Varamaha Lakshmi festival: ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು ಈಗ ವರಮಹಾಲಕ್ಷ್ಮಿಯ ಪ್ರಯುಕ್ತ ಮಹಿಳೆಯರಿಗೆ ಮತ್ತೊಂದು ಕಿಟ್ ವಿತರಣೆ ಮಾಡಲು ಮುಂದಾಗಿದ್ದಾರೆ.ಇನ್ನು ಪ್ರತಿವರ್ಷ ಶ್ರಾವಣ ಮಾಸ ಶುಕ್ಲಪಕ್ಷ ಪೌರ್ಣಮಿ ನಂತರ ಬರುವ ಮೊದಲ ಶುಕ್ರವಾರದ ದಿನದಂದು ವರಮಹಾಲಕ್ಷ್ಮಿ ವ್ರತದ ಆಚರಣೆ ಮಾಡಲಾಗುತ್ತದೆ.ಈ ದಿನ ಎಲ್ಲಾ ಮಹಿಳೆಯರು ಕೂಡ ತಮ್ಮ ತಮ್ಮ ಮನೆಗಳಲ್ಲಿ ವರಮಹಾಲಕ್ಷ್ಮಿಗೆ ವಿಶೇಷವಾಗಿ ಅಲಂಕರಿಸಿ ಪೂಜೆ ಮಾಡುತ್ತಾರೆ ನಂತರ ದೇವಸ್ಥಾನಗಳಿಗೆ ಬರುತ್ತಾರೆ.

ಈ ಬಾರಿ 25/8/2023 ರಾಜ್ಯದಾದ್ಯಂತ ವರಮಹಾಲಕ್ಷ್ಮಿ ಹಬ್ಬವು ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮದಿಂದ ಆಚರಿಸುತ್ತಾರೆ. ವರಮಹಾಲಕ್ಷ್ಮಿ ವ್ರತವನ್ನು ಆಚರಿಸಿ ,ಲಕ್ಷ್ಮಿ ಸ್ವರೂಪದ ಕಳಶವನ್ನು ಪ್ರತಿಷ್ಠಾಪನೆ ಮಾಡಿ ಅದಕ್ಕೆ ಅಲಂಕರಿಸಿ ಪೂಜೆ ಸಲ್ಲಿಸಿ ತಾಯಿಯ ಕೃಪೆಗೆ ಪಾತ್ರರಾಗುತ್ತಾರೆ. ಎಲ್ಲ ಮುತ್ತೈದೆಯರು ಮತ್ತು ಹೆಣ್ಣು ಮಕ್ಕಳಿಗೆ ಅರಿಶಿನ ಕುಂಕುಮ ನೀಡಿ ಅವರಿಗೆ ಸಣ್ಣ ಉಡುಗೊರೆಯನ್ನು ನೀಡುತ್ತಾರೆ.

ಸಂಪ್ರದಾಯ ಆಚರಣೆಗಳಿಗೆ ಮತ್ತಷ್ಟು ಮಹತ್ವ ನೀಡುವ ಸಲುವಾಗಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ವರಮಹಾಲಕ್ಷ್ಮಿ ಪ್ರಯುಕ್ತ ಸರ್ಕಾರದಿಂದ ಮುತ್ತೈದೆ ಕಿಟ್ ವಿತರಣೆ ಮಾಡಲಾಗುತ್ತಿದೆ. ಕಿಟ್ ನಲ್ಲಿ ಅರಿಶಿನ ಕುಂಕುಮ, ಬಳೆ ಇರುತ್ತದೆ. ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಕೂಡ ಈ ಕಿಟ್ಟನ್ನು ನೀಡಲಾಗಿತ್ತು ನೂತನ ಸರ್ಕಾರ ಈಗ ಅದನ್ನು ಮುಂದುವರಿಸಿಕೊಂಡು ಹೋಗುತ್ತಿದೆ.

ದೇವಾಲಯಗಳ ವತಿಯಿಂದ ಗುಣಮಟ್ಟದ ಕಸ್ತೂರಿ ಅರಿಶಿನ ಕುಂಕುಮ ಮತ್ತು ಬಳೆಯನ್ನು ಕಾಗಲದಲ್ಲಿ ಹಾಕಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರನ್ನು ಮುದ್ರಿಸಿ ವಿತರಿಸಲಾಗುತ್ತದೆ. ಇದಕ್ಕೆ ಬೇಕಾಗುವ ಸಿದ್ಧತೆ ಮಾಡಿಕೊಳ್ಳಿ ಎಂದು ಸರ್ಕಾರ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಿದೆ.

ನಮ್ಮ ಆಚರಣೆ ಹಾಗೂ ಸಂಪ್ರದಾಯವನ್ನು ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಇದಕ್ಕೆ ಸರ್ಕಾರವು ಕೂಡ ಕಿಟ್ ಕೊಟ್ಟು ಪ್ರೋತ್ಸಾಹ ನೀಡಿ ಸಂಪ್ರದಾಯಿಕ ಪದ್ಧತಿಯನ್ನು ಉತ್ತೇಜಿಸುತ್ತಿದೆ. ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು ನಾಡಿನ ಜನತೆಗೆ ಒಳ್ಳೆಯದಾಗಲಿ ಎನ್ನುವುದು ನಮ್ಮ ಆಶಯ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!