ಕರೋನವೈರಸ್ ಪರಿಣಾಮದಿಂದ ಕಾರು ಖರೀದಿಸುವುದು ಕಡಿಮೆಯಾಗಿದ್ದು ಕಾರು ಮಾರಾಟ ಮಳಿಗೆಗಳು ನಷ್ಟವನ್ನು ಅನುಭವಿಸಬೇಕಾಯಿತು. ಇದೀಗ ಕೊರೋನ ವೈರಸ್ ಹಿಡಿತಕ್ಕೆ ಬಂದಿದ್ದು ಟಾಟಾ ಮೋಟರ್ಸ್ ಕಂಪನಿ ತಮ್ಮ ವ್ಯಾಪಾರ ವಹಿವಾಟನ್ನು ಸುಧಾರಿಸಲು ಕೆಲವು ಕ್ರಮಗಳನ್ನು ಕೈಗೊಂಡಿದೆ. ಕಂಪನಿಯ ಕ್ರಮಗಳು ಹಾಗೂ ಕೆಲವು ಮಾರಾಟಕ್ಕಿರುವ ಕಾರುಗಳ ಬಗ್ಗೆ ಈ ಲೇಖನದ ಮೂಲಕ ತಿಳಿದುಕೊಳ್ಳೋಣ

ಕೋವಿಡ್ ನಂತರ ದೇಶಿಯ ಮಾರುಕಟ್ಟೆಯಲ್ಲಿ ಹೊಸ ವಾಹನ ಮಾರಾಟವು ನಿಧಾನವಾಗಿ ಬೆಳವಣಿಗೆಯಾಗುತ್ತಿದೆ. ದೇಶದ ಮುಂಚೂಣಿ ಕಾರು ತಯಾರಿಕಾ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಪ್ರಮುಖ ಕಾರುಗಳ ಖರೀದಿಯನ್ನು ಉತ್ತೇಜಿಸಲು ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿದೆ. ಪ್ರಯಾಣಿಕ ಕಾರುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮೂರನೆ ಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದೆ

ಕೋವಿಡ್ 2ನೆ ಅಲೆ ಪರಿಣಾಮ ತಗ್ಗಿರುವುದರಿಂದ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದೆ. ಟಾಟಾ ಮೋಟಾರ್ಸ್ ಕಂಪನಿಯು ಈಗಾಗಲೆ ವಿವಿಧ ಬ್ಯಾಂಕ್‌ಗಳ ಜೊತೆಗೂಡಿ ಹಲವು ಸರಳ ಸಾಲಸೌಲಭ್ಯಗಳ ಆಯ್ಕೆ ನೀಡುತ್ತಿದೆ. ಇದೀಗ ಬ್ಯಾಂಕ್ ಆಫ್ ಇಂಡಿಯಾ ಜೊತೆಗೂಡಿ ಹೊಸ ಮಾದರಿಯ ಸಾಲಸೌಲಭ್ಯಗಳನ್ನು ಘೋಷಿಸಿದೆ.

ಕೋವಿಡ್ ಪರಿಣಾಮ ಉಂಟಾಗಿರುವ ಆರ್ಥಿಕ ಅಸ್ಥಿರತೆ ಸಂದರ್ಭದಲ್ಲಿ ಹೊಸ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿರುವ ಗ್ರಾಹಕರನ್ನು ಸೆಳೆಯಲು ವಿವಿಧ ಬ್ಯಾಂಕ್‌ಗಳ ಜೊತೆಗೂಡಿ ಹಲವಾರು ಆಕರ್ಷಕ ಲೋನ್ ಆಫರ್‌ಗಳನ್ನು ನೀಡುತ್ತಿರುವ ಟಾಟಾ ಕಂಪನಿಯು ಇದೀಗ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಪ್ರಮುಖ ಕಾರುಗಳಿಗೆ ಸರಳ ಸಾಲ ಸೌಲಭ್ಯಗಳೊಂದಿಗೆ ಅತಿ ಕಡಿಮೆ ಇಎಂಐ ಆಯ್ಕೆಗಳನ್ನು ನೀಡುತ್ತಿದೆ ಅಲ್ಲದೆ ಹಲವಾರು ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳ ಜೊತೆಗೂಡಿ ವಿವಿಧ ಲೋನ್ ಆಫರ್‌ಗಳನ್ನು ನೀಡುತ್ತಿದೆ. ಕಂಪನಿಯು ಬ್ಯಾಂಕ್ ಆಫ್ ಇಂಡಿಯಾ ಮೂಲಕ ಗರಿಷ್ಠ 7 ವರ್ಷಗಳ ಅವಧಿಗೆ ಶೇ.90 ರಷ್ಟು ಎಕ್ಸ್‌ಶೋರೂಂ ದರದ ಮೇಲೆ ಲೋನ್ ಆಫರ್ ನೀಡುತ್ತಿದೆ.

ಬ್ಯಾಂಕ್ ಆಫ್ ಇಂಡಿಯಾ ಟಾಟಾ ಮೋಟಾರ್ಸ್ ಕಂಪನಿಯ ಗ್ರಾಹಕರಿಗೆ ಪ್ರತಿ ಲಕ್ಷಕ್ಕೆ ಶೇ. 6.85 ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ನೀಡಲಿದ್ದು ಆರಂಭಿಕ ಕಾರು ಮಾದರಿಯ ಖರೀದಿಯ ಮೇಲೆ 1,502 ರೂಪಾಯಿ ಪ್ರತಿ ತಿಂಗಳು ಇಎಂಐ ಆರಂಭವಾಗಲಿದೆ. ಮಾರ್ಚ್ 31ರ ತನಕ ಟಾಟಾ ಮೋಟಾರ್ಸ್ ಕಂಪನಿಯ ಗ್ರಾಹಕರಿಗೆ ಹೆಚ್ಚುವರಿ ಶುಲ್ಕಗಳನ್ನು ವಿಧಿಸುವುದಿಲ್ಲ ಎಂದಿರುವ ಬ್ಯಾಂಕ್ ಆಫ್ ಇಂಡಿಯಾ ಎಲ್ಲಾ ಮಾದರಿಯ ಕಾರುಗಳಿಗೂ ಒಂದೆ ರೀತಿಯ ನಿಯಮಗಳು ಅನ್ವಯಿಸಲಿದೆ ಎಂದಿದೆ. ಟಾಟಾ ಮೋಟಾರ್ಸ್ ಕಂಪನಿಯು ವಾಹನಗಳ ಉತ್ಪಾದನೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು ಪ್ರಯಾಣಿಕ ವಾಹನಗಳ ಜೊತೆಗೆ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿಯೂ ಗ್ರಾಹಕರನ್ನು ಸೆಳೆಯುತ್ತಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕೋವಿಡ್ ಪರಿಣಾಮ ಹೊಸ ಕಾರುಗಳ ಮಾರಾಟದಲ್ಲಿ ನಿಧಾನವಾಗಿದೆ ಇದೀಗ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದೆ. ಕಂಪನಿ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ‌. ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಒಂದು ವರ್ಷದಿಂದ ಹೆಚ್ಚಿನ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕಳೆದ ವರ್ಷದ ಕಾರು ಮಾರಾಟ ಪ್ರಮಾಣಕ್ಕಿಂತಲೂ ಇದೀಗ ಮೂರು ಪಟ್ಟು ಹೆಚ್ಚಳವಾಗಿದೆ ಆದ್ದರಿಂದ ಗ್ರಾಹಕರ ಬೇಡಿಕೆ ಹಾಗೂ ಪೂರೈಕೆಗೆ ಸಹಕಾರಿಯಾಗುವಂತೆ ಮಾರಾಟ ಮಳಿಗೆಗಳು ಮತ್ತು ಸೇವಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಇತ್ತೀಚೆಗೆ ಕಂಪನಿಯು ದಕ್ಷಿಣ ಭಾರತದ ಪ್ರಮುಖ ರಾಜ್ಯಗಳ ವಿವಿಧ ನಗರಗಳಲ್ಲಿ ಸುಮಾರು 70 ಹೊಸ ಕಾರು ಮಾರಾಟ ಮಳಿಗೆಗಳನ್ನು ಪ್ರಾರಂಭಿಸಿದೆ.

ಹೊಸದಾಗಿ ಚಾಲನೆ ಪಡೆದುಕೊಂಡ 70 ಶೋರೂಂಗಳಲ್ಲಿ ಅರ್ಧಕ್ಕೂ ಹೆಚ್ಚು ಶೋರೂಂಗಳು ಮಾರಾಟ ಸೌಲಭ್ಯದ ಜೊತೆಗೆ ಗ್ರಾಹಕರ ಸೇವಾ ಕೇಂದ್ರಗಳನ್ನು ಸಹ ಒಂದೆ ಸೂರಿನಡಿಯಲ್ಲಿ ತೆರೆದಿದ್ದು ಟಾಟಾ ಕಂಪನಿಯು ಹೊಸದಾಗಿ 53 ಶೋರೂಂಗಳನ್ನು ನಗರಗಳಲ್ಲಿ ಆರಂಭಿಸಿದೆ. ಇನ್ನುಳಿದ 32 ಶೋರೂಂಗಳ ಪೈಕಿ ಬೆಂಗಳೂರಿನಲ್ಲಿ, ಚೆನ್ನೈನಲ್ಲಿ, ಹೈದ್ರಾಬಾದ್‌ನಲ್ಲಿ ಹಾಗೂ ಕೊಚ್ಚಿಯಲ್ಲೂ ಶೋರೂಂ ಪ್ರಾರಂಭಿಸಲು ಚಾಲನೆ ನೀಡಲಾಗಿದೆ. ಹೊಸ ಶೋರೂಂಗಳೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ದೇಶದಾದ್ಯಂತ ಒಟ್ಟು 980 ಮಾರಾಟ ಮಳಿಗೆಗಳನ್ನು ಹೊಂದಿದೆ. ದೇಶದಾದ್ಯಂತ ಹರಡಿಕೊಂಡಿರುವ 980 ಟಾಟಾ ಶೋರೂಂಗಳಲ್ಲಿ 272 ಶೋರೂಂಗಳು ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕಂಪನಿಯ ಕಾರು ಮಾರಾಟದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದಲೆ ಶೇ. 28ರಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ. ಕಾರುಗಳ ಮಾರಾಟದಲ್ಲಿನ ವಾರ್ಷಿಕ ಬೆಳವಣಿಗೆಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಕಳೆದ 9 ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ಕೋವಿಡ್ ಅಬ್ಬರದ ನಡುವೆ ಹೊಸ ವಾಹನಗಳ ಮಾರಾಟವು ಸುಧಾರಣೆಯಾಗುತ್ತಿದ್ದು ಸೆಪ್ಟೆಂಬರ್ ಅವಧಿಯಲ್ಲಿ ಹಲವಾರು ಹೊಸ ಕಾರುಗಳು ಬಿಡುಗಡೆಯಾಗಿವೆ.

ಕೋವಿಡ್ ಭೀತಿಯ ನಡುವೆಯೂ ಭಾರತೀಯ ಆಟೋ ಉದ್ಯಮವು ಇದೀಗ ಸಾಕಷ್ಟು ಸುಧಾರಣೆ ಕಂಡಿದ್ದು ವೈರಸ್ ಪರಿಣಾಮ ಬಿಡುಗಡೆ ಪ್ರಕ್ರಿಯೆಯಿಂದ ಹಿಂದೆ ಸರಿದ ಪ್ರಮುಖ ಆಟೊ ಉತ್ಪಾದನಾ ಕಂಪನಿಗಳು ತಮ್ಮ ವಿವಿಧ ಹೊಸ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿವೆ. ಹೊಸ ವಾಹನ ಮಾರಾಟವು ಕಳೆದ ಕೆಲ ತಿಂಗಳಿನಿಂದ ತ್ವರಿತವಾಗಿ ಹೆಚ್ಚಳವಾಗಿದ್ದು, ಗ್ರಾಹಕರ ಬೇಡಿಕೆ ಆಧರಿಸಿ ಸೆಪ್ಟೆಂಬರ್ ತಿಂಗಳಿನಲ್ಲಿ ವಿವಿಧ ಕಾರು ಉತ್ಪಾದನಾ ಕಂಪನಿಗಳು ತಮ್ಮ ಬಹುನೀರಿಕ್ಷಿತ ಕಾರುಗಳನ್ನು ಮಾದರಿಗಳನ್ನು ಬಿಡುಗಡೆ ಮಾಡಿವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಹೊಸ ಕಾರುಗಳು ಯಾವುವೆಂದರೆ ಹ್ಯುಂಡೈ ಐ20 ಎನ್ ಲೈನ್ಹ್ಯುಂಡೈ ಇಂಡಿಯಾ ಕಂಪನಿಯು ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಎನ್ ಲೈನ್ ವರ್ಷನ್ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ 9.84 ಲಕ್ಷ ರೂಪಾಯಿ ಮತ್ತು ಟಾಪ್ ಎಂಡ್ ಮಾದರಿಯು 11.75 ಲಕ್ಷ ರೂಪಾಯಿ ಬೆಲೆ ಹೊಂದಿದೆ.

ಫೋಕ್ಸ್‌ವ್ಯಾಗನ್ ಟೈಗುನ್ ಕಂಪ್ಯಾಕ್ಟ್ ಎಸ್‌ಯುವಿಟೈಗುನ್ ಹೊಸ ಕಾರು ಗ್ರಾಹಕರ ಬೇಡಿಕೆ ಅನುಸಾರವಾಗಿ ಡೈನಾಮಿಕ್ ಲೈನ್ ಕಂಫರ್ಟ್ ಲೈನ್, ಹೈ ಲೈನ್ ಮತ್ತು ಟಾಪ್ ಲೈನ್ ಮತ್ತು ಜಿಟಿ ಲೈನ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ವಿವಿಧ ವೆರಿಯೆಂಟ್‌ಗಳಲ್ಲಿರುವ ತಾಂತ್ರಿಕ ಸೌಲಭ್ಯಕ್ಕೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ 10.49 ಲಕ್ಷ ರೂಪಾಯಿಯಿಂದ ಟಾಪ್ ಎಂಡ್ ಮಾದರಿಯು 17.50 ಲಕ್ಷ ರೂಪಾಯಿ ಬೆಲೆ ಹೊಂದಿದೆ.

ಬಿಎಸ್ 6 ಫೋರ್ಸ್ ಗೂರ್ಖಾನವೀಕೃತ ಗೂರ್ಖಾ ಎಸ್‌ಯುವಿ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ 13.59 ಲಕ್ಷ ರೂಪಾಯಿ ಬೆಲೆ ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 90 ಬಿಎಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆಯ 2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ.

ಫೋರ್ಸ್ ಮೋಟಾರ್ಸ್ ಕಂಪನಿಯು ಸ್ಟ್ಯಾಂಡರ್ಡ್ ಆಕ್ಸೆಸರಿಸ್ ಫೀಚರ್ಸ್ ಹೊರತುಪಡಿಸಿ ಹೆಚ್ಚುವರಿ ಮೊತ್ತದಲ್ಲಿ ಆಫ್-ರೋಡ್ ಚಾಲನೆ ಪೂರಕವಾದ ಮತ್ತಷ್ಟು ಹೊಸ ಸೌಲಭ್ಯಗಳನ್ನು ಆಕ್ಸೆಸರಿಸ್ ಪ್ಯಾಕೇಜ್ ಮೂಲಕ ಪಡೆದುಕೊಳ್ಳಬಹುದು. ಟಾಟಾ ಮೋಟಾರ್ಸ್ ಕಂಪನಿಯು ವಿಶೇಷ ಬಣ್ಣಗಳ ಆಯ್ಕೆ ಹೊಂದಿರುವ ಸಫಾರಿ ಗೋಲ್ಡ್ ಆವೃತ್ತಿಯನ್ನು ಪ್ರಮುಖ ಆವೃತ್ತಿಗಳಲ್ಲಿ ಬಿಡುಗಡೆ ಮಾಡಿದೆ. ಎಕ್ಸ್‌ಜೆಡ್ ಪ್ಲಸ್ ಮ್ಯಾನುವಲ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ 21.89 ಲಕ್ಷ ರೂಪಾಯಿ ಮತ್ತು ಎಕ್ಸ್‌ಜೆಡ್ಎ ಪ್ಲಸ್ ಆಟೋಮ್ಯಾಟಿಕ್ ಮಾದರಿಯು 23.17 ಲಕ್ಷ ರೂಪಾಯಿ ಬೆಲೆ ಹೊಂದಿದೆ. ಟಾಟಾ ಎಕ್ಸ್‌ಪ್ರೆಸ್ ಟಿ ವಾಣಿಜ್ಯ ಬಳಕೆಯ ಇವಿ ಕಾರು ಬಿಡುಗಡೆಯಾಗಿದೆ.

ಟಾಟಾ ಮೋಟಾರ್ಸ್ ಕಂಪನಿಯು ವಾಣಿಜ್ಯ ಬಳಕೆಗಾಗಿ ವಿಶೇಷವಾಗಿ ಎಕ್ಸ್‌ಪ್ರೆಸ್ ಟಿ ಎಂಬ ಹೊಸ ಎಲೆಕ್ಟ್ರಿಕ್ ಕಾರ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆ ಎಕ್ಸ್ ಶೋರೂಂ ದರದಂತೆ 9.54 ಲಕ್ಷ ರೂಪಾಯಿಗಳಾಗಿದೆ. 21.5 ಕಿ.ವ್ಯಾ ಬ್ಯಾಟರಿ ಹೊಂದಿರುವ ಇತರ ಎರಡು ಮಾದರಿಗಳ ಬೆಲೆ ಕ್ರಮವಾಗಿ 10.14 ಲಕ್ಷ ರೂಪಾಯಿ ಹಾಗೂ 10.64 ಲಕ್ಷಗಳಾಗಿದೆ. 16.5 ಕಿ.ವ್ಯಾ ಬ್ಯಾಟರಿಯನ್ನು ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ 165 ಕಿ.ಮೀಗಳವರೆಗೆ ಚಲಿಸುತ್ತದೆ. ಇನ್ನು 21.5 ಕಿ.ವ್ಯಾ ಬ್ಯಾಟರಿಯನ್ನು ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ 213 ಕಿ.ಮೀಗಳವರೆಗೆ ಚಲಿಸುತ್ತದೆ. ಕಾರನ್ನು ಖರೀದಿಸುವವರಿಗೆ ಈ ಮಾಹಿತಿಯನ್ನು ತಪ್ಪದೆ ತಿಳಿಸಿ.

Leave a Reply

Your email address will not be published. Required fields are marked *