ಸಿದ್ದರಾಮಯ್ಯ ಅವರು ಈಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಗಿದ್ದಾರೆ. 8ವರ್ಷಗಳಲ್ಲಿ ಇವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿದರು. ಹಾಗೆಯೇ ಕರ್ನಾಟಕದ 23ನೇ ಮುಖ್ಯಮಂತ್ರಿ ಆಗಿದ್ದರು. ಸೋನಿಯಾ ಗಾಂಧಿಯವರ ಜೊತೆ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದಾರೆ. ಹಾಗೆಯೇ ಇವರು ಮಗನಿಗೆ ಎಂ.ಬಿ.ಬಿ.ಎಸ್. ಓದಿಸಿದ್ದಾರೆ. ಆದ್ದರಿಂದ ನಾವು ಇಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ರಾಜ್ಯ ಚುನಾವಣೆಯಲ್ಲಿ ಭಾರತೀಯ ಲೋಕದಳದಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದರು. ಭಾರತೀಯ ಲೋಕದಳದಿಂದ ಜನತಾ ಪಕ್ಷಕ್ಕೆ ಸೇರಿದಾಗ ಇವರನ್ನು ಹೊಸದಾಗಿ ರಚಿಸಿದ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಗಡಿಭಾಗಗಳಾದ ಕಾಸರಗೋಡು, ಬೆಳಗಾವಿ, ಕೋಲಾರ ಮುಂತಾದೆಡೆ ಪ್ರವಾಸ ಕೈಗೊಂಡು ವರದಿ ಸಲ್ಲಿಸಿದರು. 1985ರಲ್ಲಿ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು ಸಿಕ್ಕಿತು. ಪಶುಸಂಗೋಪನೆ ಸಚಿವರನ್ನಾಗಿ ನೇಮಕ ಮಾಡಲಾಯಿತು.

ಸಂಪುಟ ಪುನರ್ರಚನೆಯ ನಂತರ ರೇಷ್ಮೆ ಮತ್ತು ಸಾರಿಗೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು.
1992ರಲ್ಲಿ ದೇವೇಗೌಡರು ಸಮಾಜವಾದಿ ಜನತಾ ಪಕ್ಷದಿಂದ ಜನತಾದಳ ಸೇರಿದಾಗ ಜನತಾದಳದ ಕಾರ್ಯದರ್ಶಿಯಾದರು.1994ರ ಚುನಾವನಣೆಯಲ್ಲಿ ಗೆದ್ದು ಹಣಕಾಸು ಸಚಿವರಾದರು.
1999ರ ಚುನಾವಣೆಯ ಹೊತ್ತಿಗೆ ಜನತಾ ದಳ 2 ಭಾಗವಾದಾಗ ದೇವೇಗೌಡರೊಂದಿಗೆ ಸೇರಿ ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷರಾದರು. 1999ರ ಚುನಾವಣೆಯಲ್ಲಿ ಸೋಲು ಕಂಡರು. 2004ರ ಹೊತ್ತಿಗೆ ಜಾತ್ಯತೀತ ಜನತಾದಳದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿತರಾದರು.

ಮುಖ್ಯಮಂತ್ರಿಯಾಗಿ ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಯೋಜನೆಗಳನ್ನು ಮಾಡಿದರು ಮತ್ತು ದಲಿತವರ್ಗಗಳಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸನ್ನು ನೀಡಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಅವುಗಳಲ್ಲಿ ಚಾಮುಂಡೇಶ್ವರಿಯಲ್ಲಿ ಸೋತು, ಬಾದಾಮಿಯಲ್ಲಿ ಕಡಿಮೆ ಮತಗಳ ಅಂತರದಲ್ಲಿ ಗೆದ್ದಿದ್ದರು. ಹಾಗೆಯೇ ಇವರು ವಕೀಲ ವೃತ್ತಿಯನ್ನು ಮಾಡಿದ್ದರು. ಈಗಲೂ ಅವರಿಗೆ ಅನುಭವ ಇದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!