ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಜಿಲ್ಲಾಡಳಿತದ ಕಡೆಯಿಂದ ದೊಡ್ಮನೆ ಹುಡುಗ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ರಾಯಭಾರಿಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನನ್ನೂರಿನ ಅಭಿವೃದ್ಧಿಗೆ ನಾನು ಸದಾ ಸಿದ್ಧ ಎಂಬ ಮಾತನ್ನು ಹೇಳಿದರು. ಅವರು ಯಾವ ಊರಿನ ಬಗ್ಗೆ ಈ ಮಾತನ್ನು ಹೇಳಿದ್ದಾರೆ? ಹಾಗೂ ಯಾತಕ್ಕಾಗಿ ಹೇಳಿದ್ದಾರೆ ಎನ್ನುವುದನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಪ್ರವಾಸೋದ್ಯಮದ ಕಡೆಯಿಂದ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಜಿಲ್ಲಾಡಳಿತ ನಾಲ್ಕು ನಿಮಿಷದ ವಿಡಿಯೋ ಒಂದನ್ನು ಸಿದ್ಧಪಡಿಸಿದೆ. ಈ ಒಂದು ವಿಡಿಯೋವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸುರೇಶ್ ಕುಮಾರ್ ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಆದರೆ ಇದರ ರಾಯಭಾರತ್ವವನ್ನೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ನೀಡಲಾಗಿತ್ತು. ಇದರ ಕುರಿತಾಗಿ ಪುನೀತ್ ರಾಜಕುಮಾರ್ ಅವರ ಬಳಿ ಮಾತನಾಡಿದಾಗ ಅವರು ಈ ರೀತಿಯಾಗಿ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ರಾಯಭಾರಿಯಾಗಲು ನಾನು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ ಎಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಹೇಳಿದ್ದಾರೆ.
ಇದೆ ಸಂದರ್ಭದಲ್ಲಿ ವಚ್ರ್ಯುವಲ್ ಮೂಲಕ ಕಾರ್ಯಕ್ರಮದಲ್ಲಿ ಮಾತನಾಡಿದ ಪುನೀತ್ ಚಾಮರಾಜನಗರದ ರಾಯಭಾರಿಯಾಗಲು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ. ನನ್ನ ತಂದೆಯ ಊರಾದ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ನಾನು ಸದಾ ಸಿದ್ಧ. ನಮ್ಮ ರಾಜ್ಯ , ನಮ್ಮ ದೇಶ ಚೆನ್ನಾಗಿ ಬೆಳೆಯಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಆಶಿಸಿದರು.
ಚಾಮರಾಜನಗರದ ಬಗ್ಗೆ ತಿಳಿದುಕೊಳ್ಳಲು ಹೆಚ್ಚು ಉತ್ಸುಕರಾಗಿದ್ದ ಪುನೀತ್ ರಾಜಕುಮಾರ್ ಅವರು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಕೈಜೋಡಿಸುತ್ತೇನೆ ಎಂದು ಹೇಳಿದ್ದಾರೆ. ಜಿಲ್ಲೆಯ ಸೌಂದರ್ಯವನ್ನು ಹೊರಭಾಗದ ಜನರಿಗೆ ತಲುಪಿಸಿ ಒಮ್ಮೆಯಾದರೂ ಭೇಟಿಕೊಡಬೇಕು ಎಂದನಿಸುವಂತೆ ಮಾಡಬೇಕು ಎಂದು ಹೇಳಿದ್ದಾರೆ. ಚಿತ್ರೀಕರಣ ಇಲ್ಲದಿದ್ದರೇ ನೇರವಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೆ ಎಂದು ತಿಳಿಸಿ ಕೊನೆಯಲ್ಲಿ ಇದೇ ವೇಳೆ ದೀಪಾವಳಿ ಹಬ್ಬದ ಶುಭಾಶಯವನ್ನೂ ಸಹ ಕೋರಿದ್ದರು.