಪ್ರತಿ ಲೀಟರ್‌ಗೆ ತಲಾ 7 ರೂಪಾಯಿಯಂತೆ ಕಡಿತಗೊಳಿಸಿದೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೇ ನವೆಂಬರ್ 03 ರಂದು ಮಾಹಿತಿ ನೀಡಿದ್ದು ರಾಜ್ಯ ಸರಕಾರದ ಈ ನಿರ್ದಾರ ನವೆಂಬರ್ 04ರ ಸಾಯಂಕಾಲದಿಂದ ಅನ್ವಯವಾಗಲಿದೆ ಎಂದು ಹೇಳಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಭಾರಿ ಹೊರೆಯಾಗಿತ್ತು. ದಿನಬಳಕೆಯ ವಸ್ತುಗಳ ದರವೂ ಹೆಚ್ಚಳವಾಗಿತ್ತು. ಇದೀಗ ದೀಪಾವಳಿಯ ಸಂದರ್ಭದಲ್ಲಿ ಇಂಧನ ದರ ಇಳಿಕೆ ಮಾಡಲಾಗಿದೆ. ನವೆಂಬರ್ 4 ರಿಂದಲೇ ಹೊಸ ದರ ಅನ್ವಯವಾಗಲಿದೆ.

ಪೆಟ್ರೋಲ್ ಮೇಲೆ 5 ರೂಪಾಯಿ ಹಾಗೂ ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕ ಕಡಿತಗೊಳಿಸಲಾಗಿದೆ. ಅದರಂತೆ ಇಂಧನ ದರ ಕೂಡ ಕಡಿಮೆ ಆಗಲಿದೆ ಎಂದು ಮಾಹಿತಿ ಲಭ್ಯವಾಗಿದೆ. ಇನ್ನು ಕೇಂದ್ರ ಸರ್ಕಾರ ಕೂಡ ಡೀಸೆಲ್ 10 ಹಾಗೂ ಪೆಟ್ರೋಲ್‌ ಮೇಲಿನ ಸುಂಕ 5ರೂ. ಕಡಿತ ಮಾಡಿದೆ. ಈ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸುಂಕ ಕಡಿತಗೊಳಿಸಿದ್ದರಿಂದ ಕರ್ನಾಟಕದಲ್ಲಿ ಪೆಟ್ರೋಲ್ 12 ಮತ್ತು ಡೀಸೆಲ್ 17 ರೂ ಕಡಿಮೆಯಾಗಲಿದೆ.

ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿತ ಹಿನ್ನೆಲೆ ಪೆಟ್ರೋಲ್, ಡೀಸೆಲ್ ಮೇಲೆ ವ್ಯಾಟ್ (VAT)​ ಕಡಿತಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಒತ್ತಾಯಿಸಿದ್ದಾರೆ. ಎಲ್ಲಾ ರಾಜ್ಯಗಳಿಗೆ ಇಂಧನದ ಮೇಲಿನ ವ್ಯಾಟ್ ಕಡಿತಗೊಳಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯ ಸರಕಾರದ ಈ ನಿರ್ದಾರ ಇಂದು ಅಂದರೆ ನವೆಂಬರ್ ನಾಲ್ಕರ ಸಾಯಂಕಾಲದಿಂದ ಅನ್ವಯವಾಗುವುದು.

ಇದು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ ಆಗಿರುತ್ತದೆ. ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಬೊಮ್ಮಾಯಿ ಅವರು, ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸಲ್ ಮೇಲೆ 10 ರೂಪಾಯಿ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ ಜನರಿಗೆ ದೀಪಾವಳಿಯ ಉಡುಗೊರೆ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಕಳೆದ ವರ್ಷ 19.98 ರೂಪಾಯಿಗಳಿಂದ 32.9 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಇದೀಗ ಅಬಕಾರಿ ಸುಂಕವನ್ನು ಮತ್ತೆ ಇಳಿಕೆ ಮಾಡಲಾಗಿದೆ. ಬಳಿಕ ಸತತವಾಗಿ ಇಂಧನ ದರ ಏರಿಕೆ, ಅಡುಗೆ ಅನಿಲ ದರ ಏರಿಕೆಯಿಂದ ಜನಜೀವನ ಸಂಕಷ್ಟಕ್ಕೀಡಾಗಿತ್ತು. ಇತ್ತೀಚೆಗಷ್ಟೇ ಎಲ್​ಪಿಜಿ ಸಿಲಿಂಡರ್ ದರದಲ್ಲಿ 266 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಜನರಿಗೆ ಕೊಂಚ ಸಮಾಧಾನ ತಂದಿದೆ.

ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರದ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2,100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌. ರಾಜ್ಯ ಸರ್ಕಾರದ ಈ ನಿರ್ಧಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್​ ಮಾಡಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಆಗಲಿದೆ. ಕೇಂದ್ರ ಸರ್ಕಾರ ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂಪಾಯಿ ಹಾಗೂ  ಪೆಟ್ರೋಲ್​ ಮೇಲೆ ಅಬಕಾರಿ ಸುಂಕ 5 ರೂಪಾಯಿ ಕಡಿತಗೊಳಿಸಿದೆ. ನವೆಂಬರ್ 3ರ ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ ಆಗಲಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಭಾರಿ ಹೊರೆಯಾಗಿತ್ತು. ದಿನಬಳಕೆಯ ವಸ್ತುಗಳ ದರವೂ ಹೆಚ್ಚಳವಾಗಿತ್ತು. ಇದೀಗ ದೀಪಾವಳಿಯ ಸಂದರ್ಭದಲ್ಲಿ ಇಂಧನ ದರ ಇಳಿಕೆ ಮಾಡಲಾಗಿದೆ. 

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.