ನಮ್ಮ ದೇಶದಾದ್ಯಂತ ನಿರುದ್ಯೋಗ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ನಿರುದ್ಯೋಗ ಹೆಚ್ಚಾಗಿದೆ ಅದರಲ್ಲೂ ಕೋವಿಡ್ 19 ಹರಡುತ್ತಿರುವ ಕಾರಣ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ದಕ್ಷಿಣ ಕನ್ನಡ ಜಿಲ್ಲೆಯ ನ್ಯಾಯಾಲಯದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೋಡೋಣ.
ಕರ್ನಾಟಕ ಸರ್ಕಾರದ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಅಧೀನದಲ್ಲಿ ಬರುವ ಘಟಕಗಳಲ್ಲಿ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೆ ಅರ್ಜಿ ಸಲ್ಲಿಕೆ ದಿನ ಪ್ರಾರಂಭವಾಗಿತ್ತು 19 ಎಪ್ರಿಲ್ 2021 ರಿಂದ 25 ಮೇ 2021 ರವರೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮತ್ತು 28 ಮೇ 2021 ರವರೆಗೆ ಬ್ಯಾಂಕ್ ನಲ್ಲಿ ಚಲನ್ ಮೂಲಕ ಶುಲ್ಕ ಪಾವತಿಸುವ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಆದರೆ ಕೋವಿಡ್ 19 ಕಾರಣದಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಮುಂದೂಡಲಾಗಿದೆ. ಕರ್ನಾಟಕ ಸರ್ಕಾರ ಕೋವಿಡ್ 19 ವೇಗವಾಗಿ ಹರಡುತ್ತಿರುವುದರಿಂದ ಎಪ್ರಿಲ್ 27ರಿಂದ ಜೂನ್ 7ರವರೆಗೂ ಲಾಕ್ ಡೌನ್ ವಿಸ್ತರಿಸಿದ ಕಾರಣ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು 3 ಜುಲೈ 2021 ರವರೆಗೆ ವಿಸ್ತರಿಸಲಾಗಿದೆ ಅಲ್ಲದೆ 7 ಜುಲೈ 2021ರವರೆಗೆ ಬ್ಯಾಂಕ್ ನಲ್ಲಿ ಚಲನ್ ಮೂಲಕ ಶುಲ್ಕ ಪಾವತಿಸಲು ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ.
ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಎಸ್ಎಸ್ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದವರಿಗೆ 38 ವರ್ಷ ಗರಿಷ್ಠ ವಯೋಮಿತಿ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. Https:/districts.ecourts.gov.in/dakshinakannada-onlinerecruitment ಆಸಕ್ತಿ ಇರುವ ಅಭ್ಯರ್ಥಿಗಳು ಈ ವೆಬ್ ಸೈಟ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಆಯಾ ಕೆಟಗೆರಿಗೆ ಅನುಗುಣವಾಗಿ ಮೀಸಲಾತಿಯನ್ನು ನೀಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 17 ಹುದ್ದೆ, ಪ್ರವರ್ಗ-1 ಕೆಟಗೆರಿ ಅವರಿಗೆ ಒಂದು ಹುದ್ದೆ, 2ಎ ಕೆಟಗೆರಿ ಅವರಿಗೆ ಐದು ಹುದ್ದೆಗಳು, 2ಬಿ ಕೆಟಗೆರಿ ಅವರಿಗೆ ಒಂದು ಹುದ್ದೆ, 3ಎ ಕೆಟಗೆರಿ ಅವರಿಗೆ ಎರಡು ಹುದ್ದೆ, 3ಬಿ ಕೆಟಗೆರಿ ಅವರಿಗೆ ಎರಡು ಹುದ್ದೆ, ಪರಿಶಿಷ್ಟ ಜಾತಿ ಕೆಟಗೆರಿ ಅವರಿಗೆ ಐದು ಹುದ್ದೆ, ಪರಿಶಿಷ್ಟ ಪಂಗಡ ಕೆಟಗೆರಿಯವರಿಗೆ ಒಂದು ಹುದ್ದೆ ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಧೀನ ನ್ಯಾಯಾಲಯಗಳ ನೇಮಕಾತಿ ಅಧಿನಿಯಮ 2007 ರ ಪ್ರಕಾರ ನೇಮಕಾತಿಯನ್ನು ನಡೆಸಲಾಗುವುದು. ಅಭ್ಯರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ ಸಂದರ್ಶನ ನಡೆಸಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳು, ಅಂಗವಿಕಲ ಅಭ್ಯರ್ಥಿಗಳಿಗೆ ಕೆಲವು ಮೀಸಲಾತಿಗಳನ್ನು ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಹಾಗೂ ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಸಾಮಾನ್ಯ ಅಭ್ಯರ್ಥಿಗಳು ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ಎರಡು ನೂರು ರೂಪಾಯಿಯನ್ನು ಶುಲ್ಕ ಪಾವತಿಸಬೇಕು. ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಶುಲ್ಕ ಪಾವತಿಸಬೇಕು. ಈ ಮಾಹಿತಿಯನ್ನು ತಪ್ಪದೆ ಉದ್ಯೋಗ ಹುಡುಕುತ್ತಿರುವ ಯುವಕರು, ಯುವತಿಯರಿಗೆ ತಿಳಿಸಿ ನಿರುದ್ಯೋಗವನ್ನು ನಿವಾರಿಸೋಣ.