ರೈತರಿಗೆ ಸಾಲ ಮನ್ನಾ ಮಾಡಿದರೆ ದೇಶ ಉನ್ನತ ಮಟ್ಟಕ್ಕೆ ಬೆಳೆಯುತ್ತದೆ. ರಾಜ್ಯದ ಸಹಕಾರಿ ಸಂಸ್ಥೆಗಳ ಮೂಲಕ ಸಾಲ (Loan) ಪಡೆದು 2023ರ ಡಿಸೆಂಬರ್ 31ಕ್ಕೆ ಸುಸ್ತಿ ಸಾಲ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲ (Agricultural Loan) ಗಳ ಅಸಲು ಪಾವತಿ ಮಾಡಿದರೆ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ( CM Siddaramaiah ) ಬಡ್ಡಿ ಮನ್ನಾ ಮಾಡುವ ಘೋಷಣೆ ಮಾಡಿದ್ದರು. ಇದೀಗ ಸರಕಾರ ಆ ಬಗ್ಗೆ ಕ್ರಮ ಕೈಗೊಂಡಿದೆ ಈ ಬಗ್ಗೆ ಆದೇಶ ಕೂಡ ನೀಡಿದೆ.

ರೈತರು ರಾಜ್ಯದ ಸಹಕಾರ ಸಂಘಗಳಾದ :- ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್’ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು 31/12/2023ಕ್ಕೆ ಸುಸ್ತಿ ಆಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು  29/02/2024ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿ ಮಾಡಿದರೆ. ಈ ಮೊತ್ತಕ್ಕೆ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡಲು ಮಂಜೂರಾತಿ ಕೊಡಲಾಗಿದೆ. ಹಾಗೂ ಕೆಲವು ಮಾನದಂಡಗಳನ್ನು ಕೂಡ ವಿಧಿಸಲಾಗಿದೆ.

ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರ ವಿಧಿಸಿರುವ ಮಾಡಿರುವ ಮಾನದಂಡಗಳು :-

  1. ಈ ಸೌಲಭ್ಯವು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು 31.12.2023ಕ್ಕೆ ಸುಸ್ತಿ ಆಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲ (Agricultural Loan) ಪಡೆದವರಿಗೆ ಮಾತ್ರ ಅನ್ವಯವಾಗುತ್ತದೆ.
  2. ಈ ಯೋಜನೆ ಕೃಷಿ ಬಿಟ್ಟು ಬೇರೆ ರೀತಿಯ ಸಾಲಗಳಿಗೆ ಅನ್ವಯವಾಗುವುದಿಲ್ಲ ಮತ್ತು ಮೇಲೆ ತಿಳಿಸಿರುವ ಸಂಸ್ಥೆಗಳನ್ನು ಹೊರತುಪಡಿಸಿ ಇತರ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಅನ್ವಯಿಸುವುದಿಲ್ಲ.
  3. ನಬಾರ್ಡ್‌ ( NABARD ) ಗುರುತಿಸಿದ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶುಸಂಗೋಪನೆ ಹಾಗೂ ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್ ಹಾಗೂ ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ.
  4. ರಾಜ್ಯ ಸರ್ಕಾರದ ಬಡ್ಡಿ ರಿಯಾಯತಿ ಬದ್ಧತೆಯ ಕೆಳಗೆ ನೀಡಿರುವ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.
  5. ಈ ಯೋಜನೆಯಲ್ಲಿ ಮರುಪಾವತಿ ಮಾಡುವ ಸಾಲಗಳಿಗೆ ಯಾವುದೇ ಸುಸ್ತಿ ಬಡ್ಡಿ, ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬಡ್ಡಿ, ವಸೂಲಿ ವೆಚ್ಚ ( Recovery Charges ) ಹಾಗೂ ಇತರೆ ವೆಚ್ಚಗಳನ್ನು ಸಹಕಾರ ಸಂಸ್ಥೆಗಳು ಕ್ಷೆಮು ನೀಡುವಂತೆ ಇಲ್ಲ.
  6. ಈ ಯೋಜನೆಯಲ್ಲಿ ತಗಲುವ ವೆಚ್ಚವನ್ನು ಸಹಕಾರ ಇಲಾಖೆಗೆ ಒದಗಿಸಿರುವ ಆಯವ್ಯಯದ ಸಾಮಾನ್ಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯನ್ನು ಲೆಕ್ಕ ಶೀರ್ಷಿಕೆಯಲ್ಲಿ ಭರಿಸಬೇಕು.
  7. ಈ ಯೋಜನೆಯ ಕೆಳಗೆ ಕ್ಷೇಮು ಬಿಲ್ಲುಗಳನ್ನು ಸಹಕಾರ ಸಂಘಗಳು ವಸೂಲಾತಿ ಅಂತಿಮ ದಿನಾಂಕದಿಂದ 45 ದಿನಗಳೊಳಗಾಗಿ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸಬೇಕು.
  8. ರೈತರು ಸುಸ್ತಿ ಸಾಲದ ಅಸಲು ಮೊತ್ತವನ್ನು ಮರುಪಾವತಿ ಮಾಡುವ ದಿನಾಂಕದವರೆಗೆ ಮಾತ್ರ ಬಡ್ಡಿ ಕ್ಷೇಮುಗಳಿಗೆ ಅವಕಾಶವಿರುತ್ತದೆ.
  9. ಯಾವುದೇ ಕಾರಣದಿಂದಾಗಿ ಕ್ಷೇಮು ಮೊತ್ತ ಬಿಡುಗಡೆಗೆ ಆಗುವ ವಿಳಂಬದ ಅವಧಿಗೆ ಯಾವುದೇ ಕ್ಷೇಮುಗಳಿಗೆ ಅವಕಾಶವಿರುವುದಿಲ್ಲ.
  10. ಪ್ಯಾಕ್ಸ್/ಲ್ಯಾಂಪ್ಸ್ ಸಹಕಾರ ಸಂಘಗಳು ಹಾಗೂ ಡಿಸಿಸಿ ಬ್ಯಾಂಕುಗಳ ಬಿಲ್ಲುಗಳನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌’ನ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿಗಳು ತಯಾರಿಸಿ ಸಹಕಾರ ಸಂಘಗಳ ಲೆಕ್ಕ ಪರಿಶೋಧನ ಜಂಟಿ / ಉಪ ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪ-ನಿಬಂಧಕರು.

ಇವರುಗಳ ಜಂಟಿ ದೃಢೀಕರಣದ ಜೊತೆಗೆ ಬಿಲ್ಲುಗಳನ್ನು ಬಿಡುಗಡೆಗೆ ವ್ಯವಸ್ಥಾಪಕ ನಿರ್ದೇಶಕರು, ಅಪೆಕ್ಸ್ ಬ್ಯಾಂಕ್ ಇವರ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸಬೇಕು.

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (ಪಿಕಾರ್ಡ್‌ )ಗಳ ಬಿಲ್ಲುಗಳನ್ನು ಜಿಲ್ಲಾ ವ್ಯವಸ್ಥಾಪಕರು ತಯಾರಿಸಿ ಸಹಕಾರ ಸಂಘಗಳ ಲೆಕ್ಕ ಪರಿಶೋಧನ ಜಂಟಿ / ಉಪ-ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪ-ನಿಬಂಧಕರು ಇವರುಗಳ ಜಂಟಿ ದೃಢೀಕರಣದ ಜೊತೆಗೆ ಎಂದು ತಿಳಿಸಿದ್ದಾರೆ. ರೈತರಿಗೆ ಸಾಲ ಮನ್ನಾ ಮಾಡಿದರೆ ಅವರಿಗೆ ಸಂಪೂರ್ಣ ತೊಂದರೆ ದೂರವಾಗುವುದಿಲ್ಲ. ಅವರ ಕೃಷಿ ಚಟುವಟಿಕೆಗೆ ನಿಯಮಿತ ಸಹಾಯ ಮಾಡಿದರೆ ಹೆಚ್ಚು ಜನ ಕೃಷಿ ಕಡೆ ಆಕರ್ಷರಾಗುವರು ಇಲ್ಲವೇ ರೈತಾಪಿ ವರ್ಗದ ಜನರಿಗೆ ಅನುಕೂಲ ಆಗುತ್ತದೆ.

By

Leave a Reply

Your email address will not be published. Required fields are marked *