ಇಂದಿನ ಕಾಲದಲ್ಲಿ ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಅವರಿಗೆ ಶಿಕ್ಷಣ ಕೊಡಿಸಿ ಅವರನ್ನೆ ಆಸ್ತಿಯನ್ನಾಗಿ ಮಾಡಬೇಕು ಎಂಬ ಮಾತು ಕೇಳಿಬರುತ್ತಿದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹಾಗಾದರೆ ಈ ಪ್ರೋತ್ಸಾಹ ಧನ ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸುವುದು ಹಾಗೂ ಅರ್ಹತೆಗಳೇನು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ
2024 ನೆ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು ಉನ್ನತ ವಿದ್ಯಾಭ್ಯಾಸ ಪಡೆದುಕೊಳ್ಳಲು ಬಯಸುವವರಿಗೆ ಒಂದು ಒಳ್ಳೆಯ ಸುದ್ದಿಯಿದೆ. ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ 20,000 ರೂಪಾಯಿ ಹಣ ನೀಡಲಾಗುತ್ತದೆ. ಈ ಪ್ರೋತ್ಸಾಹ ಧನದ ಪ್ರಯೋಜನ ಪಡೆದು ಉನ್ನತ ವಿದ್ಯಾಭ್ಯಾಸವನ್ನು ಪಡೆದುಕೊಳ್ಳಬಹುದು. ಈ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಸಲ್ಲಿಸಬೇಕು ಹಾಗೂ ಕೆಲವು ಅರ್ಹತೆಯನ್ನು ಹೊಂದಿರಬೇಕು. ಈ ಪ್ರೋತ್ಸಾಹ ಧನವನ್ನು ವಿಶೇಷವಾಗಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವ ಎಸ್ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. 2024ರಲ್ಲಿ ದ್ವಿತೀಯ ಪಿಯುಸಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಸಿಗುತ್ತದೆ, ಮೊದಲ ಬಾರಿಯೆ ಫಸ್ಟ್ ಕ್ಲಾಸ್ ನಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಸಿಗುತ್ತದೆ.
ಪೂರಕ ಪರೀಕ್ಷೆ ಬರೆದು ಪಾಸ್ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುವುದಿಲ್ಲ. ಸಮಾಜಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಕಲ್ಯಾಣ ಇಲಾಖೆಯ ವತಿಯಿಂದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 20000 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಪ್ರೋತ್ಸಾಹ ಧನ ಪಡೆಯಲು ಕೆಲವು ದಾಖಲೆಗಳು ಅವಶ್ಯವಾಗಿವೆ ಅವುಗಳೆಂದರೆ ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರ ಎಸ್ಸಿ ಎಸ್ಟಿ ಸರ್ಟಿಫಿಕೇಟ್, ಆದಾಯ ಪ್ರಮಾಣ ಪತ್ರ, ಹತ್ತನೆ ತರಗತಿಯ ಮಾರ್ಕ್ಸ್ ಕಾರ್ಡ್, ಪಿಯುಸಿ ಮಾರ್ಕ್ಸ್ ಕಾರ್ಡ್, ಬ್ಯಾಂಕ್ ಖಾತೆಯ ವಿವರ, ಮೊಬೈಲ್ ಸಂಖ್ಯೆ ಬೇಕಾಗುತ್ತದೆ. ಪ್ರೋತ್ಸಾಹ ಧನ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸದ್ಯದಲ್ಲೆ ಆರಂಭವಾಗಲಿದೆ ವಿದ್ಯಾರ್ಥಿಗಳು ಎಲ್ಲ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಿ. ಪ್ರೋತ್ಸಾಹ ಧನ ಪಡೆಯಲು ಅರ್ಜಿ ಸಲ್ಲಿಸುವ ದಿನಾಂಕವನ್ನು ಸದ್ಯದಲ್ಲಿಯೆ ಪ್ರಕಟಿಸಲಾಗುವುದು.
ಪ್ರೋತ್ಸಾಹ ಧನವನ್ನು ಎಸ್ಸಿ ಎಸ್ಟಿ ವಿದ್ಯಾರ್ಥಿಗಳು ಮಾತ್ರ ಪಡೆಯಬಹುದಾಗಿದೆ ಉಳಿದ ಯಾವುದೆ ಜಾತಿಯ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನ ಸಿಗುವುದಿಲ್ಲ. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಅರ್ಹತೆ ಇದ್ದಲ್ಲಿ ಅವರು ಪ್ರೋತ್ಸಾಹಧನವನ್ನು ಪಡೆಯಬಹುದು. ಈ ಯೋಜನೆಯನ್ನು ಎಸ್ಸಿ ಎಸ್ಟಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲಿ ಎಂಬ ಉದ್ದೇಶದಿಂದ ಜಾರಿಗೆ ತರಲಾಗಿದೆ. ಈ ಮಾಹಿತಿಯನ್ನು ತಪ್ಪದೆ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ತಿಳಿಸಿ ಪ್ರೋತ್ಸಾಹಧನದ ಪ್ರಯೋಜನ ಪಡೆಯಿರಿ.