ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸರ್ಕಾರ ಅಧಿಸೂಚನೆ ನೀಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾರ್ಚ್ 9ರಿಂದ ಶುರುವಾಗಲಿದ್ದು, ಏಪ್ರಿಲ್ 8 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಆಗಿರುತ್ತದೆ. ರೈಲ್ವೆ ಇಲಾಖೆಯ ಅಧಿಕೃತ rrb ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಮಾರ್ಚ್ 9ರಂದು ಈ ಬಗ್ಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ. ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿಕೊಡುತ್ತೇವೆ ನೋಡಿ…

ಹುದ್ದೆಯ ವಿವರ:
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1100 ಟೆಕ್ನಿಶಿಯನ್ ಗ್ರೇಡ್ 1 ಹುದ್ದೆಗಳು, 7900 ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗಳನ್ನು ಭರ್ತಿ ಮಾಡುವುದು ಈ ನೇಮಕಾತಿಯ ಮುಖ್ಯ ಉದ್ದೇಶ ಆಗಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ:
https://www.recruitmentrrb.in ಈ ವೆಬ್ಸೈಟ್ ಗೆ ಮೊದಲು ಭೇಟಿ ನೀಡಿ, ಇಲ್ಲಿ ಆನ್ಲೈನ್ ಅರ್ಜಿ ಸಲ್ಲಿಕೆ ಆಯ್ಕೆಯನ್ನು ಸೆಲೆಕ್ಟ್ ಮಾಡಿ. ಇಲ್ಲಿ ಲಾಗಿನ್ ಅಥವಾ ಸೈನ್ ಅಪ್ ಮಾಡಬೇಕು. ಬಳಿಕ ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಫಿಲ್ ಮಾಡಿ. ಕೆಲಸ ಮಾಡಿದ ಅನುಭವ ಇದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳು, ಹಾಗೂ ಇನ್ನಿತರ ಎಲ್ಲಾ ದಾಖಲೆಗಳನ್ನು, ಫೋಟೋ ಅನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ. ಎಲ್ಲ ಪ್ರೊಸಿಜರ್ ಮುಗಿಸಿದ ನಂತರ ಅಪ್ಲಿಕೇಶನ್ ಸಬ್ಮಿಟ್ ಮಾಡಿ, ನಂತರ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ವಯೋಮಿತಿ:
ಟೆಕ್ನಿಶಿಯನ್ ಗ್ರೇಡ್ 1 ಹುದ್ದೆ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 36 ವರ್ಷಗಳ ಒಳಗಿರಬೇಕು.
ಟೆಕ್ನಿಶಿಯನ್ ಗ್ರೇಡ್ 3 ಹುದ್ದೆ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 33 ವರ್ಷಗಳ ಒಳಗಿರಬೇಕು.

ಅರ್ಜಿ ಶುಲ್ಕ:
SC/ST, ಮಾಜಿ ಸೈನಿಕರು, ಅಂಗವಿಕಲರು, ಮಹಿಳೆಯರು, ತೃತೀಯ ಲಿಂಗಿಗಳು, ಅಲ್ಪಸಂಖ್ಯಾತರು, ಬಡವರು, ಇವರಿಗೆಲ್ಲಾ 250 ರೂಪಾಯಿ ಅರ್ಜಿ ಶುಲ್ಕ ಇರುತ್ತದೆ.
ಬೇರೆ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ಇರುತ್ತದೆ.

Leave a Reply

Your email address will not be published. Required fields are marked *