ರೈತರು ಬೆಳೆಗಳನ್ನು ಬೆಳೆಯುತ್ತಾರೆ ಆದರೆ ಅದಕ್ಕೆ ಬೆಂಬಲ ಬೆಲೆ ಸಿಗುವುದಿಲ್ಲ ಅಪಾರ ನಷ್ಟವನ್ನು ಅನುಭವಿಸಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಊಟಕ್ಕೆ ಕಷ್ಟಪಡುತ್ತಿರುವ ರೈತರ ಮನೆಗಳು ಅದೆಷ್ಟೋ ಇವೆ. ಕಲಬುರ್ಗಿ ಭಾಗದಲ್ಲಿರುವ ರೈತರ ಕಷ್ಟವನ್ನು ನಿವಾರಿಸಲು ಸರ್ಕಾರ ಹೊಸದಾಗಿ ಕ್ರಮಕೈಗೊಂಡಿದೆ ಅದರ ಬಗ್ಗೆ ಮಾಹಿತಿಗಳನ್ನು ಈ ಲೇಖನದಲ್ಲಿ ನೋಡೋಣ.
ರಾಜ್ಯ ಸರ್ಕಾರವು ಪಡಿತರ ಕಾರ್ಡ್ ಹೊಂದಿದವರಿಗೆ ಸಿಹಿಸುದ್ದಿಯನ್ನು ನೀಡಿದೆ. ಕಲಬುರ್ಗಿ ಭಾಗದಲ್ಲಿ ಹೆಚ್ಚಿನ ರೈತರು ಹಲವು ಬೆಳೆಗಳನ್ನು ಬೆಳೆಯುತ್ತಾರೆ. ಕಲಬುರ್ಗಿ ಭಾಗದಲ್ಲಿ ರೈತರು ಜೋಳ ಹೆಸರುಕಾಳು, ತೊಗರಿಬೇಳೆ ಮುಂತಾದ ಬೆಳೆಗಳನ್ನು ಬೆಳೆಯುತ್ತಾರೆ. ರೈತರು ಬೆಳೆದ ಬೆಳೆಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿಯ ಮೂಲಕ ವಿತರಿಸಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ಅವರು ಭರವಸೆ ನೀಡಿದ್ದಾರೆ.
ಕಲಬುರ್ಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅಷ್ಟೇ ಅಲ್ಲದೆ ಅವರು ದಕ್ಷಿಣ ಕರ್ನಾಟಕದ ಪ್ರಮುಖ ಬೆಳೆಯಾಗಿ ಬೆಳೆಯುತ್ತಿರುವ ರಾಗಿ ಧಾನ್ಯವನ್ನು ಪಡಿತರ ವಿತರಣೆಗೆ ಸೇರ್ಪಡೆ ಮಾಡಲಿದ್ದು ಇದೇ ಬರುವ ಎಪ್ರಿಲ್ 1 ರಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡಲು ಚಿಂತನೆ ನಡೆದಿದೆ ಎಂದು ಉಮೇಶ್ ವಿ. ಕತ್ತಿ ಅವರು ಹೇಳಿದರು. ಒಟ್ಟಿನಲ್ಲಿ ರೈತರು ಬೆಳೆದ ಬೆಳೆಗೆ ಹಣ ದೊರೆಯತ್ತದೆ ಹಾಗೂ ಅವಶ್ಯಕತೆ ಇರುವವರಿಗೆ ಧಾನ್ಯ ದೊರೆಯುವಂತೆ ಮಾಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರ ಜನ ಮೆಚ್ಚುಗೆಯನ್ನು ಗಳಿಸಿದೆ. ಸರ್ಕಾರದ ಈ ಯೋಜನೆಗೆ ನಾವೆಲ್ಲರೂ ಕೈ ಜೋಡಿಸೋಣ.