ನಾವಿಂದು ನಿಮಗೆ ತಿಳಿಸುತ್ತಿರುವ ಉದ್ಯೋಗ ಮಾಹಿತಿ ಯಾವುದು ಎಂದರೆ ನೊಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಒಂದು ಹುದ್ದೆಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ವಿದ್ಯಾರ್ಹತೆಯನ್ನು ಪಡೆದಿರಬೇಕು ಯಾವ ವಯಸ್ಸಿನವರು ಅರ್ಜಿಯನ್ನು ಸಲ್ಲಿಸಬಹುದು ಯಾವ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸುತ್ತೇವೆ. ಎರಡು ಸಾವಿರದ ಇಪ್ಪತ್ತೆರಡಕ್ಕೆ ಸಂಬಂಧಿಸಿದಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿದ್ದು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಹದಿನೈದು ಸಾವಿರ ರೂಪಾಯಿಯಿಂದ ಇಪ್ಪತ್ತೆಂಟು ಸಾವಿರದ ಒಂಬೈ ನೂರಾ ಐವತ್ತು ರೂಪಾಯಿ ವೇತನವನ್ನು ನೀಡಲಾಗುತ್ತದೆ. ಯಾವ ವಯಸ್ಸಿನವರು ಅರ್ಜಿಯನ್ನು ಸಲ್ಲಿಸಬಹುದು ಎಂಬುದನ್ನು ನೋಡುವುದಾದರೆ ಹದಿನೆಂಟು ವರ್ಷ ಮೇಲ್ಪಟ್ಟವರು ಹಾಗೂ ನಲವತ್ತು ವರ್ಷ ಒಳಗಿನ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಂಚೆಯ ಮೂಲಕ ಸಲ್ಲಿಸಬೇಕು

ಇನ್ನು ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳನ್ನು ಯಾವ ರೀತಿಯಾಗಿ ಆಯ್ಕೆಮಾಡಿಕೊಳ್ಳಲಾಗುತ್ತದೆ ಎಂಬುದನ್ನು ನೋಡುವುದಾದರೆ ಸ್ವೀಕರಿಸಲಾದ ಅಂಚೆ ಅರ್ಜಿಗಳನ್ನು ಕ್ರೂಢೀಕರಿಸಿ ಭರ್ತಿ ಮಾಡಿರುವ ಮಾಹಿತಿ ಅಥವಾ ವಿವರಗಳನ್ನು ನಿಯಮಾನುಸಾರ ಪರಿಶೀಲಿಸಿ ವಿದ್ಯಾರ್ಹತೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಪರಿಗಣಿಸಿ ಒಂದು ಜ್ಯೆಷ್ಠತಾ ಪಟ್ಟಿಯನ್ನು ಮಾಡಿ ಮತ್ತು 29 ರಿಂದ 40 ವರ್ಷದವರೆಗೆ ವಯೋಮಿತಿಯುಳ್ಳ ಅಭ್ಯರ್ಥಿಗಳಿಗೆ ಇನ್ನೊಂದು ಜ್ಯೆಷ್ಠತಾ ಪಟ್ಟಿಯನ್ನು ತಯಾರಿಸಲಾಗುವುದು.

ಹಾಗೂ 29 ರಿಂದ 40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂದರೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿ ವಿಳಾಸಕ್ಕೆ ಅಂಚೆ ಮೂಲಕ ನಿಗದಿತ ಕಾಲಾವಧಿಯ ಒಳಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತ ಕಛೇರಿ ಕಂದಾಯ ಭವನ ಎಂಟನೇ ಮಹಡಿ ಕೆ ಜಿ ರಸ್ತೆ ಬೆಂಗಳೂರು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಯಾವ ದಾಖಲೆಗಳನ್ನು ಲಗತ್ತಿಸಬೇಕು ಎಂಬುದನ್ನು ನೋಡುವುದಾದರೆ ಜನ್ಮದಿನಾಂಕ ದೃಢೀಕರಿಸುವ ಪ್ರಮಾಣ ಪತ್ರ ಶೈಕ್ಷಣಿಕ ಪ್ರಮಾಣಪತ್ರ ಜಾತಿ ದೃಢೀಕರಣ ಪ್ರಮಾಣ ಪತ್ರ ಕನ್ನಡ ಮಾಧ್ಯಮದ ಅಭ್ಯರ್ಥಿ ಆಗಿದ್ದಲ್ಲಿ ಕನ್ನಡ ಮಾಧ್ಯಮ ದೃಢೀಕರಣ ಪತ್ರ ಮತ್ತು ಆಧಾರ್ ಕಾರ್ಡ್ ಅನ್ನು ಲಗತ್ತಿಸಬೇಕು.

ಅರ್ಜಿಯನ್ನು ಸಲ್ಲಿಸುವುದಕ್ಕೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಹುದ್ದೆಯ ಹೆಸರು ಗ್ರೂಪ್ ಡಿ (ಜವಾನರು) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾತ್ರ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕದಾದ್ಯಂತ ಉದ್ಯೋಗಸ್ಥಳ ಇರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತಡಿ ಉತ್ತೀರ್ಣರಾಗಿರಬೇಕು.

ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಅಭ್ಯರ್ಥಿಗಳು ಮಾರ್ಚ್ 31 2022 ರ ವರೆಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಕೂಡ ಉದ್ಯೋಗಕ್ಕಾಗಿ ಹುಡುಕಾಟವನ್ನು ನಡೆಸುತ್ತಿದ್ದರೆ ಈ ಉದ್ಯೋಗಕ್ಕೆ ಅಜ್ಜಿಯನ್ನು ಸಲ್ಲಿಸುವುದರ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರೊಂದಿಗೆ ನಿಮ್ಮ ಪರಿಚಿತರು ಹಾಗೂ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Leave a Reply

Your email address will not be published. Required fields are marked *