ಸರ್ಕಾರವು ಅನೇಕ ನೀತಿ ನಿಯಮಗಳನ್ನು ಜಾರಿಗೆ ತರುತ್ತದೆ. ಹಾಗೆಯೇ ಅದನ್ನು ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಕೂಡ ಮಾಡುತ್ತಾ ಹೋಗುತ್ತದೆ. ಅದರಲ್ಲೂ ನಮ್ಮ ಪ್ರಧಾನಮಂತ್ರಿ ಅದ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಹುದ್ದೆಗೆ ಬಂದ ಮೇಲೆ ಅನೇಕ ಬದಲಾವಣೆಗಳು ಆಗಿವೆ. ದುಡ್ಡಿನ ವಿಷಯದಲ್ಲಿ ಆಗಿರಬಹುದು ಹಾಗೆಯೇ ಎಲ್ಲಾ ರೀತಿಯ ಜನರಿಗೆ ಅನುಕೂಲ ಆಗುವಂತೆ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಆದ್ದರಿಂದ ನಾವು ಇಲ್ಲಿ ವಿಧವಾ ವೇತನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಸರ್ಕಾರಗಳ ಉದ್ದೇಶ ಜನರ ಜೀವನ ಮಟ್ಟವನ್ನು ಸುಧಾರಣೆ ಮಾಡುವುದು ಆಗಿದೆ. ಆದ್ದರಿಂದ ಈ ವಿಧವಾ ವೇತನವನ್ನು ವಿವಾಹವಾಗಿ ಪತಿಯನ್ನು ಕಳೆದುಕೊಂಡ ಮಹಿಳೆಯರಿಗೆ ನೀಡಲಾಗುತ್ತದೆ. ಹದಿನೆಂಟು ವರ್ಷಕ್ಕಿಂತ ಹೆಚ್ಚು ವಯಸ್ಸಿನ ನಿರ್ಗತಿಕ ವಿಧವೆಯರಿಗೆ ವಿಧವಾ ವೇತನವನ್ನು ಸರ್ಕಾರದ ಆದೇಶದ ಮೇರೆಗೆ 1ನೇ ಏಪ್ರಿಲ್ 1984ರಿಂದ ಕಾರ್ಯಗತ ಮಾಡಲಾಗಿದೆ. ನಿರ್ಗತಿಕ ವಿಧವೆ ಅಂದರೆ ಪತಿಯು ಜೀವಿಸಿಲ್ಲದ ಅಥವಾ ಮೃತಪಟ್ಟಿರುವ ವ್ಯಕ್ತಿಯ ಪತ್ನಿ. ಹಾಗೆಯೇ ಈ ವಿಧವಾ ವೇತನವನ್ನು ಪಡೆಯಲು ಒಂದಷ್ಟು ನಿಯಮಗಳಿವೆ. ಅವುಗಳೆಂದರೆ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶಗಳಲ್ಲಿ ರೂ.12,000 ಕ್ಕಿಂತ ಕಡಿಮೆ ಇರಬೇಕು.
ನಗರ ಪ್ರದೇಶಗಳಲ್ಲಿ ರೂ.17,000 ಕ್ಕಿಂತ ಕಡಿಮೆ ಇರಬೇಕು. ಅರ್ಜಿದಾರಳು ಅಥವಾ ಆಕೆಯ ಮರಣ ಹೊಂದಿದ ಪತಿಯು ಅರ್ಜಿ ದಿನಾಂಕದಿಂದ ಹಿಂದಿನ ನಿರಂತರ ಮೂರು ವರ್ಷಗಳ ಅವಧಿಗೆ ಕಡಿಮೆ ಇಲ್ಲದಂತೆ ಈ ರಾಜ್ಯದ ನಿವಾಸಿಯಾಗಿರಬೇಕು. ವಿಧವಾ ವೇತನದ ಮೊಬಲಗು ತಿಂಗಳಿಗೆ ರೂ. 500 ಆಗಿದೆ. ಅಂದರೆ ತಿಂಗಳಿಗೆ 500ರೂ.ಗಳನ್ನು ಸರ್ಕಾರ ವಿಧವೆಯರಿಗೆ ನೀಡುತ್ತದೆ. ಹಾಗೆಯೇ ವಿಧವಾ ವೇತನಕ್ಕಾಗಿ ಸಲ್ಲಿಸುವ ಅರ್ಜಿಯು ಗೊತ್ತುಪಡಿಸಿದ ನಮೂನೆಯಲ್ಲಿರಬೇಕು ಮತ್ತು ಅದನ್ನು ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರಿಗೆ ಸಲ್ಲಿಸಬೇಕು. ಹಾಗೆಯೇ ಬೇರೆ ಪಿಂಚಣಿಯನ್ನು ಪಡೆಯಬಾರದು.
ಬೇರೆ ಪಿಂಚಣಿ ಪಡೆಯುತ್ತಿರುವವರು ವಿಧವಾ ವೇತನ ಪಡೆಯಲು ಅರ್ಹರಾಗುವುದಿಲ್ಲ. ಮೃತರಾಗುವವರೆಗೆ ಅಥವಾ ಪುನರ್ವಿವಾಹವಾಗುವವರೆಗೆ ಅಥವಾ ಉದ್ಯೋಗ ಪಡೆದು ನಿಗದಿತ ವಾರ್ಷಿಕ ಆದಾಯಕ್ಕಿಂತ ಹೆಚ್ಚಿನ ಆದಾಯ ಪಡೆಯುವವರೆಗೆ ವಿಧವೆಯು ವಿಧವಾ ವೇತನವನ್ನು ಪಡೆಯಬಹುದು. ಹಾಗೆಯೇ ಇದಕ್ಕೆ ಅರ್ಜಿ ಸಲ್ಲಿಸಲು ಹಲವಾರು ದಾಖಲಾತಿಗಳು ಬೇಕಾಗುತ್ತದೆ.
ಅವುಗಳೆಂದರೆ ಜನನ ಪ್ರಮಾಣ ಪತ್ರ, ವೈದ್ಯಕೀಯ ದೃಢೀಕರಣ ಪತ್ರ ಪತಿಯ ಮರಣ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರ, ವಯಸ್ಸಿನ ದೃಢೀಕರಣ ಪತ್ರ ಅಥವಾ ಭಾರತ ಚುನಾವಣಾ ಆಯೋಗವು ನೀಡಿರುವ ಮತದಾರರ ಗುರುತಿನ ಚೀಟಿಯಲ್ಲಿರುವ ಜನ್ಮ ದಿನಾಂಕವು ವಯಸ್ಸಿಗೆ ಸಂಬಂಧಿಸಿದ ದಾಖಲೆಯಾಗಿರುತ್ತದೆ.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466