ಪಾನ್ ಶಾಪ್ ಗಳಲ್ಲಿ ಸಿಗುವಂತಹ ವೀಳ್ಯದೆಲೆಯು ಒಂದು ರೀತಿಯ ಹೈಬ್ರೀಡ್ ಎಲೆ ಎನ್ನಬಹುದು ದೇಶೀಯ ವೀಳ್ಯದೆಲೆಯಲ್ಲಿ ಹೆಚ್ಚಿನ ಔಷಧೀಯ ಗುಣಗಳು ಇರುತ್ತದೆ ಭಾರತೀಯರು ಆಯುರ್ವೇದದಲ್ಲಿ ವಿವಿಧ ರೀತಿಯ ಚಿಕಿತ್ಸೆಗೆ ಇದನ್ನು ಬಳಸಿಕೊಂಡು ಬಂದಿದ್ದಾರೆ ಆಯುರ್ವೇದದ ಪ್ರಕಾರ ತಲೆನೋವು ತುರಿಕೆ ಗಾಯ ಮಲಬದ್ಧತೆ ಮತ್ತು ಸವೆತ ಇತ್ಯಾದಿಗಳನ್ನು ತುಂಬಾ ಪರಿಣಾಮಕಾರಿ ಆಗಿ ನಿವಾರಣೆ ಮಾಡುತ್ತದೆ ಪ್ರತಿಯೊಂದು ಪೂಜೆ ಹಾಗೂ ದೇವರ ಕಾರ್ಯಕ್ರಮಗಳಿಗೆ ವೀಳ್ಯದೆಲೆ ಹಾಗೂ ಅಡಕೆ ಬಳಕೆ ಮಾಡುತ್ತಾರೆ ನಮ್ಮ ಹಿರಿಯರು ಪ್ರತಿನಿತ್ಯವು ಊಟವಾದ ಬಳಿಕ ಎಲೆ ಅಡಕೆ ಜಗಿಯುತ್ತಿದ್ದರು ಇದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎನ್ನುವ ನಂಬಿಕೆ ಇದೆ.
ವೀಳ್ಯದ ಎಲೆಗಳಲ್ಲಿ ಔಷಧೀಯ ಪ್ರಭಾವಗಳು ಹೆಚ್ಚಾಗಿ ಕಂಡುಬರುತ್ತದೆ ಅದರಲ್ಲೂ ಸೋಂಕುಗಳ ಪ್ರಭಾವದಿಂದ ದೂರವಾಗಲು ವೀಳ್ಯದ ಎಲೆ ಅನುಕೂಲಕರವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಬಹುದು ಹಲವಾರು ಚರ್ಮ ರೋಗನಿರೋಧಕ ಗುಣಗಳು ವೀಳ್ಯದ ಎಲೆಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ ನಾವು ಈ ಲೇಖನದ ಮೂಲಕ ವೀಳ್ಯದೆಲೆಯ ಉಪಯೋಗವನ್ನು ತಿಳಿದುಕೊಳ್ಳೋಣ.
ಕೆಲವೊಂದು ಬಾರಿ ಹೊಟ್ಟೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ ಆಗ ವೀಳ್ಯದೆಲೆಗೆ ಉಪ್ಪು ಹಾಕಿಕೊಂಡು ರಸವನ್ನು ನುಂಗಿದರೆ ಹೊಟ್ಟೆನೋವು ಕಡಿಮೆಯಾಗುತ್ತದೆ ಎಲೆ ಅಡಿಕೆ ಹಾಕುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ ಹೇಗೆ ಎಂದರೆ ಎಲೆ ಅಡಿಕೆ ಹಾಕುದರಿಂದ ಜೊಲ್ಲು ರಸ ಉತ್ಪತ್ತಿ ಯಾಗಿ ಜೀರ್ಣ ಶಕ್ತಿ ಹೆಚ್ಚುತ್ತದೆ ಮತ್ತು ಬಾಯಿ ಇಂದ ಕೆಟ್ಟ ವಾಸನೆ ನಿವಾರಣೆಯಾಗುತ್ತದೆ ವೀಳ್ಯದೆಲೆಯ ಜೊತೆಗೆ ತುಲಸಿ ಪಚ್ಚೆಕರ್ಪೂರ ಹಾಗೂ ಲವಂಗ ಸೇರಿಸಿ ದಿನಕ್ಕೆ ಒಂದು ಬಾರಿ ತಿನ್ನುದರಿಂದ ಕಫ ಮತ್ತು ಕೆಮ್ಮು ಕಡಿಮೆಯಾಗುತ್ತದೆ ಹಾಗೂ ವೀಳ್ಯದೆಲೆಯನ್ನು ನುಣ್ಣಗೆ ಅರೆದು ಕೊಬ್ಬರಿ ಎಣ್ಣೆ ಯ ಜೊತೆಗೆ ತಲೆಗೆ ಹಚ್ಚಿಕೊಂಡರೆ ತಲೆಯ ಹೊಟ್ಟ್ಟು ಕೂದಲು ಉದುರುವ ಸಮಸ್ಯೆ ನಿವಾರಣೆಯಾಗುತ್ತದೆ
ಒಂದು ಚಮಚದಷ್ಟು ವೀಳ್ಯದೆಲೆಯ ರಸವನ್ನು ಮಕ್ಕಳಿಗೆ ಕೊಡುವುದರಿಂದ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಬಹುದು ವೀಳ್ಯದೆಲೆಯನ್ನು ಎಳ್ಳೆಣ್ಣೆಯಲ್ಲಿ ನೆನೆಸಿ ಸ್ವಲ್ಪ ಬಿಸಿ ಮಾಡಿ ಮಕ್ಕಳ ಎದೆ ಮೇಲೆ ಉಜ್ಜಿದರೆ ಅಯಾಸ ಕೆಮ್ಮಿನಂತಹ ಸಮಸ್ಯೆಗಳು ಕಡಿಮೆಯಾಗುತ್ತದೆ ವೀಳ್ಯದೆಲೆಗಳನ್ನು ಕತ್ತರಿಸಿ ನೀರಿನಲ್ಲಿ ಹಾಕಿ ಕುದಿಸಿ ಬಳಿಕ ಸೋಸಿ ಈ ಕಷಾಯಕ್ಕೆ ಉಪ್ಪು ಬೆರೆಸಿ ಬಾಯಿ ಮುಕ್ಕಳಿಸಿದರೆ ವಸಡಿನ ನೋವು ಊತ ಗುಣವಾಗುತ್ತದೆ
ಮತ್ತು ಉಸಿರಾಟದ ತೊಂದರೆ ಇರುವವರು ವೀಳ್ಯದೆಲೆ ರಸ ಈರುಳ್ಳಿ ರಸ ಶುಂಠಿ ರಸ ಹಾಗೂ ಜೇನು ತುಪ್ಪ ಬೆರೆಸಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಸೇವಿಸಿ ಇದನ್ನು ಸುಮಾರು 4-5 ತಿಂಗಳು ತೆಗೆದುಕೊಳ್ಳುತ್ತಾ ಬಂದರೆ ಉಸಿರಾಟದ ತೊಂದರೆ ಅತೀ ಬೇಗನೆ ವಾಸಿಯಾಗುವುದುಒಂದೆರೆಡು ಚಮಚ ವೀಳ್ಯದೆಲೆ ರಸಕ್ಕೆ ಸ್ವಲ್ಪ ಜೇನು ತುಪ್ಪ ಬೆರೆಸಿ ದಿನಕ್ಕೆ 3 ಬಾರಿ ಸೇವಿಸುತ್ತಾ ಬಂದರೆ ಶ್ವಾಸಕೋಶಕ್ಕೆ ಸಂಬಂಧಿಸಿ ರೋಗಗಳು ನಿವಾರಣೆಯಾಗುತ್ತದೆ.
ಕ್ಯಾಲ್ಸಿಯಂ ಅಂಶ ಹೆಚ್ಚಿರುವ ವೀಳ್ಯದೆಲೆ ತಿನ್ನುವುದರಿಂದ ಜೀರ್ಣ ಶಕ್ತಿ ಹೆಚ್ಚಿಸುತ್ತದೆ ಧ್ವನಿ ಸರಿಪಡಿಸಿ ಗ್ಯಾಸ್ಟ್ರಿಕ್ ಟ್ರಬಲ್‌ವನ್ನು ಬಹುಮಟ್ಟಿಗೆ ಗುಣಪಡಿಸುತ್ತದೆ ಸಂದಿಗಳಲ್ಲಿ ಗಂಟು ನೋವು ಕಾಣಿಸಿಕೊಂಡಾಗ ಎರಡು ವೀಳ್ಯದೆಲೆಯನ್ನು ಸ್ವಲ್ಪ ಮಂದ ಜ್ವಾಲೆಯಲ್ಲಿ ಬಿಸಿ ಮಾಡಿ ಅದಕ್ಕೆ ಸ್ವಲ್ಪ ಸಾಸಿವೆ ಎಣ್ಣೆ ಹಚ್ಚಿ ಅದರೊಳಗೆ ಎಣ್ಣೆ ಮಿಶ್ರಿತ ಬಿಸಿ ಮಾಡಿದ ಅರಸಿನ ಹುಡಿಯನ್ನು ದಪ್ಪಗೆ ಸವರಿ ಒಂದರ ಮೇಲೆ ಒಂದು ಎಲೆಯನ್ನು ಮುಚ್ಚಿ ಗಂಟುಗಳ ಮೇಲಿಟ್ಟು ಶಾಖ ಕೊಡಬೇಕು
ಹೀಗೆ ಒಂದೆರಡು ಬಾರಿ ಬಿಸಿ ಮಾಡಿ ಪುನರಾವರ್ತಿಸಿ ಬಟ್ಟೆಯಿಂದ ಸುತ್ತಿ ಕಟ್ಟಬೇಕು ಹೀಗೆ ಇದನ್ನು 4-5 ತಿಂಗಳು ಮಾಡುತ್ತಾ ಬಂದರೆ ಗಂಟುನೋವು ಕಡಿಮೆಯಾಗುತ್ತದೆ ವೀಳ್ಯದ ಎಲೆಗಳಲ್ಲಿ ಉರಿಯೂತ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿದ್ದು ಮುಖದ ಮೇಲಿರುವ ಮೊಡವೆಗಳನ್ನು ಸುಲಭವಾಗಿ ತೆಗೆದುಹಾಕಲು ವೀಳ್ಯದ ಎಲೆ ಬಳಸಲಾಗುತ್ತದೆ ಮುಖವನ್ನು ವೀಳ್ಯದ ಎಲೆ ಕಷಾಯದಿಂದ ತೊಳೆಯುವುದರಿಂದ ಅಥವಾ ವೀಳ್ಯದ ಎಲೆಗಳು ಮತ್ತು ಅರಿಶಿನದ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿಕೊಂಡು ಒಣಗಿದ ನಂತರ ತೊಳೆಯುವುದರಿಂದ ತ್ವಚೆ ಕಲೆ ಮುಕ್ತವಾಗುವುದಲ್ಲದೆ ಮೊಡವೆಗಳು ನಿವಾರಣೆಯಾಗುತ್ತದೆ.
ವೀಳ್ಯದ ಎಲೆಗಳಲ್ಲಿರುವ ಗುಣವು ಅಲರ್ಜಿ ಸಂಭವಿಸಿದ ರೋಗಗಳಿಗೆ ಶೀಘ್ರವೇ ಪರಿಹಾರ ಒದಗಿಸುತ್ತದೆ ಹತ್ತು ಎಲೆಗಳನ್ನು ಕುದಿಸಿ ಎಲೆಗಳು ಮೆತ್ತಗೆ ಬದಲಾದಂತೆ ಒಲೆಯ ಮೇಲಿಂದ ತೆಗೆಯಬೇಕು ಈ ನೀರನ್ನು ಸ್ನಾನದ ನೀರಿನಲ್ಲಿ ಅಥವಾ ತುರಿಕೆಯಾದ ಜಾಗದಲ್ಲಿ ಹಚ್ಚಿದರಿಂದ ವೀಳ್ಯದ ಎಲೆಯಲ್ಲಿರುವ ಅತ್ಯದ್ಭುತ ಔಷಧೀಯ ಗುಣಗಳು ಉರಿಯೂತದ ಗುಣಲಕ್ಷಣಗಳು ತುರಿಕೆ ಮತ್ತು ಕಡಿತವನ್ನು ಕಡಿಮೆ ಮಾಡುತ್ತದೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿ ಇಡುವುದು ಹಲ್ಲಿನ ಆರೋಗ್ಯ ಕಾಪಾಡುವುದು
ಗಾಯ ಗುಣಪಡಿಸುವುದು ಮತ್ತು ಮಧುಮೇಹ ನಿಯಂತ್ರಣದಲ್ಲಿ ಇಡುತ್ತದೆ ವೀಳ್ಯದೆಲೆಯಲ್ಲಿ ಮಧುಮೇಹಿ ವಿರೋಧಿಯಾಗಿರುವಂತಹ ಟ್ಯಾನಿನ್ ಎನ್ನುವ ಅಂಶವಿದೆ ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ ಕರುಳಿನಲ್ಲಿ ಗ್ಲೂಕೋಸ್ ಹೀರುವಿಕೆಯನ್ನು ಪ್ರತಿಬಂಧಿಸುವ ಮೂಲಕ ವೀಳ್ಯದೆಲೆಯು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ತಗ್ಗಿಸುವುದುದೇಹದಲ್ಲಿ ಇರುವಂತಹ ಫ್ರೀ ರ್ಯಾಡಿಕಲ್ ನಿಂದಾಗಿ ಗಾಯವು ಒಣಗಲು ತುಂಬಾ ಸಮಯ ಬೇಕಾಗುತ್ತದೆ ಮಧುಮೇಹ ಇರುವ ಜನರಲ್ಲಿ ಕೂಡ ಗಾಯ ಬೇಗನೆ ಒಣಗುವುದಿಲ್ಲ ಇಂತಹ ಸಮಯದಲ್ಲಿ ವೀಳ್ಯದೆಲೆಯು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ
ವೀಳ್ಯದೆಲೆಗೆ ಹರಳೆಣ್ಣೆಯನ್ನು ಹಚ್ಚಿ ಅದನ್ನು ಬಿಸಿ ಮಾಡಿ ಹೊಟ್ಟೆ ಉಬ್ಬರದಿಂದ ನರಳುತ್ತಿರುವ ಮಗುವಿನ ಹೊಟ್ಟೆಗೆ ಕಾವು ನೀಡಿದರೆ ನೋವು ಮಾಯವಾಗುತ್ತದೆ ಮಕ್ಕಳಲ್ಲಿ ಉಸಿರಾಟದ ತೊಂದರೆಯಾದಾಗ ಎಣ್ಣೆ ಸವರಿ ಬಾಣಲೆಯಲ್ಲಿ ಬೆಚ್ಚಗೆ ಮಾಡಿದ ವಿಳ್ಯದೆಲೆಯನ್ನು ಎದೆಯ ಮೇಲಿಡುವುದರಿಂದ ಉಸಿರಾಟದ ತೊಂದರೆಗೆ ನಿವಾರಣೆಯಾಗುತ್ತದೆ ವೀಳ್ಯದೆಲೆಗೆ ತುಂಬಾ ಪೂಜ್ಯನೀಯ ಸ್ಥಾನ ನೀಡುವಂತಹ ಭಾರತೀಯರು ಇದನ್ನು ಪಾನ್ ಆಗಿ ಉಪಯೋಗಿಸಿಕೊಳ್ಳುವುರು ಪಾನ್ ಎಂದರೆ ಅದಕ್ಕೆ ಅಡಕೆ ತುಂಡುಗಳು ಸುಣ್ಣ ಮತ್ತು ಕೆಲವೊಂದು ರೀತಿಯ ಮೌಥ್ ಪ್ರೆಶ್ನರ್ ಹಾಕಲಾಗುತ್ತದೆ
ಮದುವೆ ಹಾಗೂ ಇನ್ನಿತರ ಸಮಾರಂಭಗಳಲ್ಲಿ ಹೆಚ್ಚಾಗಿ ಪಾನ್ ಬಳಕೆ ಮಾಡುತ್ತಾರೆ ಇದು ನಿಜವಾಗಿಯೂ ಒಂದು ರೀತಿಯಲ್ಲಿ ಮೌಥ್ ಪ್ರೆಶ್ನರ್ ಆಗಿ ಕೆಲಸ ಮಾಡುವುದುಸಾಮಾಜಿಕ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಮಹತ್ವವು ಇದಕ್ಕೆ ಇದೆ ಇದನ್ನು ಸಣ್ಣ ಪ್ರಮಾಣದಲ್ಲಿ ಸೇವನೆ ಮಾಡಿದರೆ ಹಲ್ಲು ಚರ್ಮ ಪ್ರತಿರೋಧಕ ವ್ಯವಸ್ಥೆ ಶ್ವಾಸಕೋಶ ಮತ್ತು ಮೇಧೋಜೀರಕಕ್ಕೆ ನೆರವಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430