ರಾಷ್ಟ್ರೀಯ ಅರೋಗ್ಯ ಅಭಿಯಾನ 3006 ಹುದ್ದೆಗಳ ಕುರಿತು ಇಲ್ಲಿದೆ ಮಾಹಿತಿ

0 1

NHM ಅಡಿ ಬೃಹತ್‌ ಉದ್ಯೋಗಾವಕಾಶ ನೀಡಲಾಗಿದ್ದು 3006 ಸಿಹೆಚ್‌ಒ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಅರ್ಜಿ ಸಲ್ಲಿಸಲು ಬೇಕಾದ ಮುಖ್ಯ ಮಾಹಿತಿಗಳನ್ನು ನಾವಿಲ್ಲಿ ನೋಡೋಣ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ನಾಟಕದಾದ್ಯಂತ ಹಲವು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ವತಿಯಿಂದ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅಗತ್ಯ ಮಾಹಿತಿಗಳನ್ನು ಇಲ್ಲಿ ನೋಡಬಹುದು. ಹುದ್ದೆಗಳನ್ನು ಭರ್ತಿ ಮಾಡಲಿರುವ ಜಿಲ್ಲೆಗಳು ಬೀದರ್, ಬಳ್ಳಾರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಿಗೆ, ಹಾವೇರಿ, ಕೋಲಾರ, ಬೆಳಗಾವಿ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ, ಉಡುಪಿ, ಚಿಕ್ಕಬಳ್ಳಾಪುರ, ಕೊಡಗು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಈ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ.

ಹುದ್ದೆಯ ಹೆಸರು:ಸಮುದಾಯ ಆರೋಗ್ಯ ಅಧಿಕಾರಿಗಳು (ಸಿಹೆಚ್‌ಒ), ಖಾಲಿ ಇರುವ ಒಟ್ಟೂ ಹುದ್ದೆಯ ಸಂಖ್ಯೆ:3006 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳವಿದ್ಯಾರ್ಹತೆ ನೋಡುವುದಾದರೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ / ಪೋಸ್ಟ್‌ ಬಿಎಸ್ಸಿ ನರ್ಸಿಂಗ್ ಜತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್‌ ಕೆಎನ್‌ಸಿ/ಐಎನ್‌ಸಿ ಅಲ್ಲಿ ನೋಂದಣಿ ಪಡೆದಿರಬೇಕು. ಹಾಗೆಯೇ ಇನ್ನೂ ಮಾಸಿಕ ಸಂಭಾವನೆ ಎಷ್ಟು? ಎಂದು ನೋಡುವುದಾದರೆ, 22,000 ರೂಪಾಯಿ ಜೊತೆಗೆ 8000 ರೂಪಾಯಿಯ ವರೆಗಿನ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಹೆಚ್ಚಿನ ಆಧ್ಯತೆಯುಳ್ಳ ಜಿಲ್ಲೆಗಳಲ್ಲಿ ಈ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ 24,200 ರೂಪಾಯಿ ನೀಡಲಾಗುತ್ತದೆ.

ಹಾಗೆಯೇ ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆ ಮತ್ತು ವಯೋಮಿತಿ ಇವುಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ http://www.karnataka.gov.in/hfw
ಹಾಗೆಯೇ ಪ್ರಮುಖ ದಿನಾಂಕಗಳನ್ನು ನೋಡುವುದಾದರೆ, ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 27/09/2021 ಆಗಿದೆ. ಅನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 18/10/2021 ರ ಸಂಜೆ 5 ಗಂಟೆವರೆಗೆ ಸಮಯವಿರುತ್ತದೆ. ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ 23/10/2021 ಆಗಿರುತ್ತದೆ. ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭ ದಿನಾಂಕ: 26/10/2021 ಆಗಿರುತ್ತದೆ. ಇವಿಷ್ಟು ಅಭ್ಯರ್ಥಿಗಳು ಗಮನಿಸಬೇಕಾದ ಮುಖ್ಯ ದಿನಾಂಕಗಳು.

ಅಭ್ಯರ್ಥಿಗಳು ಹೊಂದಿರಬೇಕಾದ ಇತರೆ ಅರ್ಹತೆಗಳು ಏನೂ? ಎಂದು ನೋಡುವುದಾದರೆ, ಅಭ್ಯರ್ಥಿಗಳು ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಿರಬೇಕು. ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿಯಲ್ಲಿ ಅಭ್ಯಸಿಸಿರಬೇಕು. ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು. ಇತರೆ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ ಗೆ ಭೇಟಿ ನೀಡಿ ಮಾಹಿತಿ ಪಡೆಯಿರಿ. http://www.karnataka.gov.in/hfw

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.