ಪವರ್ ಸ್ಟಾರ್ ಎಂದು ಕನ್ನಡ ಚಿತ್ರರಂಗದಲ್ಲಿ ಅಂದರೆ ಸ್ಯಾಂಡಲ್ ವುಡ್ ನಲ್ಲಿ ಪುನೀತ್ ರಾಜಕುಮಾರ್ ಅವರನ್ನು ಕರೆಯಲಾಗುತ್ತದೆ. ಇವರು ತಮ್ಮ ತಂದೆಯ ಜೊತೆ ಚಿಕ್ಕ ವಯಸ್ಸಿನಲ್ಲಿ ಇರುವಾಗಲೇ ಹಲವಾರು ಸಿನೆಮಾಗಳಲ್ಲಿ ನಟಿಸಿದ್ದಾರೆ. ಇದರಿಂದ ಇವರಿಗೆ ನಟನೆ ಮಾಡುವ ಹವ್ಯಾಸ ಬೆಳೆಯಿತು. ಹಾಗಾಗಿ ಈಗ ತಮ್ಮ ಅದ್ಭುತವಾದ ನಟನೆ ಮತ್ತು ಡ್ಯಾನ್ಸ್ ಗಳಿಂದ ಪವರ್ ಸ್ಟಾರ್ ಎಂಬ ಬಿರುದನ್ನು ಪಡೆದಿದ್ದಾರೆ. ಹಾಗೆಯೇ ಇವರಿಗೆ ಅಶ್ವಿನಿ ಎಂಬ ಪತ್ನಿ ಇದ್ದಾರೆ. ಆದ್ದರಿಂದ ನಾವು ಇಲ್ಲಿ ಅವರ ಇತ್ತೀಚಿನ ಹುಟ್ಟು ಹಬ್ಬದ ಆಚರಣೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಪುನೀತ್ ರಾಜ್ಕುಮಾರ್ 17 ಮಾರ್ಚ್ 1975ರಂದು ಜನಿಸಿದರು. ಪುನೀತ್ ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ ಜನಿಸಿದರು. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ಆರು ವರ್ಷದವರಿದ್ದಾಗ, ಅವರ ಕುಟುಂಬ ಬೆಂಗಳೂರಿಗೆ ತೆರಳಿತು. ಅವರು ಹತ್ತು ವರ್ಷ ವಯಸ್ಸಿನ ತನಕ ಅವರ ತಂದೆ ಅವರನ್ನು ಮತ್ತು ಅವರ ಸಹೋದರಿ ಪೂರ್ಣಿಮಾರನ್ನು ಚಲನಚಿತ್ರದ ಸೆಟ್ಗೆ ಕರೆದುಕೊಂಡು ಹೋಗುತ್ತಿದ್ದರು. ಇವರು ಅಪ್ಪಟ ಭಾರತೀಯ ಚಿತ್ರನಟ ಎಂದು ಹೇಳಬಹುದು.
ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ 1980 ವಸಂತ ಗೀತದಲ್ಲಿ ನಟಿಸಿದ್ದಾರೆ. ನಂತರದಲ್ಲಿ ಭಾಗ್ಯದಾತ, ಚಲಿಸುವ ಮೋಡಗಳು, ಎರಡು ನಕ್ಷತ್ರಗಳು ಮತ್ತು ಬೆಟ್ಟದ ಹೂವು ಇವುಗಳಲ್ಲಿ ನಟಿಸಿದ್ದಾರೆ. ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು. ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು. ಪುನೀತ್ ಮೊದಲ ಪ್ರಮುಖ ಪಾತ್ರದಲ್ಲಿ 2002 ಅಪ್ಪು ರಲ್ಲಿ ಅಭಿನಯಿಸಿದರು. ಅವರ ಅಭಿ, ಆಕಾಶ್,ಅರಸ, ಮಿಲನ, ಜಾಕೀ, ಹುಡುಗರು, ಅಣ್ಣಾ ಬಾಂಡ್ ಮತ್ತು ಪವರ್ ಸೇರಿದಂತೆ ಇತರ ಯಶಸ್ವಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಹಾಗೆಯೇ ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕ ಕೂಡ ಆಗಿದ್ದಾರೆ. ಪ್ರಾಥಮಿಕವಾಗಿ ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ. ಅವರು ಪ್ರಸಿದ್ಧ ಟಿವಿ ಪ್ರದರ್ಶನ ಕನ್ನಡದ ಕೋಟ್ಯಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಮಾಡಿದ್ದಾರೆ. ಪುನೀತ್ ಡಿಸೆಂಬರ್ 1 ,1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು. ಇವರಿಗೆ ಇಬ್ಬರು ಪುತ್ರಿಯರಿದ್ದಾರೆ ದ್ರಿತಿ ಮತ್ತು ವಂದಿತಾ. ಇವರ ಮೊದಲ ಹೆಸರು ಮಾ.ಲೋಹಿತ್ ಆಗಿತ್ತು. ಇವರು ತಮ್ಮ ಹೆಂಡತಿ ಅಶ್ವಿನಿ ಅವರ ಹುಟ್ಟುಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಿಕೊಂಡಿದ್ದಾರೆ. ಹಲವಾರು ರೀತಿಯ ಕೇಕ್ ಗಳನ್ನು ಕಟ್ ಮಾಡಿ ಬಹಳ ಖುಷಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ.