ಪ್ರಜ್ವಲ್ ದೇವರಾಜ್ ಅವರ ಮನೆಯಲ್ಲಿ ಹಬ್ಬದ ಸಂಭ್ರಮ ಹೇಗಿತ್ತು ವಿಡಿಯೋ

0 0

ಕನ್ನಡ ಚಿತ್ರರಂಗದ ಹಿರಿಯ ನಟ ದೇವರಾಜ್ ಅವರು ಪ್ರತಿವರ್ಷ ತಮ್ಮ ಮನೆಯಲ್ಲಿ ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅದೇ ರೀತಿ ಈ ವರ್ಷ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ ಅದರ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ.

ಪ್ರಜ್ವಲ್ ದೇವರಾಜ್ ಅವರು ತಮ್ಮ ಕುಟುಂಬದವರೊಂದಿಗೆ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಿದರು. ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್, ತಂದೆ ಡೈನಾಮಿಕ್ ಸ್ಟಾರ್ ಎಂದೇ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡ ದೇವರಾಜ್, ತಾಯಿ ಚಂದ್ರಾ ದೇವರಾಜ್ ಮತ್ತು ಸಹೋದರ ಪ್ರಣವ್ ದೇವರಾಜ್ ಅವರೊಂದಿಗೆ ಮನೆಯಲ್ಲಿ ಸಡಗರದಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ವಿಶೇಷವೆಂದರೆ ಪ್ರಜ್ವಲ್ ದೇವರಾಜ್ ಹಾಗೂ ತಮ್ಮ ಪ್ರಣವ್ ದೇವರಾಜ್ ಇಬ್ಬರು ಅಣ್ಣ ತಮ್ಮ ಕಬ್ಬನ್ನು ತಿನ್ನುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದು ಚಿಕ್ಕ ವಯಸ್ಸಿನ ಕಬ್ಬು ತಿನ್ನುತ್ತಿರುವ ಫೋಟೋವನ್ನು ಸಹ ಸಾಮಾಜಿಕ ಜಾಲತಾಣದಲ್ಲಿ ನೋಡಬಹುದು. ಸುಗ್ಗಿ ಹಬ್ಬವನ್ನು ಇಡೀ ಕುಟುಂಬದವರು ಸೇರಿ ಬಹಳ ಖುಷಿಯಿಂದ ಆಚರಿಸುತ್ತಾರೆ. ಈ ಬಾರಿಯೂ ಸಂಕ್ರಾಂತಿ ಹಬ್ಬವನ್ನು ಬಹಳ ಸ್ಮರಣೀಯವಾಗಿ ಆಚರಿಸಿದ್ದಾರೆ.

ಪ್ರಜ್ವಲ್ ದೇವರಾಜ್ ಅವರ ಇನ್ಸ್ಪೆಕ್ಟರ್ ವಿಕ್ರಂ ಸಧ್ಯದಲ್ಲೇ ಬಿಡುಗಡೆ ಆಗಲಿದೆ. ಈಗ ರಚಿತಾ ರಾಮ್ ಅವರೊಂದಿಗೆ ವೀರಂ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ. ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್ ಅವರು ಜಾಹೀರಾತುಗಳಲ್ಲಿ ಬ್ಯೂಸಿಯಾಗಿದ್ದಾರೆ. ರಾಗಿಣಿ ಅವರು ಡ್ಯಾನ್ಸರ್ ಹಾಗೂ ಫಿಟ್ನೆಸ್ ಟ್ರೈನರ್ ಆಗಿದ್ದು ಪ್ರಜ್ವಲ್ ಹಾಗೂ ರಾಗಿಣಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಪ್ರಜ್ವಲ್ ದೇವರಾಜ್ ಅವರು ತಮ್ಮ ಕುಟುಂಬದವರ ಜೊತೆ ಸಂತೋಷವಾಗಿ ಇರಲಿ ಹಾಗೂ ಅವರ ಸಿನಿಮಾ ಹಿಟ್ ಆಗಲಿ ಎಂದು ಆಶಿಸೋಣ.

Leave A Reply

Your email address will not be published.