ನಿರುದ್ಯೋಗ ಸಮಸ್ಯೆ ಬಹಳ ವರ್ಷಗಳಿಂದ ನಮ್ಮ ದೇಶವನ್ನು ಕಿತ್ತು ತಿನ್ನುತ್ತಿದೆ. ಇದೀಗ ಹೊಸದಾಗಿ ಕೊರೋನ ವೈರಸ್ ಕಾಣಿಸಿಕೊಂಡಿದ್ದು ಬಹಳಷ್ಟು ಜನರನ್ನು ಉದ್ಯೋಗದಿಂದ ತೆಗೆದುಹಾಕಲಾಯಿತು, ಹೊಸ ಉದ್ಯೋಗಗಳ ಸೃಷ್ಟಿಯ ಕೊರತೆಯಿಂದ ಉದ್ಯೋಗ ಸಿಗದೆ ಪರದಾಡಬೇಕಾಗಿದೆ.
ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ಖಾಲಿ ಇರುವ ಉದ್ಯೋಗದ ಬಗ್ಗೆ ಪ್ರಕಟಣೆ ಬಂದಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಬಿಡುಗಡೆಯಾದ ಪ್ರಕಟಣೆಯ ಬಗ್ಗೆ ಹಾಗೂ 2017ರಲ್ಲಿ ಹೊರಡಿಸಿದ ಅಧಿಸೂಚನೆಯ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದು ಅದರ ಬಗ್ಗೆಯೂ ಕೆಲವು ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.
ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 1529 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಮೊದಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ತಾಂತ್ರಿಕ ಕಾರಣದಿಂದ ವಿಳಂಬವಾಗಿತ್ತು. ಕರ್ನಾಟಕ ರಾಜ್ಯದ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರಿಷತ್ ನಲ್ಲಿ ಕಾಂಗ್ರೆಸ್ ನ ಕೆ ಗೋವಿಂದರಾಜು ಪರವಾಗಿ ಎಂ ನಾರಾಯಣ ಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಲಾಖೆ 2,781 ಹುದ್ದೆಗಳು ಮಂಜೂರಾಗಿದ್ದು 1,252 ಜನರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದೆ.
ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಮುಂಬಡ್ತಿ ನೀಡಲು ಸಾಧ್ಯವಾಗಿಲ್ಲ ಹಾಗೆಯೆ ರಾಜ್ಯದಲ್ಲಿ 15 ಚೆಕ್ ಪೋಸ್ಟ್ ಗಳಿಂದ 29 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ. ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲಿಯೆ ರವಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಶೀಘ್ರದಲ್ಲಿಯೆ ಖಾಲಿ ಇರುವ ಹುದ್ದೆಗಳಿಗೆ ಯಾವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಇನ್ನಿತರ ಮಾಹಿತಿಗಳು ತಿಳಿಯುತ್ತದೆ.
ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಹೊರಡಿಸಿದ್ದು 25 /11/2017 ರಲ್ಲಿ ಅಧಿಸೂಚಿಸಲಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ನಿಲಯ ಮೇಲ್ವಿಚಾರಕರು ಅಥವಾ ವಾರ್ಡನ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು. ವಾರ್ಡನ್ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಇದೀಗ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಆಯ್ಕೆ ಪಟ್ಟಿಯ ಬಗ್ಗೆ ಯಾರಿಗಾದರೂ ಆಕ್ಷೇಪಣೆ ಇದ್ದಲ್ಲಿ ಆಯ್ಕೆ ಪಟ್ಟಿ ಬಿಡುಗಡೆಯಾದ ದಿನಾಂಕದಿಂದ 7 ದಿನಗಳ ಒಳಗಾಗಿ ಕಾರ್ಯದರ್ಶಿ ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಸೌಧ ಬೆಂಗಳೂರು ಇವರಿಗೆ ಆಕ್ಷೇಪಣೆ ಸಲ್ಲಿಸಬಹುದು. ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್ ಗೆ ಹೋಗಿ ಆಯ್ಕೆಪಟ್ಟಿಯನ್ನು ನೋಡಬಹುದು. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ಉದ್ಯೋಗ ಹುಡುಕುವವರು ಈ ಮಾಹಿತಿಯ ಪ್ರಯೋಜನವನ್ನು ಪಡೆಯಿರಿ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430