ಹಳ್ಳಿಗಳಲ್ಲಿ ಕರೋನ ಕಂಟ್ರೋಲ್ ಮಾಡಲು ರಾಜ್ಯ ಸರ್ಕಾರ ತಂದಿದೆ ಹೊಸ ನಿಯಮ

0 0

ಕಳೆದ ಕೆಲವು ದಿನಗಳಿಂದ ಗ್ರಾಮೀಣ ಭಾಗದಲ್ಲಿ ಕೊರೋನ ಕೇಸ್ ಹೆಚ್ಚಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ನಿಯಂತ್ರಣ ಮಾಡಲು ಹೊಸ ನಿಯಮವನ್ನು ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರ ಕೊರೋನ ನಿಯಂತ್ರಣ ಮಾಡಲು ಗ್ರಾಮೀಣ ಭಾಗದಲ್ಲಿ ಯಾವ ರೀತಿಯ ನಿಯಮಗಳನ್ನು ಜಾರಿಗೆ ತಂದಿದೆ, ಗ್ರಾಮೀಣ ಭಾಗದಲ್ಲಿ ಕೊರೋನ ಸೋಂಕಿತರು ಯಾವ ರೀತಿ ಚಿಕಿತ್ಸೆ ಪಡೆದುಕೊಳ್ಳಬೇಕು ಹಾಗೂ ಎಲ್ಲಿ ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಕರ್ನಾಟಕ ರಾಜ್ಯ ಸರ್ಕಾರ ಗ್ರಾಮೀಣ ಭಾಗದಲ್ಲಿ ಕೊರೋನ ನಿಯಂತ್ರಣ ಮಾಡಲು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಕೊರೋನ ಸೋಂಕು ತಗುಲಿದರೆ ಪ್ರಾಥಮಿಕ ಚಿಕಿತ್ಸಾ ಕೇಂದ್ರದ ಕೋವಿಡ್ ಸೆಂಟರ್ ಗೆ ದಾಖಲಾಗಬೇಕು. ಹೋಂ ಐಸೋಲೇಷನ್ ನಲ್ಲಿ ಕೋವಿಡ್-19 ನಿಯಮ ಅನುಸರಿಸದೆ ಇರುವ ಕಾರಣ ಸರ್ಕಾರ ಸೋಂಕು ನಿಯಂತ್ರಣ ಮಾಡಲು ಈ ಕ್ರಮವನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ಇದರ ಬಗ್ಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾಕ್ಟರ್ ಕೆ. ಸುಧಾಕರ್ ಅವರು ಇನ್ನು ಮುಂದೆ ಗ್ರಾಮೀಣ ಭಾಗದಲ್ಲಿ ಕೊರೋನ ಪೋಸಿಟಿವ್ ಬಂದರೆ ಅವರು ಮನೆಯಲ್ಲಿಯೆ ಹೋಂ ಕ್ವಾರಂಟೈನ್ ಆಗಲು ಬಯಸಿದರೆ ಪ್ರತ್ಯೇಕವಾದ ಕೊಠಡಿ ವ್ಯವಸ್ಥೆ ಇರಬೇಕು ಮತ್ತು ಆ ಕೊಠಡಿಗೆ ಶೌಚಾಲಯ ವ್ಯವಸ್ಥೆ ಇರಬೇಕು ಇಂತಹ ವ್ಯವಸ್ಥೆ ಇದ್ದವರಿಗೆ ಮಾತ್ರ ಹೋಂ ಐಸೋಲೇಷನ್ ಗೆ ಅವಕಾಶ ಕೊಡಲಾಗುತ್ತದೆ. ಸೋಂಕಿತರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಇಲ್ಲದೆ ಇದ್ದರೆ ಅಂಥವರನ್ನು ಗುರುತಿಸಿ ಕಡ್ಡಾಯವಾಗಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದ ಕೋವಿಡ್ ಸೆಂಟರ್ ಗೆ ದಾಖಲಿಸಬೇಕು ಎಂದು ಹೇಳಿದ್ದಾರೆ. ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಸಂಖ್ಯೆ ತೀವ್ರವಾಗಿ ಹೆಚ್ಚಳವಾಗುತ್ತಿದ್ದು, ಇದನ್ನು ತಡೆಯಲು ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊರೋನ ಸೋಂಕಿತರು ಕಡ್ಡಾಯವಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು.

ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಕೊರೋನ ಪೋಸಿಟಿವ್ ಬಂದವರು ಮನೆಯಲ್ಲಿಯೆ ಐಸೋಲೇಷನ್ ಆಗುತ್ತಿದ್ದರು ಆದರೆ ಇದರಿಂದ ಮನೆಯ ಇತರ ಸದಸ್ಯರಿಗೂ ಹರಡುತ್ತಿದ್ದು ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್ ಗೆ ಇನ್ನು ಮುಂದೆ ಅವಕಾಶ ಇರುವುದಿಲ್ಲ. ಕೊರೋನ ಸೋಂಕಿತರು ಕಡ್ಡಾಯವಾಗಿ ಹೋಬಳಿ ಅಥವಾ ತಾಲೂಕು ಮಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಕೋವಿಡ್ ಸೆಂಟರ್ ಗೆ ದಾಖಲಾಗಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಕೊರೋನ ಎರಡನೆ ಅಲೆಯು ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಹೆಚ್ಚಾಗುತ್ತಿದ್ದು. ಗ್ರಾಮೀಣ ಭಾಗದಲ್ಲಿ ಕೊರೋನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವ ರೀತಿಯ ಕ್ರಮಗಳನ್ನು ಅನುಸರಿಸಬೇಕು, ಜನರಲ್ಲಿ ಯಾವ ರೀತಿಯ ಜಾಗೃತಿ ಮೂಡಿಸಬೇಕು ಎಂಬ ವಿಷಯದ ಬಗ್ಗೆ ಹೆಚ್ಚು ಒತ್ತು ಕೊಡಲಾಗುತ್ತದೆ. ಆದಷ್ಟು ಬೇಗ ಲಸಿಕೆಯನ್ನು ರಾಜ್ಯದ ಜನತೆಗೆ ತಲುಪಿಸಬೇಕಾಗಿದೆ.

ಭಾರತದಲ್ಲಿ ಕಂಡುಬಂದಿರುವ ಕೊರೋನ ಎರಡನೆ ಅಲೆಯಲ್ಲಿ ಬಂದಿರುವ ರೂಪಾಂತರಿ ವೈರಸ್ ಬೇರೆ ದೇಶಗಳಲ್ಲಿ ಕಂಡುಬಂದಿಲ್ಲ. ಇದೀಗ ಕೊರೋನ ಗುಣವಾದವರಿಗೆ ಬ್ಲ್ಯಾಕ್ ಫಂಗಸ್ ಆಗುತ್ತಿದ್ದು, ಇದರ ಬಗ್ಗೆ ನಮಗೆ ಮೊದಲು ಮಾಹಿತಿ ತಿಳಿದಿರಲಿಲ್ಲ ಸರ್ಕಾರದೊಂದಿಗೆ ಎಲ್ಲರೂ ಕೊರೋನ ನಿಯಂತ್ರಣ ಮಾಡುವಲ್ಲಿ ಕೈಜೋಡಿಸಬೇಕಾಗಿದೆ ಎಂದು ಸುಧಾಕರ್ ಅವರು ಹೇಳಿದರು. ಬ್ಲ್ಯಾಕ್ ಫಂಗಸ್ ಅಟ್ಯಾಕ್ ಆದ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಘೋಷಣೆ ಹೊರಡಿಸಿದೆ. ಸ್ಟಿರಾಯ್ಡ್ ಬಳಕೆಯಿಂದ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದ್ದು ಮುಂದಿನ ದಿನಗಳಲ್ಲಿ ವೈದ್ಯರ ಸೂಚನೆ ಇಲ್ಲದೆ ಸ್ಟಿರಾಯ್ಡ್ ಬಳಕೆ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶವನ್ನು ಸರ್ಕಾರ ಹೊರಡಿಸಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆ, ಮೈಸೂರಿನ ವೈದ್ಯಕೀಯ ಕಾಲೇಜು, ಶಿವಮೊಗ್ಗದ ವೈದ್ಯಕೀಯ ಕಾಲೇಜು, ಮಣಿಪಾಲ್, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಒಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ವೇಗವಾಗಿ ಹರಡುತ್ತಿರುವ ಕೊರೋನ ವೈರಸ್ ಅನ್ನು ನಿಯಂತ್ರಣ ಮಾಡುವುದು ಸರ್ಕಾರದ ಮುಂದಿರುವ ಸವಾಲಾಗಿದೆ. ಗ್ರಾಮೀಣ ಭಾಗದಲ್ಲಿ ಪ್ರತ್ಯೇಕ ಕೊಠಡಿ, ಶೌಚಾಲಯ ವ್ಯವಸ್ಥೆಯ ಕೊರತೆ ಇರುವುದರಿಂದ ಹೋಂ ಐಸೋಲೇಷನ್ ವ್ಯವಸ್ಥಿತವಾಗಿ ಆಗುತ್ತಿಲ್ಲ ಇದರಿಂದ ಕೊರೋನ ನಿಯಂತ್ರಣ ಅಸಾಧ್ಯ ಆದ್ದರಿಂದ ಗ್ರಾಮೀಣ ಭಾಗದಲ್ಲಿ ಕೊರೋನ ಪೋಸಿಟಿವ್ ಬಂದಿರುವವರು ತಪ್ಪದೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಾಖಲಾಗಬೇಕು. ಸರ್ಕಾರದೊಂದಿಗೆ ನಾವೆಲ್ಲರೂ ಕೈ ಜೋಡಿಸೋಣ, ಕೊರೋನ ನಿಯಂತ್ರಿಸೋಣ.

Leave A Reply

Your email address will not be published.