ಬಾಲ ಕಲಾವಿದನಾಗಿ ವೃತ್ತಿ ಆರಂಭಿಸಿದ ಪುನೀತ್ ತಂದೆ ಡಾ.ರಾಜ್‌ಕುಮಾರ್ ಅವರ ಜೊತೆ ಸಿನಿಮಾ ಚಿತ್ರೀಕರಣಕ್ಕೆ ಹೋಗುತ್ತಿದ್ದರು. ಅವರ ಜೊತೆಯೇ ಅನೇಕ ಸಿನಿಮಾಗಳಲ್ಲಿ ನಟಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಶಿವರಾಜ್‌ಕುಮಾರ್ ಮತ್ತು ರಾಘವೇಂದ್ರ ರಾಜ್‌ಕುಮಾರ್ ಅವರಿಗೂ ಮುನ್ನವೇ ಚಿತ್ರರಂಗಕ್ಕೆ ಕಾಲಿಟ್ಟ ಅಪ್ಪು ಈಗಲೂ ಸಿನಿಮಾ ವಿಚಾರದಲ್ಲಿ ಸಹೋದರರ ಸಲಹೆ ತೆಗೆದುಕೊಳ್ಳುತ್ತಿದ್ದರು. ‘Dont try to live in your charater,enact it’ ಎಂದು ಅಮೆರಿಕನ್ ಸಿನಿಮಾ ನಿರ್ದೇಶಕ ರಾಬರ್ಟ್‌ ಡಿ ನೋರ್ ಹೇಳುವ ಮಾತುಗಳನ್ನು ಪುನೀತ್ ಆಗಾಗ ಹೇಳುತ್ತಲೇ ಇದ್ದರು.

ನಟ ಪುನೀತ್ ರಾಜ್‌ಕುಮಾರ್ ಅವರು ಹುಟ್ಟಿನಿಂದಲೂ ಫೇಮಸ್. ಏಕೆಂದರೆ ನಟಸಾರ್ವಭೌಮ ಡಾ.ರಾಜ್‌ಕುಮಾರ್ ಅವರ ಪುತ್ರನಲ್ಲವೇ? ಈಗಾಗಲೇ ಸಿನಿಮಾದಲ್ಲಿ ಅವರು 44 ವರ್ಷಗಳನ್ನು ಪೂರೈಸಿದ್ದಾರೆ ಅಪ್ಪು. ಹಲವಾರು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ ಪುನೀತ್. ಆದರೆ ಅವರ ಹೆಣ್ಣುಮಕ್ಕಳ ಬಗ್ಗೆ ಕೆಲವರಿಗೆ ಗೊತ್ತಿರಲಿಕ್ಕಿಲ್ಲ. ಏಕೆಂದರೆ ಅವರು ವಿಶೇಷವಾಗಿ ಎಲ್ಲಿಯೂ ಕಾಣಿಸಿಕೊಳ್ಳೋದಿಲ್ಲ. ಈ ಲೇಖನದಲ್ಲಿ ನಾವು ಪುನೀತ್ ರಾಜಕುಮಾರ್ ಅವರ ಹೆಣ್ಣುಮಕ್ಕಳ ಬಗ್ಗೆ ನೋಡೋಣ.

ಪುನೀತ್​ ರಾಜ್​ಕುಮಾರ್​ ಹಾಗೂ ಅಶ್ವಿನಿ ಅವರದ್ದು ಪ್ರೇಮ ವಿವಾಹ. ಇಬ್ಬರೂ ಪ್ರೀತಿಸಿ ಮದುವೆ ಆಗಿದ್ದರು. ಪುನೀತ್​ಗೆ ಪತ್ನಿ ಮೇಲೆ ಅಪಾರ ಪ್ರೀತಿ ಇತ್ತು. ಆದರೆ, ಈಗ ಪತ್ನಿಯನ್ನು ಬಿಟ್ಟು ಅವರು ಬಾರದ ಲೋಕಕ್ಕೆ ತೆರಳಿದ್ದಾರೆ. ಇಡೀ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್​ ಪಕ್ಕಾ ಫ್ಯಾಮಿಲಿ ಮ್ಯಾನ್​. ಅಶ್ವಿನಿ ಬಗ್ಗೆ ಅವರು ಎಷ್ಟು ಪ್ರೀತಿ ಇಟ್ಟುಕೊಂಡಿದ್ದರು ಎಂಬುದು ಸಾಕಷ್ಟು ಬಾರಿ ಸಾಬೀತಾಗಿತ್ತು.

ಈ ಮುದ್ದಾದ ಜೋಡಿಗೆ ಇಬ್ಬರು ಹೆಣ್ಣು ಮಕ್ಕಳು ಧೃತಿ ಮತ್ತು ವಂದಿತ. ಹಠಾತ್ತಾಗಿ ಕಾಣಿಸಿಕೊಂಡ ಎದೆನೋವು ಮತ್ತು ತೀವ್ರ ಹೃದಯಾಘಾತದಿಂದಾಗಿ ೨೯ ಅಕ್ಟೋಬರ್ ೨೦೨೧ ರಂದು ಬೆಂಗಳೂರಿನ ವಿಕ್ರಮ ಆಸ್ಪತ್ರೆಯಲ್ಲಿ ನಿಧನರಾದ ವಿಷಯ ಎಲ್ಲರಿಗೂ ತಿಳಿದೇ ಇದೆ. ಡಾ.ರಾಜ್‌ಕುಮಾರ್ ಅವರ ಇಡೀ ಕುಟುಂಬ ನೇತ್ರದಾನ ಮಾಡುವುದಕ್ಕೆ ಹಲವು ವರ್ಷಗಳ ಹಿಂದೆಯೇ ಸಹಿ ಮಾಡಿದ್ದರು. ಅಣ್ಣಾವ್ರು ಕೂಡ ನೇತ್ರದಾನ ಮಾಡಿ ಇಬ್ಬರಿಗೆ ಬೆಳಕಾಗಿ ಹೋದರು.

ಹಾಗೆಯೇ ಪುನೀತ್ ಕೂಡ ನೇತ್ರದಾನ ಮಾಡಿದ್ದಾರೆ. ಅವರ ಕಣ್ಣಿನಿಂದ ನಾಲ್ಕು ಜನರಿಗೆ ಆಧುನಿಕ ಚಿಕಿತ್ಸಾ ವಿಧಾನವನ್ನು, ತಂತ್ರಜ್ಞಾನವನ್ನು ಅಳವಡಿಸಿಕೊಂಡು ನಾಲ್ಕು ಜನರಿಗೆ ಕಣ್ಣಿನ ಆಪರೇಶನ್ ಮಾಡಲಾಗಿದೆ. ಈ ಮೂಲಕ ಪುನೀತ್ ರಾಜಕುಮಾರ್ ಅವರು ತಮ್ಮ ಕೊನೆಯ ಘಳಿಗೆಯಲ್ಲಿ ಕೂಡಾ ನಾಲ್ಕು ಜನರ ಬಾಳಿನ ಬೆಳಕಾಗಿದ್ದಾರೆ.

ಪುನೀತ್ ರಾಜಕುಮಾರ್ ಅವರ ಮಕ್ಕಳ ವಿಷಯಕ್ಕೆ ಬರುವುದಾದರೆ, ಸಾಮಾನ್ಯವಾಗಿ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಅವರ ಮಕ್ಕಳು ಮೀಡಿಯಾ ಎದುರು ಕಾಣಿಸಿಕೊಳ್ಳುವುದು ಕಡಿಮೆ. ತಂದೆ ಪುನೀತ್ ರಾಜಕುಮಾರ್ ಅವರು ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿದ ರೀತಿಯಲ್ಲಿ ಅವರ ಹಿರಿಯ ಮಗಳು ಧೃತಿ ಕೂಡಾ ತಂದೆಯ ಹಾದಿಯಲ್ಲೇ ಸಾಗುತ್ತಿದ್ದಾರೆ ಅದೂ ಇಷ್ಟು ಚಿಕ್ಕ ವಯಸ್ಸಿನಲ್ಲಿ. ಕಳೆದ ವರ್ಷವಶ್ಟೆ ನೇತ್ರದಾನದ ವಿಚಾರವಾಗಿ ರೋಟರಿ ಕ್ಲಬ್‌ಗೆ ಪುನೀತ್ ರಾಜಕುಮಾರ್ ಅವರ ಹಿರಿಯ ಮಗಳು ಧೃತಿ ಬೆಂಬಲ ನೀಡಿದ್ದರು.

ಇನ್ನು ಕಿರಿಯ ಮಗಳು ವಂದಿತಾ 7ನೇ ತರಗತಿಯಲ್ಲಿ ಓದುತ್ತಿದ್ದಾರೆ. ಪುನೀತ್ ರಾಜಕುಮಾರ್ ಅವರ ನಿಧಾನವಾದ ಸಮಯದಲ್ಲಿ ಧೃತಿ ವಿದೇಶದಲ್ಲಿ ವ್ಯಾಸಂಗ ಮಾಡಲು ಹೋಗಿ ಕೇವಲ ಎರಡು ತಿಂಗಳುಗಳ ಆಗಿತ್ತು ಅಷ್ಟೇ. ತನ್ನ ಇಬ್ಬರು ಹೆಣ್ಣುಮಕ್ಕಳೆಂದರೆ ಪುನೀತ್ ಅವರಿಗೆ ಬಹಳ ಇಷ್ಟ ಆದರೆ ಅವರ ಮುಂದಿನ ಭವಿಷ್ಯವನ್ನು ಕಣ್ತುಂಬಿಕೊಳ್ಳಲು ಪುನೀತ್ ರಾಜಕುಮಾರ್ ಅವರು ಇಲ್ಲಾ ಎನ್ನುವುದು ವಿಷಾದದ ಸಂಗತಿ. ಈ ಕೆಳಗೆ ನೀವು ಪುನೀತ್ ರಾಜಕುಮಾರ್ ಅವರ ಮುದ್ದಾದ ಇಬ್ಬರು ಹೆಣ್ಣು ಮಕ್ಕಳನ್ನು ಕಾಣಬಹುದು. video Credit For Chandanavana

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!