ಅಪ್ಪು ಇಲ್ಲದ 3 ದಿನಕ್ಕೆ ಪತ್ನಿ ಅಶ್ವಿನಿಯಿಂದ ದೊಡ್ಡ ನಿರ್ಧಾರ ಏನದು ನೋಡಿ

0 5

ವಿಧಿಯಾಟವನ್ನು ಯಾರಿಂದಲೂ ತಿಳಿಯಲು ಸಾಧ್ಯವೆ ಇಲ್ಲ ಎನ್ನುವುದಕ್ಕೆ ಪುನೀತ್ ರಾಜಕುಮಾರ್ ಅವರ ಸಾವು ನಿದರ್ಶನವಾಗಿದೆ. ಅಕ್ಟೋಬರ್ 29ರಂದು ಹೃದಯಾಘಾತದಿಂದ ಪುನೀತ್ ರಾಜಕುಮಾರ್ ಅವರು ನಿಧನರಾಗಿದ್ದು ಅಂತ್ಯಸಂಸ್ಕಾರ ನಡೆದ ನಂತರ ಪುನೀತ್ ಅವರ ಪತ್ನಿ ಹಾಗೂ ಪುತ್ರಿಯರು ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ನಿರ್ಧಾರದ ಬಗ್ಗೆ ಈ ಲೇಖನದಲ್ಲಿ ನೋಡೋಣ

ಅಕ್ಟೋಬರ್ 29ರಂದು ಹೃದಯಾಘಾತದಿಂದ ಸಾವನ್ನಪ್ಪಿದ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರವನ್ನು ಅಕ್ಟೋಬರ್ 31 ಭಾನುವಾರ ಬೆಳಗ್ಗೆ ಕಂಠೀರವ ಸ್ಟುಡಿಯೊ ಆವರಣದಲ್ಲಿ ಡಾಕ್ಟರ್ ರಾಜಕುಮಾರ್ ಹಾಗೂ ಪಾರ್ವತಮ್ಮ ರಾಜಕುಮಾರ್ ಅವರ ಸಮಾಧಿಯ ಪಕ್ಕದಲ್ಲಿ ಈಡಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ರಾಜಕುಮಾರ್ ಅವರ ಬಂಧುಗಳು ಗಣ್ಯರು ಭಾಗಿಯಾಗಿದ್ದರು.

ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಪಡೆಯಲು 25 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಆಗಮಿಸಿದ್ದರು. ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿವಿಧಾನಗಳನ್ನು ಪುನೀತ್ ರಾಜಕುಮಾರ್ ಅವರ ಸಹೋದರ ರಾಘವೇಂದ್ರ ರಾಜಕುಮಾರ್ ಅವರ ಪುತ್ರ ವಿನಯ್ ಅವರು ನೆರವೇರಿಸಿದರು.

ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಹಾಗೂ ಪುತ್ರಿಯರಾದ ವಂದನಾ ಮತ್ತು ಧೃತಿ ಒಬ್ಬರಿಗೊಬ್ಬರು ಕೈಹಿಡಿದುಕೊಂಡು ಕಣ್ಣೀರು ಹಾಕುತ್ತಿದ್ದರು. ಮತ್ತೊಂದು ಕಡೆ ಪುನೀತ್ ರಾಜಕುಮಾರ್ ಅವರ ಸಹೋದರ ಶಿವರಾಜ್ ಕುಮಾರ್ ಅವರ ದುಃಖವನ್ನು ನೋಡಲು ಸಾಧ್ಯವಾಗುತ್ತಿರಲಿಲ್ಲ. ಪೊಲೀಸ್ ಬ್ಯಾಂಡ್ ರಾಷ್ಟ್ರಗೀತೆ ನುಡಿಸಿ ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಈ ಕಾರ್ಯಕ್ಕೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಿ ಪುನೀತ್ ಅವರ ಪತ್ನಿ ಅಶ್ವಿನಿ ಹಾಗೂ ಪುತ್ರಿಯರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.

ಇಷ್ಟು ದಿನ ನಗುನಗುತ್ತಾ ಅನೇಕರಿಗೆ ಸಹಾಯ ಮಾಡಿದಂತಹ ಪುನೀತ್ ಅವರು ಇನ್ನಿಲ್ಲ ಎಂಬ ಸತ್ಯವನ್ನು ಅಭಿಮಾನಿಗಳಾದ ನಮಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ ಹೀಗಿರುವಾಗ ಅವರ ಪತ್ನಿ ಹಾಗೂ ಪುತ್ರಿಯರು ಬಹಳ ನೋವನ್ನು ಅನುಭವಿಸುತ್ತಿದ್ದಾರೆ ಇಂತಹ ದುಃಖದ ಸಮಯದಲ್ಲಿ ಅಶ್ವಿನಿ ಹಾಗೂ ಪುನೀತ್ ಅವರ ಮಕ್ಕಳು ಪುನೀತ್ ರಾಜಕುಮಾರ್ ಅವರು ನಡೆಸುತ್ತಿದ್ದ ಉದ್ಯಮಗಳನ್ನು ಯಾವುದೆ ತೊಂದರೆ ಇಲ್ಲದೆ ಮುಂದುವರಿಸಿಕೊಂಡು ಹೋಗುವ ನಿರ್ಧಾರವನ್ನು ಮಾಡಿದ್ದಾರೆ.

ಇಂತಹ ದುಃಖದ ಸಮಯದಲ್ಲಿ ಅವರು ದಿಟ್ಟತನದ ನಿರ್ಧಾರ ಮಾಡಿರುವುದು ಶ್ಲಾಘನೀಯವಾಗಿದೆ. ಹೊಸಬರಿಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿ ಕಲಾವಿದರು ಮುಂದೆ ಬರಲಿ ಎಂಬ ಉದ್ದೇಶದಿಂದ ಪುನೀತ್ ರಾಜಕುಮಾರ್ ಅವರು ಪ್ರಾರಂಭಿಸಿದ ಪಿಆರ್ ಕೆ ಪ್ರೊಡಕ್ಷನ್ ಅನ್ನು ಪತ್ನಿ ಅಶ್ವಿನಿ ಹಾಗೂ ಪುತ್ರಿಯರು ಮುಂದುವರಿಸಿಕೊಂಡು ಹೋಗುತ್ತಾರೆ ಎಂದು ತಿಳಿದುಬಂದಿದೆ.

ಪುನೀತ್ ರಾಜಕುಮಾರ್ ಅವರು ಪ್ರಾರಂಭಿಸಿದ ಯಾವುದೆ ಉದ್ಯಮ ನಿಲ್ಲಬಾರದು ಎಂದು ನಿರ್ಧಾರ ಮಾಡಿರುವುದು ಅಭಿಮಾನಿಗಳಿಗೆ ಸಂತಸ ನೀಡಿದೆ. ಪುನೀತ್ ರಾಜಕುಮಾರ್ ಅವರು ನಮ್ಮೊಂದಿಗೆ ಇಲ್ಲದೆ ಇರಬಹುದು ಆದರೆ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ. ಪುನೀತ್ ಅವರ ಪತ್ನಿ ಹಾಗೂ ಪುತ್ರಿಯರು ತೆಗೆದುಕೊಂಡ ನಿರ್ಧಾರಕ್ಕೆ ನಾವೆಲ್ಲರೂ ಬೆಂಬಲ ಸೂಚಿಸೋಣ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.