Student Scholarship: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.
2023 ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡಲು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ ಈ ಕುರಿತು ಬೇರೆ ಬೇರೆ ಕೋರ್ಸುಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ (Student Scholarship) ಅರ್ಜಿಯನ್ನ ಇದೀಗ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಹಾಗೂ ಬೇರೆ ಬೇರೆ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ http://sw.kar.nic.in ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಅರ್ಜಿ ಆಹ್ವಾನದ ಸಂಕ್ಷಿಪ್ತ ವಿವರವನ್ನು ಈ ಕೆಳಗೆ ನಾವು ತಿಳಿದುಕೊಳ್ಳೋಣ.
ಮೊದಲಿಗೆ ಮೇಲೆ ನೀಡಿರುವಂತಹ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಆನಂತರದಲ್ಲಿ ಮುಖಪುಟದಲ್ಲಿ ಮ್ಯಾಟ್ರಿಕ್ ನಂತರದ ಪ್ರೋತ್ಸಾಹ ಧನ ಎನ್ನುವ ಲಿಂಕ್ ಕಾಣಿಸುತ್ತದೆ ಅದನ್ನ ಕ್ಲಿಕ್ ಮಾಡಬೇಕು ಆಗ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ ಅಲ್ಲಿ ಆನ್ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು ನಂತರ ಅಲ್ಲಿ ಕೇಳಲಾಗಿರುವ ಅಗತ್ಯ ಮಾಹಿತಿಯನ್ನು ತುಂಬಿ ಅಪ್ಲೋಡ್ ಮಾಡಬೇಕು ಇದರ ಜೊತೆಗೆ ಅಂಕಪಟ್ಟಿ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ನ ಪ್ರತಿ ಫೋಟೋಗಳನ್ನ ಸಹ ಅಪ್ಲೈ ಮಾಡಬೇಕು .
ವಿವಿಧ ಕೋರ್ಸ್ ಗಳಿಗೆ ಅನುಗುಣವಾಗಿ ನೀಡಲಿರುವ ಪ್ರೋತ್ಸಾಹ ಧನಗಳ ವಿವರ ಈ ಕೆಳಗಿನಂತೆ ಇವೆ ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪೊಲಿಟೆಕ್ನಿಕ್ ಡಿಪ್ಲೋಮಾ ವಿದ್ಯಾರ್ಥಿಗಳಿಗೆ 20,000
ಪದವಿ ವಿದ್ಯಾರ್ಥಿಗಳಿಗೆ 25000
ಪೋಸ್ಟ್ ಗ್ರಾಜುಯೇಷನ್ ವಿದ್ಯಾರ್ಥಿಗಳಿಗೆ ರೂ.30000
ಅಗ್ರಿಕಲ್ಚರ್ ಇಂಜಿನಿಯರ್ ವೆಟರ್ನರಿ ಮೆಡಿಕಲ್ ಇತ್ಯಾದಿ ವಿದ್ಯಾರ್ಥಿಗಳಿಗೆ 35,000.
ಈ ಅರ್ಜಿಯನ್ನ ಸಲ್ಲಿಸಲು ಕೊನೆಯ ದಿನಾಂಕ ಅಗಸ್ಟ್ 31.2023 ಆಗಿದ್ದು ಈ ದಿನದ ಒಳಗಾಗಿ ಸಾಧನವನ್ನು ಪಡೆಯ ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಇದನ್ನ ಹೊರತುಪಡಿಸಿ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಇಲಾಖೆಯು ತಿಳಿಸಿದ್ದು ಕೇವಲ ಆನ್ಲೈನ್ ಅರ್ಜಿಗಳಿಗೆ ಮಾತ್ರ ಅವಕಾಶವನ್ನು ಕಲ್ಪಿಸಿದೆ ಆನ್ಲೈನ್ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇದ್ದ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನ ಸೇರಿಸುವುದಕ್ಕಾಗಿ ಸಮಾಜ ಕಲ್ಯಾಣ ಅಧಿಕಾರಿ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚನೆಯನ್ನು ನೀಡಲಾಗಿದೆ.