2019-20 ರಲ್ಲಿ ಚೀನಾದಿಂದ ಬಂದ ಮಹಾಮಾರಿ ಕೊರೋನ ವೈರಸ್ ನಮ್ಮ ದೇಶದಲ್ಲಿ ತೀವ್ರವಾಗಿ ಹರಡಿ ಬಹು ಸಂಖ್ಯೆಯ ಜನರನ್ನು ಬಲಿತೆಗೆದುಕೊಂಡಿತು. ಇಡಿ ದೇಶ ಸ್ತಬ್ಧವಾಗಿತ್ತು ಅದರಂತೆ ದೇವಸ್ಥಾನಗಳಲ್ಲಿ ಕೂಡ ಭಕ್ತರಿಗೆ ಅವಕಾಶ ಕೊಡದೆ ಬೀಗ ಹಾಕಲಾಗಿತ್ತು. ಇತ್ತೀಚೆಗೆ ದೇವಸ್ಥಾನಗಳ ಬಾಗಿಲು ತೆಗೆದು ಜನರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ, ಊಟದ ಸಮಯಗಳಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ಸಮಯ ಬದಲಾವಣೆಯ ಬಗ್ಗೆ ಈ ಲೇಖನದ ಮೂಲಕ ತಿಳಿಯೋಣ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ದೀಪಾವಳಿ ಹಬ್ಬದ ನಂತರ ಅಂದರೆ ನವೆಂಬರ್ 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ ಉತ್ಸವಾದಿ ಸೇವೆಗಳು ನಡೆಯುವ ಕಾರಣ ದೇವರ ದರ್ಶನಕ್ಕೆ ಸಮಯಾವಕಾಶವನ್ನು ನಿಗದಿಪಡಿಸಲಾಗಿದೆ.
ದರ್ಶನದ ಸಮಯ ಬೆಳಗ್ಗೆ 6ಗಂಟೆಯಿಂದ ಅಪರಾಹ್ನ 2.30 ಗಂಟೆಯವರೆಗೆ ಸಂಜೆ 5 ಗಂಟೆಯಿಂದ ರಾತ್ರಿ 8.30 ಗಂಟೆಯವರೆಗೆ ನಿಗದಿಪಡಿಸಲಾಗಿದೆ. ಅನ್ನಪೂರ್ಣ ಛತ್ರದಲ್ಲಿ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆ ಹಾಗೂ ರಾತ್ರಿ 7 ಗಂಟೆಯಿಂದ 9ಗಂಟೆಯವರೆಗೆ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ಬೀಡಿನಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೆಳಗ್ಗೆ 9ಗಂಟೆಯಿಂದ 12 ಗಂಟೆಯವರೆಗೆ, ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ಹಾಗೂ ರಾತ್ರಿ 7ಗಂಟೆಯಿಂದ 9 ಗಂಟೆಯವರೆಗೆ ಭೇಟಿ ಮಾಡಬಹುದು. ಪ್ರಸಿದ್ಧ ವಸ್ತುಸಂಗ್ರಹಾಲಯವಾದ ಮಂಜೂಷಾ ವಸ್ತು ಸಂಗ್ರಹಾಲಯವು ಬೆಳಗ್ಗೆ 9 ಗಂಟೆಯಿಂದ ಸಂಜೆ 5.30ಗಂಟೆಯವರೆಗೆ ವೀಕ್ಷಣೆಗೆ ತೆರೆದಿರಲಿದೆ. ಕಾರು ಮ್ಯೂಸಿಯಂ ಬೆಳಗ್ಗೆ 8.30 ಗಂಟೆಯಿಂದ ಅಪರಾಹ್ನ 1 ಗಂಟೆ ಹಾಗೂ 2ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತೆರೆದಿರುತ್ತದೆ. ಹರಕೆ ಮಂಡೆ (ಮುಡಿ ತೆಗೆಯಲು) ಬೆಳಗ್ಗೆ 6 ಗಂಟೆಯಿಂದ ಅಪರಾಹ್ನ 2 ಗಂಟೆ ಮತ್ತು ಸಂಜೆ 5 ಗಂಟೆಯಿಂದ 7ಗಂಟೆಯವರೆಗೆ ತೆರೆದಿರಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕಟಣೆಯಲ್ಲಿ ತಿಳಿಸಿದೆ.
ಭಕ್ತಾದಿಗಳು ಸಮಯ ಬದಲಾವಣೆಗೆ ಸಹಕರಿಸಬೇಕು. ನಿಗದಿಪಡಿಸಿದ ಸಮಯದಲ್ಲಿ ದೇವರ ದರ್ಶನ ಮಾಡಬೇಕು, ಗದ್ದಲ, ಗಲಾಟೆಗೆ ಅವಕಾಶ ಮಾಡಿಕೊಡಬಾರದು. ಕೊರೋನ ವೈರಸ್ ನಮ್ಮನ್ನು ಬಿಟ್ಟು ಇನ್ನು ಸಂಪೂರ್ಣವಾಗಿ ಹೋಗದಿರುವ ಕಾರಣ ದೇವಸ್ಥಾನಗಳಿಗೆ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.
ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430