ರೈಲ್ವೆ ಇಲಾಖೆಯ 3093 ಹುದ್ದೆಗಳ ಬೃಹತ್ ನೇಮಕಾತಿ ಕುರಿತು ಇಲ್ಲಿದೆ ಮಾಹಿತಿ

0 1

ರೈಲ್ವೆ ಇಲಾಖೆಯಲ್ಲಿ ಒಟ್ಟು 3093 ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹೇಗೆ ಅರ್ಜಿ ಸಲ್ಲಿಸಬಬೇಕು? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ವೇತನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ಎಲ್ಲದರ ಬಗ್ಗೆ ವಿವರವಾಗಿ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಉತ್ತರ ರೈಲ್ವೆ ವಿಭಾಗದಲ್ಲಿ ಖಾಲಿ ಇರುವಂತಹ ಒಟ್ಟು 3093 ಅಪ್ರೆಂಟೈಸಸ್ ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಉತ್ತರ ರೈಲ್ವೆ ವಿಭಾಗದಲ್ಲಿ ಬರುವಂತಹ ವರ್ಕ್ ಶಾಪ್ ಯುನಿಟ್ಸ್ ಡಿವಿಷನ್ ಗಳಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಇಲ್ಲಿ ಪ್ರಮುಖ ದಿನಾಂಕಗಳನ್ನು ನೋಡುವುದಾದರೆ, ಅಧಿಸೂಚನೆಯನ್ನು ಹೊರಡಿಸಿದ ದಿನಾಂಕ 14/09/2021 ಆಗಿದ್ದು ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 20/09/2021 ಆಗಿದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20/10/2021 ಆಗಿರುತ್ತದೆ.

ಇನ್ನೂ ಅಭ್ಯರ್ಥಿಗಳ ವಿಧ್ಯಾಭ್ಯಾಸ ನೋಡುವುದಾದರೆ, ಹತ್ತನೇ ತರಗತಿ ಪಾಸ್ ಆಗಿರಬೇಕು, ITI ಮತ್ತು ಡಿಪ್ಲೊಮಾ ಮುಗಿಸಿದಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಆಯ್ಕೆ ಆದ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು. ಹಾಗೂ ಈ ತರಬೇತಿಯ ಅವಧಿಯಲ್ಲಿ ಪ್ರತೀ ತಿಂಗಳು ಹಣವನ್ನು ಸಹ ನೀಡಲಾಗುವುದು. ಇಲ್ಲಿ ಮುಖ್ಯವಾಗಿ ಗಮನಿಸಬೇಕಾದ ವಿಷಯ ಎಂದರೆ, ಇದು ಪರ್ಮನೆಂಟ್ ಆದ ಕೆಲಸ ಆಗಿರುವುದಿಲ್ಲ ಆದರೆ ಈ ತರಬೇತಿಯನ್ನು ಪಡೆದರೆ ಒಂದು ಸರ್ಟಿಫಿಕೇಟ್ ನೀಡಲಾಗುವುದು. ಈ ಸರ್ಟಿಫಿಕೇಟ್ ಇಟ್ಟುಕೊಂಡು ಬೇರೆ ಕಡೆ ಕೆಲಸಕ್ಕೆ ಪ್ರಯತ್ನಿಸಬಹುದು.

www.rrcnr.org.in ಈ ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.