ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಯಲ್ಲೋ ಅಲರ್ಟ್ ಎಚ್ಚರಿಕೆಯ ಮಟ್ಟವನ್ನು ಸಹ ನೀಡಲಾಗಿದೆ.

ಎಲ್ಲಿ ಮಳೆ ಹೆಚ್ಚಾಗಲಿದೆ?
ಕರ್ನಾಟಕದ ಈ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ, ಮಲೆನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಿದ್ದರೇ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಗದಗ, ಉಡುಪಿ, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಹಾಸನ, ಮೈಸೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಶನಿವಾರದಂದು ಕೊಡಗು, ಮೈಸೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಕಾರಣ, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲೂ ಎರಡು ದಿನ ಮಳೆಯಾಗಲಿದೆ. ಸಂಜೆ ಅಥವಾ ರಾತ್ರಿ ವೇಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!