ಕರ್ನಾಟಕ ರಾಜ್ಯ ತೋಟಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸದಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕ, ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ ಹುದ್ದೆಗಳ ವಿವರ ಈ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.
ಕರ್ನಾಟಕ ರಾಜ್ಯ ತೋಟಗಾರಿಕಾ ಇಲಾಖೆಯ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಇಲಾಖೆಯಲ್ಲಿ ಖಾಲಿ ಇರುವ 4319 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕರು 256 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ನೇಮಕವಾದ ಅಭ್ಯರ್ಥಿಗೆ ಮಾಸಿಕ ವೇತನ 52,650 ರೂಪಾಯಿಯಿಂದ 97100 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ವಿದ್ಯಾರ್ಹತೆ ತೋಟಗಾರಿಕೆ ವಿಷಯದಲ್ಲಿ ಬಿಎಸ್ ಸಿ ಪದವಿ ಜೊತೆಗೆ ತೋಟಗಾರಿಕಾ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಸಹಾಯಕ ತೋಟಗಾರಿಕಾ ನಿರ್ದೇಶಕರು 475 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 43,100 ರೂಪಾಯಿಯಿಂದ 83,900 ರೂಪಾಯಿವರೆಗೆ ವೇತನ ಇರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿ ತೋಟಗಾರಿಕಾ ವಿಷಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ಸಹಾಯಕ ತೋಟಗಾರಿಕೆ ಅಧಿಕಾರಿ1136 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 40,900 ರೂಪಾಯಿಯಿಂದ 78,200 ರೂಪಾಯಿವರೆಗೆ ವೇತನ ಇರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ತೋಟಗಾರಿಕೆ ವಿಷಯದಲ್ಲಿ ಬಿಎಸ್ಸಿ ಪದವಿ ಪಡೆದಿರಬೇಕು. ತೋಟಗಾರಿಕೆ ಸಹಾಯಕ 926 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ನೇಮಕವಾದ ಅಭ್ಯರ್ಥಿಗೆ ಮಾಸಿಕ 23,500 ರೂಪಾಯಿಯಿಂದ 47,650 ರೂಪಾಯಿ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ತೋಟಗಾರಿಕೆ ವಿಷಯದಲ್ಲಿ ಬಿಎಸ್ ಸಿ ಪದವಿ ಪಡೆದಿರಬೇಕು. ಪ್ರಥಮ ದರ್ಜೆ ಸಹಾಯಕರು 311 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 27,650 ರೂಪಾಯಿಯಿಂದ 52,650 ರೂಪಾಯಿವರೆಗೆ ವೇತನ ಬರುತ್ತದೆ. ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಪಡೆದಿದ್ದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಶೀಘ್ರ ಲಿಪಿಗಾರರು ಖಾಲಿ ಇರುವ 11 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 27,650 ರೂಪಾಯಿಯಿಂದ 52,650 ರೂಪಾಯಿ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಿಯುಸಿ ಉತ್ತೀರ್ಣರಾಗಿರುವುದರ ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಹಿರಿಯ ಬೆರಳಚ್ಚು ಮತ್ತು ಹಿರಿಯ ಶೀಘ್ರ ಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ನೀಡಲಾದ ಕನ್ನಡ ಶೀಘ್ರ ಲಿಪಿಯಲ್ಲಿ ಐಚ್ಚಿಕದೊಂದಿಗೆ ಸೆಕ್ರೆಟೇರಿಯಲ್ ಪ್ರಾಕ್ಟಿಸ್ ಡಿಪ್ಲೋಮಾವನ್ನು ಪಡೆದಿರಬೇಕು.
ದ್ವಿತೀಯ ದರ್ಜೆ ಸಹಾಯಕರು 271 ಖಾಲಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 21,400 ರೂಪಾಯಿಯಿಂದ 42000 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ದತ್ತಾಂಶ ನಮೂದಕ ಸಹಾಯಕರು 58 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 21,400 ರೂಪಾಯಿಯಿಂದ 42000 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಿಯುಸಿ ಉತ್ತೀರ್ಣರಾಗಿರುವುದರ ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಹಿರಿಯ ಬೆರಳಚ್ಚು ಮತ್ತು ಹಿರಿಯ ಶೀಘ್ರ ಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ನೀಡಲಾದ ಕನ್ನಡ ಶೀಘ್ರ ಲಿಪಿಯಲ್ಲಿ ಐಚ್ಚಿಕದೊಂದಿಗೆ ಸೆಕ್ರೆಟೇರಿಯಲ್ ಪ್ರಾಕ್ಟಿಸ್ ಡಿಪ್ಲೋಮಾವನ್ನು ಪಡೆದಿರಬೇಕು. ವಾಹನ ಚಾಲಕರು 87 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 21,400 ರೂಪಾಯಿಯಿಂದ 42,000 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹತ್ತನೆ ತರಗತಿ ಉತ್ತೀರ್ಣರಾಗಿರಬೇಕು ಜೊತೆಗೆ ಲಘು ವಾಹನ ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು.
ಲ್ಯಾಬ್ ಅಸಿಸ್ಟೆಂಟ್ 13 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 18,600 ರೂಪಾಯಿಯಿಂದ 32,600 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಲ್ಯಾಬ್ ನಿರ್ವಹಣೆಯಲ್ಲಿ ಡಿಪ್ಲೋಮಾ ಜೊತೆಗೆ ಪಿಯುಸಿ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಯಾವುದೆ ಎನ್ಎಬಿಎಲ್ ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ಮೂರು ವರ್ಷಗಳ ಅನುಭವ ಹೊಂದಿರಬೇಕು. ಜೇನು ಕೃಷಿ ಸಹಾಯಕರು 20 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 18,600 ರೂಪಾಯಿಯಿಂದ 32,600 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಸ್ಎಸ್ಎಲ್ ಸಿ ಯಲ್ಲಿ ತೆರ್ಗಡೆಯಾಗಬೇಕು ಮತ್ತು ಭಾಗಮಂಡಲ ಜೇನು ಸಾಕಣೆ ತರಬೇತಿ ಕೇಂದ್ರ ಕೊಡಗು ಜಿಲ್ಲೆಯಲ್ಲಿ ಕನಿಷ್ಠ ಮೂರು ತಿಂಗಳು ತರಬೇತಿ ಪಡೆದ ಪ್ರಮಾಣ ಪತ್ರ ಬೇಕಾಗುತ್ತದೆ. ಜವಾನ 20 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 17,000 ರೂಪಾಯಿಯಿಂದ 28,950 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಸ್ಎಸ್ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ತೋಟಗಾರ 1774 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 17,000 ರೂಪಾಯಿಯಿಂದ 28,950 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಸ್ಎಸ್ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕರ್ನಾಟಕ ತೋಟಗಾರಿಕೆ ಇಲಾಖೆಯಿಂದ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಪಡೆಯಬೇಕು.
ಕಾವಲುಗಾರ 29 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 17,000 ರೂಪಾಯಿಯಿಂದ 28,950 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಸ್ಎಸ್ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗಳಿಗೆ ನೇರ ನೇಮಕಾತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಮುಂಬಡ್ತಿಯ ಮೂಲಕ ಭರ್ತಿ ಮಾಡಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಓಬಿಸಿ ಹಾಗೂ ಜನರಲ್ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷದ ವಯೋಮಿತಿ ಸಡಿಲಿಕೆ ಇದೆ. ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಆಧಾರ್ ಕಾರ್ಡ್, ಪಾಸ್ಪೋರ್ಟ್ ಸೈಜ್ ಫೋಟೋ, ಆದಾಯ ಹಾಗೂ ಜಾತಿ ಪ್ರಮಾಣ ಪತ್ರ, ಸ್ಕೂಲ್ ಸರ್ಟಿಫಿಕೇಟ್ ಬೇಕಾಗುತ್ತದೆ ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಪಡೆಯಿರಿ.