ಇದೆ ಮೊಟ್ಟ ಮೊದಲ ಬಾರಿಗೆ ಪುನೀತ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರವೊಂದು ಸದ್ದಿಲ್ಲದೆ ತೆರೆಗೆ ಬರುವ ಸಿದ್ಧತೆಯಲ್ಲಿದೆ, ಅಷ್ಟಕ್ಕೂ ಆ ಸಿನಿಮಾ ಯಾವುದು ನೋಡಿ

movies
ನಿಮ್ಮ ಆತ್ಮೀಯರಿಗೂ ಶೇರ್ ಮಾಡಿ

ಮೊಟ್ಟ ಮೊದಲ ಬಾರಿಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರವೊಂದು ಸದ್ದಿಲ್ಲದೆ ತೆರೆಗೆ ಬರುವ ಸಿದ್ಧತೆ ನಡೆಸಿದೆ. ಪರ್ಸಾ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಹೆಸರು ಲಕ್ಕಿ ಮ್ಯಾನ್. ಇದರ ಚಿತ್ರೀಕರಣವೂ ಈಗಾಗಲೇ ಸಂಪೂರ್ಣಗೊಂಡಿದ್ದು ಸದ್ಯ ಸಾಧು ಕೋಕಿಲ ಅವರ ಸ್ಟುಡಿಯೋದಲ್ಲಿ ಮಾತಿನ ಡಬ್ಬಿಂಗ್ ಕಾರ್ಯ ನಡೆಯುತ್ತಿದೆ.

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಜತೆ ಪ್ರಭುದೇವ ಮತ್ತು ಡಾರ್ಲಿಂಗ್​ ಕೃಷ್ಣ ನಟಿಸಿರುವ ‘ಲಕ್ಕಿ ಮ್ಯಾನ್​’  ಚಿತ್ರದ ಚಿತ್ರೀಕರಣ​ ಕೂಡ ಮುಗಿದಿದ್ದು, ಇದೀಗ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಹೃದಯಾಘಾತದಿಂದ ಮೃತರಾಗುವುದಕ್ಕೂ ಮುನ್ನ ಅಪ್ಪು ಅವರು ಅನೇಕ ಚಿತ್ರಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ಆ ಚಿತ್ರಗಳು ಬಿಡುಗಡೆಯಾಗುವುದಕ್ಕೂ ಮೊದಲೇ ಅಪ್ಪು ಇಹಲೋಕ ತ್ಯಜಿಸಿದ್ದಾರೆ. ವಿಶೇಷವಾಗಿ ಪುನೀತ್ ಅಭಿನಯದ ಒಂದೆರಡು ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಆ ಪೈಕಿ ‘ ಜೇಮ್ಸ್​ ಸಿನಿಮಾ ರಿಲೀಸ್​ ಆಗುವುದು ಖಚಿತ ಎಂಬುದು ಈಗಾಗಲೇ ಗೊತ್ತಾಗಿದೆ.

ಅಷ್ಟೇ ಅಲ್ಲದೇ, ಅಪ್ಪು ಜೊತೆ ಪ್ರಭುದೇವ ಮತ್ತು ಡಾರ್ಲಿಂಗ್​ ಕೃಷ್ಣ ನಟಿಸಿರುವ ಲಕ್ಕಿಮ್ಯಾನ್​ ಚಿತ್ರದ ಚಿತ್ರೀಕರಣ​ ಕೂಡ ಮುಗಿದಿದ್ದು, ಇದೀಗ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ. ಡಬ್ಬಿಂಗ್​ ಮಾಡುತ್ತಿರುವ ಅನುಭವವನ್ನು ಡಾರ್ಲಿಂಗ್​ ಕೃಷ್ಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಸಮೇತ ಹಂಚಿಕೊಂಡಿದ್ದಾರೆ. ಈ ಬಗ್ಗೆ ಲಕ್ಕಿಮ್ಯಾನ್ ಸಿನಿಮಾಗೆ ಡಬ್ಬಿಂಗ್ ಶುರು ಮಾಡಿದೆ. ಈ ದೃಶ್ಯಕ್ಕೆ ಡಬ್ಬಿಂಗ್ ಮಾಡುವುದು ಅತ್ಯಂತ ಕಷ್ಟಕರವಾದ ಭಾಗವಾಗಿತ್ತು.

ಅಪ್ಪು ಸರ್ ಜೊತೆಗಿನ ಈ ಚಿತ್ರದ ಶೂಟಿಂಗ್ ತುಂಬಾ ವಿಶೇಷವಾಗಿತ್ತು ಮತ್ತು ಇದು ಎಂದೆಂದಿಗೂ ವಿಶೇಷವಾಗಿ ಉಳಿಯುತ್ತದೆ. ಎಂದು ಕ್ಯಾಪ್ಷನ್‌ ಬರೆದು ಜೊತೆಗೆ ಒಂದು ಸಣ್ಣ ವಿಡಿಯೋ ಕ್ಲಿಪ್‌ನ್ನು ಡಾರ್ಲಿಂಗ್ ಕೃಷ್ಣ ಪೋಸ್ಟ್ ಮಾಡಿದ್ದಾರೆ. ಲಕ್ಕಿಮ್ಯಾನ್​ ಚಿತ್ರದಲ್ಲಿ ಅಪ್ಪು ನಟನೆಯ ದೃಶ್ಯದ ತುಣುಕುಗಳು ಸೋಶಿಯಲ್​ ಮೀಡಿಯಾದಲ್ಲಿ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದ್ದು, ಇದನ್ನು ನೋಡಿ ನೆಟ್ಟಿಗರು ಭಾವುಕರಾಗಿದ್ದಾರೆ.

ಡಾರ್ಲಿಂಗ್ ಕೃಷ್ಣ ಸಾಲು ಸಾಲು ಚಿತ್ರಗಳಲ್ಲು ಬ್ಯುಸಿಯಾಗಿದ್ದು, ಇತ್ತೀಚೆಗೆ ದಿಲ್​ ಪಸಂದ್​ ಎಂಬ ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದು, ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಾಲಾಜಿ ಅವರ ಸಂಕಲನ, ಅಶ್ವಥ್ ಮಾರಿಮುತ್ತು ಅವರ ಕಥೆ, ಮಂಜು ಮಾಂಡವ್ಯ, ಸಂಪತ್ ಸಿರಿಮನೆ ಹಾಗೂ ರಘುನಂದನ್ ಕಾನಡ್ಕ(ಪುನೀತ್ ಪಾತ್ರಕ್ಕೆ) ಅವರ ಸಂಭಾಷಣೆ, ಶೃಂಗೇರಿ ಸುರೇಶ್ ಅವರ ಸಹನಿರ್ದೇಶನವಿದೆ.‌

ಮೋಹನ್ ಬಿಕೆ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ. ಬರುವ ಡಿಸೆಂಬರ್ ಅಥವಾ ಜನವರಿ ವೇಳೆಗೆ ಚಿತ್ರವನ್ನು ತೆರೆಗೆ ತರುವ ಯೋಜನೆ ಚಿತ್ರ ತಂಡಕ್ಕಿದೆ. ಚಿತ್ರದ ರೊಮ್ಯಾಂಟಿಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದ್ದು, ಕೃಷ್ಣ ಹಾಗೂ ನಿಶ್ವಿಕಾ ನಾಯ್ಡು ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ‌. ಚಿತ್ರಕ್ಕೆ ಶಿವ ತೇಜಸ್ ಆಕ್ಷನ್ ಕಟ್ ಹೇಳಿದ್ದಾರೆ. ಇದರ ಜೊತೆಗೆ ಕೃಷ್ಣ ಅಭಿನಯದ ಶುಗರ್ ಫ್ಯಾಕ್ಟರಿ, ಮಿಸ್ಟರ್ ಬ್ಯಾಚುಲರ್, ಲವ್ ಮಾಕ್ಟೇಲ್ 2 ಹಾಗೂ ಲವ್ ಮಿ ಆರ್ ಹೇಟ್ ಮಿ ಸಿನಿಮಾಗಳು ಅನೌನ್ಸ್ ಆಗಿ ಚಿತ್ರೀಕರಣದ ಹಂತದಲ್ಲಿವೆ.

ಪರ್ಸಾ ಪಿಕ್ಚರ್ಸ್ ಬ್ಯಾನರ್​ ಮೂಲಕ ನಿರ್ಮಾಣ ಆಗುತ್ತಿರುವ ಈ ಚಿತ್ರದ ಡಬ್ಬಿಂಗ್​ ಕೆಲಸಗಳು ಹಾಸ್ಯನಟ ಸಾಧು ಕೋಕಿಲ ಅವರ ಸ್ಟುಡಿಯೋದಲ್ಲಿ ನಡೆಯುತ್ತಿವೆ. ಲಕ್ಕಿಮ್ಯಾನ್​ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಹೀರೋ ಆಗಿದ್ದರೂ ಕೂಡ ಪುನೀತ್ ರಾಜ್​ಕುಮಾರ್‌ ಅವರ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ವಿಶೇಷವಾಗಿ ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಹಾಗೂ ಪ್ರಭುದೇವ ಅವರು ಹಾಡೊಂದರಲ್ಲಿ ಜೊತೆಯಾಗಿ ಡ್ಯಾನ್ಸ್ ಮಾಡಿದ್ದಾರೆ.

ಡಾ. ರಾಜ್​ಕುಮಾರ್ ಅವರ ಮೇಲೆ ಬರೆದ ಈ ಹಾಡಿನಲ್ಲಿ ಇದೇ ಮೊದಲ ಬಾರಿಗೆ ಇವರಿಬ್ಬರೂ ಒಟ್ಟಿಗೆ ತೆರೆ ಹಂಚಿಕೊಂಡಿರುವುದು ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡುವಂತಾಗಿದೆ. ಮೂಲತಃ ಮೈಸೂರಿನವರಾದ ಪ್ರಭುದೇವ ಕನ್ನಡದಲ್ಲಿ ಮೊದಲು ನಟಿಸಿದ್ದು ಉಪೇಂದ್ರ ಅವರ ಹೆಚ್2ಒ ಚಿತ್ರದಲ್ಲಿ.


ನಿಮ್ಮ ಆತ್ಮೀಯರಿಗೂ ಶೇರ್ ಮಾಡಿ

Leave a Reply

Your email address will not be published. Required fields are marked *