ಜಿಲ್ಲಾ ಬಾಲ ಭವನದಲ್ಲಿ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು ಪಿಯುಸಿ ಹಾಗೂ ಡಿಗ್ರೀ ಆದಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗಾದರೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ ಏನೂ? ಏನೆಲ್ಲಾ ದಾಖಲಾತಿಗಳು ಬೇಕು? ಅಭ್ಯರ್ಥಿಗಳ ವಯೋಮಿತಿ, ವೇತನ ಈ ಎಲ್ಲದರ ಕುರಿತಾಗಿ ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಜಿಲ್ಲಾ ಬಾಲ ಭವನದಲ್ಲಿ ಗೌರವಧನದ ಆಧಾರದ ಮೇಲೆ ಕಛೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೇರ ನೇಮಕಾತಿ ನಡೆಯುತ್ತಿದ್ದು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಇಬ್ಬರೂ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಈ ಹುದ್ದೆಗಳನ್ನು ಮೊದಲೇ ಹೇಳಿದ ಹಾಗೆ 11 ತಿಂಗಳ ಗೌರವ ಧನದ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಪಿಯುಸಿ ಮತ್ತು ಅದಕ್ಕೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ.
ಇನ್ನೂ ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆ ಹೇಗೆ ಎಂದು ನೋಡುವುದಾದರೆ, ನೇರವಾಗಿ ಸಂದರ್ಶನ ನಡೆಸಲಾಗುವುದು. ಸಂದರ್ಶನದಲ್ಲಿ ಅಭ್ಯರ್ಥಿಗಳು ಪಡೆದ ಅಂಕ, ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕ , ಅನುಭವ, ಕಂಪ್ಯೂಟರ್ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಅಂತಿಮವಾಗಿ 11 ತಿಂಗಳ ಕಾಲಾವಧಿಗೆ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಜನ್ಮದಿನಾಂಕದ ದೃಢೀಕರಣಕ್ಕಾಗಿ SSLC ಅಂಕಪಟ್ಟಿ , ಶಾಲಾ ವರ್ಗಾವಣೆ ಪತ್ರ, ಹುದ್ದೆಗೆ ನಿಗದಿ ಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿ, ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು ಇದೇ ಮೇ 16 ರಂದು ಸಾಯಂಕಾಲ 5.30 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ಈ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಮೇಲೆ ತಿಳಿಸಿದ ಎಲ್ಲಾ ದಾಖಲಾತಿಗಳ ಜೆರಾಕ್ಸ್ ಪ್ರತಿಯನ್ನು ನೀಡುವುದು ಅತ್ಯಗತ್ಯ.
ಇನ್ನೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂದು ನೋಡುವುದಾದರೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ತಾವೇ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಯಾವುದೆ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಕಲಬುರ್ಗಿ ಇವರನ್ನು ಸಂಪರ್ಕಿಸಬಹುದು. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮೇ ಒಂದರಿಂದ ಆರಂಭ ಆಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.