ಕ್ರೇಜಿ ಸ್ಟಾರ್ ರವಿಚಂದ್ರನ್ ಹುಟ್ಟು ಹಬ್ಬದ ಸಂಭ್ರಮ ಹೇಗಿತ್ತು ನೋಡಿ

0 1

ಕನ್ನಡ ಚಿತ್ರರಂಗದ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ. ಪ್ರೀತಿಯ ಬಗ್ಗೆ ತಮ್ಮ ಚಿತ್ರದಲ್ಲಿ ಮನಮೋಹಕವಾಗಿ ನಟಿಸಿ ಜನರ ಮನಸನ್ನು ಗೆದ್ದಿದ್ದಾರೆ. ರವಿಚಂದ್ರನ್ ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ನಿನ್ನೆ ರವಿಚಂದ್ರನ್ ಅವರು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ. ಅವರ ಬಗ್ಗೆ ಹಾಗೂ ಅವರ ಹುಟ್ಟುಹಬ್ಬದ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.

ಕನ್ನಡ ಚಿತ್ರರಂಗದ ಬಣ್ಣದ ಲೋಕದಲ್ಲಿ ಕನಸನ್ನು ಕಟ್ಟಿಕೊಂಡು ನನಸು ಮಾಡಿದ ಕನಸುಗಾರ ವಿ. ರವಿಚಂದ್ರನ್ ಅವರಿಗೆ ನಿನ್ನೆ 60ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ಅಭಿಮಾನಿಗಳು ಆಸೆಯನ್ನು ಹೊಂದಿದ್ದರು ಆದರೆ ಕೊರೋನ ಮಹಾಮಾರಿ ದೇಶದಾದ್ಯಂತ ಹರಡಿರುವುದರಿಂದ ರವಿಚಂದ್ರನ್ ಅವರು ತಮ್ಮ ಮನೆಯಲ್ಲಿ ಸರಳವಾಗಿ ಆಚರಿಸಿಕೊಂಡರು. ಅವರು ಮನೆಯಲ್ಲಿಯೇ ಕುಟುಂಬದವರೊಂದಿಗೆ ತಮ್ಮ ಮಕ್ಕಳಾದ ಮನೋರಂಜನ್, ವಿಕ್ರಂ, ಗೀತಾಂಜಲಿ, ಅಳಿಯ ಅಜಯ್, ಹೆಂಡತಿ ಸುಮತಿ ಹಾಗೂ ತಮ್ಮ ತಾಯಿಯವರೊಂದಿಗೆ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ರವಿಚಂದ್ರನ್ ಅವರ ಹುಟ್ಟುಹಬ್ಬದ ನಿಮಿತ್ತ ಸಿಎಂ ಗಿರಿರಾಜು ಅವರ ನಿರ್ದೇಶನದ ಕನ್ನಡಕ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಲಾಯಿತು.

ಈ ಚಿತ್ರ ನೈಜ ಘಟನೆಯನ್ನು ಆಧರಿಸಿದೆ, ಇದು ಸಾವಿರದ ಐದುನೂರ ಐವತ್ತರಲ್ಲಿ ನಡೆದ ಘಟನೆಯಾಗಿದೆ‌. ಈ ಚಿತ್ರದಲ್ಲಿ ರವಿಚಂದ್ರನ್ ಅವರು ಕನ್ನಡದ ವಿದ್ವಾಂಸರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.‌ ರವಿಚಂದ್ರನ್ ಅವರ ಹುಟ್ಟುಹಬ್ಬಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಉಪೇಂದ್ರ, ಕಿಚ್ಚ ಸುದೀಪ್, ರಾಕಿಂಗ್ ಸ್ಟಾರ್ ಯಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ರವಿಚಂದ್ರನ್ ಅವರಿಗೆ ಶುಭಕೋರಿದ್ದಾರೆ ಅಲ್ಲದೆ ಚಿತ್ರರಂಗದ ಅನೇಕ ಕಲಾವಿದರು ರವಿಚಂದ್ರನ್ ಅವರೊಂದಿಗಿನ ತಮ್ಮ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ರವಿಚಂದ್ರನ್ ಅವರು ಮೇ 30, 1961 ರಂದು ಬೆಂಗಳೂರಿನಲ್ಲಿ ಜನಿಸಿದರು. ಇವರ ತಂದೆಯ ಹೆಸರು ಎನ್ ವೀರಸ್ವಾಮಿ ಇವರು ಕೂಡ ಸಿನಿಮಾ ನಿರ್ಮಾಪಕರು ಮತ್ತು ವಿತರಕರು ಆಗಿದ್ದರು. ರವಿಚಂದ್ರನ್ ಅವರು ಸುಮತಿ ಎನ್ನುವವರನ್ನು ಮದುವೆಯಾಗಿದ್ದಾರೆ. ಇವರಿಗೆ ಮೂವರು ಮಕ್ಕಳಿದ್ದಾರೆ ಮನೋರಂಜನ್ ವಿಕ್ರಂ ಹಾಗೂ ಗೀತಾಂಜಲಿ. ಇವರ ಮೊದಲ ಚಿತ್ರ ಖದೀಮ ಕಳ್ಳರು. ಇವರು ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ 25 ರಾಜ್ಯ ಪ್ರಶಸ್ತಿಗಳು ಇವರಿಗೆ ಲಭಿಸಿದೆ. ಇವರು ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ, ಮ್ಯೂಸಿಕ್ ಕಂಪೋಸರ್ ಆಗಿ ಕೆಲಸ ಮಾಡಿದ್ದಾರೆ. ಅವರ ಮಕ್ಕಳಾದ ಮನೋರಂಜನ್ ಮತ್ತು ವಿಕ್ರಂ ಅವರು ಕೂಡ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ರವಿಚಂದ್ರನ್ ಅವರು ಪ್ರೇಮಲೋಕ, ರಣಧೀರ, ಪ್ರಳಯಾಂತಕ, ನಾನು ನನ್ನ ಹೆಂಡತಿ, ಪಿತಾಮಹ, ಯುದ್ದಕಾಂಡ, ಅಂಜದ ಗಂಡು, ನಂಜುಂಡಿ, ಕುರುಕ್ಷೇತ್ರ ಹೀಗೆ ನೂರಕ್ಕಿಂತ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸ್ಟಾರ್ ನಟಿಯರೊಂದಿಗೆ ರವಿಚಂದ್ರನ್ ಅವರು ನಟಿಸಿದ್ದಾರೆ. ಅವರಿಗೆ ಹಾಗೂ ಅವರ ಕುಟುಂಬದವರಿಗೆ ದೇವರು ಆಯಸ್ಸು, ಆರೋಗ್ಯ ಕೊಡಲಿ ಎಂದು ಆಶಿಸೋಣ.

Leave A Reply

Your email address will not be published.