ಸರ್ಕಾರವು ಅನೇಕ ನೀತಿ ನಿಯಮಗಳನ್ನು ಜಾರಿಗೆ ತರುತ್ತದೆ. ಹಾಗೆಯೇ ಅದನ್ನು ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಕೂಡ ಮಾಡುತ್ತಾ ಹೋಗುತ್ತದೆ. ಅದರಲ್ಲೂ ನಮ್ಮ ಪ್ರಧಾನಮಂತ್ರಿ ಅದ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಹುದ್ದೆಗೆ ಬಂದ ಮೇಲೆ ಅನೇಕ ಬದಲಾವಣೆಗಳು ಆಗಿವೆ. ದುಡ್ಡಿನ ವಿಷಯದಲ್ಲಿ ಆಗಿರಬಹುದು ಹಾಗೆಯೇ ಎಲ್ಲಾ ರೀತಿಯ ಜನರಿಗೆ ಅನುಕೂಲ ಆಗುವಂತೆ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಆದ್ದರಿಂದ ನಾವು ಇಲ್ಲಿ ವಿಧವಾ ವೇತನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಸರ್ಕಾರಗಳ ಉದ್ದೇಶ ಜನರ ಜೀವನ ಮಟ್ಟವನ್ನು ಸುಧಾರಣೆ ಮಾಡುವುದು ಆಗಿದೆ. ಆದ್ದರಿಂದ ಈ ವಿಧವಾ ವೇತನವನ್ನು ವಿವಾಹವಾಗಿ ಪತಿಯನ್ನು ಕಳೆದುಕೊಂಡ ಮಹಿಳೆಯರಿಗೆ ನೀಡಲಾಗುತ್ತದೆ. ಹದಿನೆಂಟು ವರ್ಷಕ್ಕಿಂತ ಹೆಚ್ಚು ವಯಸ್ಸಿನ ನಿರ್ಗತಿಕ ವಿಧವೆಯರಿಗೆ ವಿಧವಾ ವೇತನವನ್ನು ಸರ್ಕಾರದ ಆದೇಶದ ಮೇರೆಗೆ 1ನೇ ಏಪ್ರಿಲ್ 1984ರಿಂದ ಕಾರ್ಯಗತ ಮಾಡಲಾಗಿದೆ.

ನಿರ್ಗತಿಕ ವಿಧವೆ ಅಂದರೆ ಪತಿಯು ಜೀವಿಸಿಲ್ಲದ ಅಥವಾ ಮೃತಪಟ್ಟಿರುವ ವ್ಯಕ್ತಿಯ ಪತ್ನಿ. ಹಾಗೆಯೇ ಈ ವಿಧವಾ ವೇತನವನ್ನು ಪಡೆಯಲು ಒಂದಷ್ಟು ನಿಯಮಗಳಿವೆ. ಅವುಗಳೆಂದರೆ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶಗಳಲ್ಲಿ ರೂ.12,000 ಕ್ಕಿಂತ ಕಡಿಮೆ ಇರಬೇಕು.

ನಗರ ಪ್ರದೇಶಗಳಲ್ಲಿ ರೂ.17,000 ಕ್ಕಿಂತ ಕಡಿಮೆ ಇರಬೇಕು. ಅರ್ಜಿದಾರಳು ಅಥವಾ ಆಕೆಯ ಮರಣ ಹೊಂದಿದ ಪತಿಯು ಅರ್ಜಿ ದಿನಾಂಕದಿಂದ ಹಿಂದಿನ ನಿರಂತರ ಮೂರು ವರ್ಷಗಳ ಅವಧಿಗೆ ಕಡಿಮೆ ಇಲ್ಲದಂತೆ ಈ ರಾಜ್ಯದ ನಿವಾಸಿಯಾಗಿರಬೇಕು. ವಿಧವಾ ವೇತನದ ಮೊಬಲಗು ತಿಂಗಳಿಗೆ ರೂ. 500 ಆಗಿದೆ. ಅಂದರೆ ತಿಂಗಳಿಗೆ 500ರೂ.ಗಳನ್ನು ಸರ್ಕಾರ ವಿಧವೆಯರಿಗೆ ನೀಡುತ್ತದೆ. ಹಾಗೆಯೇ ವಿಧವಾ ವೇತನಕ್ಕಾಗಿ ಸಲ್ಲಿಸುವ ಅರ್ಜಿಯು ಗೊತ್ತುಪಡಿಸಿದ ನಮೂನೆಯಲ್ಲಿರಬೇಕು ಮತ್ತು ಅದನ್ನು ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರಿಗೆ ಸಲ್ಲಿಸಬೇಕು. ಹಾಗೆಯೇ ಬೇರೆ ಪಿಂಚಣಿಯನ್ನು ಪಡೆಯಬಾರದು.

ಬೇರೆ ಪಿಂಚಣಿ ಪಡೆಯುತ್ತಿರುವವರು ವಿಧವಾ ವೇತನ ಪಡೆಯಲು ಅರ್ಹರಾಗುವುದಿಲ್ಲ. ಮೃತರಾಗುವವರೆಗೆ ಅಥವಾ ಪುನರ್ವಿವಾಹವಾಗುವವರೆಗೆ ಅಥವಾ ಉದ್ಯೋಗ ಪಡೆದು ನಿಗದಿತ ವಾರ್ಷಿಕ ಆದಾಯಕ್ಕಿಂತ ಹೆಚ್ಚಿನ ಆದಾಯ ಪಡೆಯುವವರೆಗೆ ವಿಧವೆಯು ವಿಧವಾ ವೇತನವನ್ನು ಪಡೆಯಬಹುದು. ಹಾಗೆಯೇ ಇದಕ್ಕೆ ಅರ್ಜಿ ಸಲ್ಲಿಸಲು ಹಲವಾರು ದಾಖಲಾತಿಗಳು ಬೇಕಾಗುತ್ತದೆ. ಅವುಗಳೆಂದರೆ ಜನನ ಪ್ರಮಾಣ ಪತ್ರ, ವೈದ್ಯಕೀಯ ದೃಢೀಕರಣ ಪತ್ರ ಪತಿಯ ಮರಣ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರ, ವಯಸ್ಸಿನ ದೃಢೀಕರಣ ಪತ್ರ ಅಥವಾ ಭಾರತ ಚುನಾವಣಾ ಆಯೋಗವು ನೀಡಿರುವ ಮತದಾರರ ಗುರುತಿನ ಚೀಟಿಯಲ್ಲಿರುವ ಜನ್ಮ ದಿನಾಂಕವು ವಯಸ್ಸಿಗೆ ಸಂಬಂಧಿಸಿದ ದಾಖಲೆಯಾಗಿರುತ್ತದೆ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!