ಕೋವಿಡ್ ಕಾರಣದಿಂದಾಗಿ ಅನೇಕ ಕ್ಷೇತ್ರಗಳಲ್ಲಿ ಆಗಬೇಕಾದ ಕೆಲಸ ಕಾರ್ಯಗಳು ಪೂರ್ತಿ ಆಗದೆ ಅರ್ಧಕ್ಕೆ ನಿಂತಿದೆ ಅವುಗಳಲ್ಲಿ ಗ್ರಾಮ ಲೆಕ್ಕಿಗ ಹುದ್ದೆಯ ನೇಮಕಾತಿಯು ಕೂಡ ಒಂದಾಗಿದೆ. ನಾವಿಂದು ನಿಮಗೆ ಗ್ರಾಮ ಲೆಕ್ಕಿಗ ಹುದ್ದೆಗೆ ಸಂಬಂಧಿಸಿದಂತೆ ಯಾವ ಯಾವ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿಯಿವೆ ಜೊತೆಗೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಯಾವಾಗ ನಡೆಯುತ್ತದೆ ಮತ್ತು ಕೋವಿಡ್ ಸಮಯದಲ್ಲಿ ಪರೀಕ್ಷೆ ಬರೆಯದೆ ಪಾಸಾದ ವಿದ್ಯಾರ್ಥಿಗಳು ಬಹಳಷ್ಟು ಜನರಿದ್ದು ಅವರಿಗೆ ಇದರಲ್ಲಿ ಅವಕಾಶ ಇದೆಯೇ ಇಲ್ಲವೇ ಎಂಬುದರ ಕುರಿತಾದ ಮಾಹಿತಿಯನ್ನು ನಾವು ನಿಮಗೆ ತಿಳಿಸಿಕೊಡುತ್ತೇವೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ನೋಡಿ

ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರಿಂದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ಬಂದಿದ್ದು ಅದರಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಸರ್ಕಾರದಿಂದ ಅನುಮತಿ ನೀಡಿಲಾಗಿದ್ದು ಜಿಲ್ಲಾಡಳಿತದ ಅಡಿಯಲ್ಲಿ ನೇರನೇಮಕಾತಿ ನಡೆಯುವುದು.
ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬುದನ್ನು ತಿಳಿದುಕೊಳ್ಳೋಣ ಚಿಕ್ಕಬಳ್ಳಾಪುರದಲ್ಲಿ ನಲವತ್ತು ಹುದ್ದೆಗಳು ಬೆಂಗಳೂರು ಗ್ರಾಮಾಂತರದಲ್ಲಿ ಹನ್ನೊಂದು ಹುದ್ದೆಗಳು ಉಡುಪಿಯಲ್ಲಿ ಹದಿನೆಂಟು ಹುದ್ದೆಗಳು ರಾಮನಗರದಲ್ಲಿ ಒಂದು ಚಿತ್ರದುರ್ಗದಲ್ಲಿ ಐವತ್ತೊಂಬತ್ತು ಹುದ್ದೆಗಳು ಶಿವಮೊಗ್ಗದಲ್ಲಿ ಅರವತ್ತೊಂಬತ್ತು ಹುದ್ದೆಗಳು

ಹಾಸನದಲ್ಲಿ ಮೂವತ್ನಾಲ್ಕು ಹುದ್ದೆಗಳು ಮಂಡ್ಯದಲ್ಲಿ ಐವತ್ನಾಲ್ಕು ಹುದ್ದೆಗಳು ರಾಯಚೂರಿನಲ್ಲಿ ಐವತ್ತೊಂದು ಹುದ್ದೆಗಳು ದಾವಣಗೆರೆಯಲ್ಲಿ ಹದಿನೆಂಟು ಹುದ್ದೆಗಳು ಖಾಲಿ ಇವೆ. ಆಯಾ ಜಿಲ್ಲೆಯವರು ಆಯಾ ಜಿಲ್ಲೆಯಲ್ಲಿಯೇ ಉದ್ಯೋಗವನ್ನು ಪಡೆಯುವುದಕ್ಕೆ ಅರ್ಜಿಯನ್ನು ಹಾಕಬೇಕು ಎಂಬ ಯಾವುದೇ ಷರತ್ತುಗಳಿಲ್ಲ. ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಗೆ ಹುದ್ದೆಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಮುಂದುವರೆದು ಇನ್ನು ಮುಂದೆ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಯಾವುದೇ ಪ್ರಸ್ತಾವನೆ ಇದ್ದಲ್ಲಿ ಮೊದಲಿಗೆ ಸರ್ಕಾರದ ಅನುಮತಿಯೊಂದಿಗೆ ಆಯವ್ಯಯದಲ್ಲಿ ಅನುದಾನ ಒದಗಿಸಿಕೊಂಡ ನಂತರದಲ್ಲಿಯೇ ನೇಮಕಾತಿ ಪ್ರಕ್ರಿಯೆಯಲ್ಲಿ ಮುಂದುವರಿಯಲು ಕ್ರಮವಹಿಸತಕ್ಕದ್ದು ಎಂದು ತಿಳಿಸಲಾಗಿದೆ. ನೇಮಕಾತಿಯನ್ನು ಭರ್ತಿಮಾಡಲು ನಿಯಮಾನುಸಾರ ಕ್ರಮ ವಹಿಸಬೇಕು ಎಂದು ಹೇಳಲಾಗಿದೆ.

ಅಂದರೆ ನೀವು ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆದರೆ ಎರಡು ಸಾವಿರದ ಇಪ್ಪತ್ತೊಂದರಲ್ಲಿ ಕೋವಿಡ್ ಕಾರಣ ಬಹಳಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯದೆ ಉತ್ತಮವಾಗಿ ಅಂಕಗಳನ್ನು ಗಳಿಸಿರುತ್ತಾರೆ ಹಾಗಾಗಿ ಅನೇಕ ಜನರಿಗೆ ಇವರನ್ನು ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಾರೆಯೆ ಇಲ್ಲವೇ ಎಂಬ ಗೊಂದಲವಿದೆ ಆದರೆ ಎರಡು ಸಾವಿರದ ಇಪ್ಪತ್ತೊಂದರಲ್ಲಿ ದ್ವಿತೀಯ ಪಿಯುಸಿ ಪಾಸಾಗಿರುವ ವಿದ್ಯಾರ್ಥಿಗಳಿಗೂ ಕೂಡ ಗ್ರಾಮ ಲೆಕ್ಕ ಹುದ್ದೆಗಳ ನೇಮಕಾತಿಯಲ್ಲಿ ಅವಕಾಶವಿದೆ.

ಹಾಗಾದರೆ ಈ ಹುದ್ದೆಗಳಿಗೆ ಯಾವಾಗ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ ಎಂದರೆ ಎರಡು ಸಾವಿರದ ಹತ್ತೊಂಬತ್ತರಲ್ಲಿ ಕೆಲವು ಜಿಲ್ಲೆಗಳಲ್ಲಿ ಗ್ರಾಮಲೆಕ್ಕಿಗರ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ನಂತರ ಕೋವಿಡ್ ಇರುವ ಕಾರಣ ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ ನಡೆದಿರಲಿಲ್ಲ. ಆದರೆ ಅಧಿಕ ಪ್ರಮಾಣದಲ್ಲಿ ಹುದ್ದೆಗಳು ಖಾಲಿ ಇರುವ ಕಾರಣ ಎರಡು ಸಾವಿರದ ಇಪ್ಪತ್ತೆರಡರ ಜನವರಿಯಿಂದ ಮಾರ್ಚ್ ತಿಂಗಳುಗಳಲ್ಲಿ ಹುದ್ದೆಗಳ ಆಯ್ಕೆಗೆ ಅಭ್ಯರ್ಥಿಗಳನ್ನು ಆಹ್ವಾನಿಸಬಹುದು. ಹಾಗಾಗಿ ನೀವು ಈ ಮಾಹಿತಿಯನ್ನು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಪರಿಚಿತರು ಹಾಗೂ ಸ್ನೇಹಿತರಿಗೂ ಈ ಮಾಹಿತಿಯನ್ನು ತಿಳಿಸಿರಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!