ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಆದಾಗಿನಿಂದಲೂ ಕೆಲವು ಆದೇಶಗಳನ್ನು ಹೊರಡಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಇದೀಗ ಮಥುರಾ ಹಾಗೂ ಅಯೋಧ್ಯಾ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸುವ ಮೂಲಕ ದೇವರ ಸನ್ನಿಧಾನದಲ್ಲಿ ಪವಿತ್ರತೆಯನ್ನು ಕಾಪಾಡಿಕೊಳ್ಳಲಾಗುತ್ತಿದೆ ಹಾಗೂ ಎಣ್ಣೆ ಪ್ರಿಯರಿಂದ ಆಗುತ್ತಿರುವ ಸಮಸ್ಯೆಗಳು ಕಡಿಮೆಯಾಗುತ್ತಿವೆ. ಹಾಗಾದರೆ ಯೋಗಿ ಆದಿತ್ಯನಾಥ್ ಅವರ ಆದೇಶಗಳನ್ನು ಈ ಲೇಖನದಲ್ಲಿ ನೋಡೋಣ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಸರ್ಕಾರ ಹೊಸ ಆದೇಶವೊಂದನ್ನು ಹೊರಡಿಸಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ ಆದರೆ ಎಣ್ಣೆ ಪ್ರಿಯರಿಗೆ ಬೇಸರ ಮೂಡಿಸಲಿದೆ. ಅಯೋಧ್ಯೆ ಮತ್ತು ಮಥುರಾ ದೇವಾಲಯಗಳ ಸುತ್ತ ಮದ್ಯ ಮಾರಾಟವನ್ನು ನಿಷೇಧಿಸಿ ಎಂದು ಆದೇಶಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ ಹಾಗೂ ರಾಮ ಜನ್ಮಭೂಮಿ ಮತ್ತು ಕೃಷ್ಣ ಜನ್ಮಭೂಮಿ ಸುತ್ತಲಿನ ಮದ್ಯದಂಗಡಿಗಳ ಪರವಾನಗಿಯನ್ನು ಸಹ ರದ್ದು ಮಾಡಿದೆ. ಈ ಆದೇಶ ಇಂದಿನಿಂದಲೆ ಜೂನ್‌ 1ರಂದು ಜಾರಿಗೆ ಬಂದಿದ್ದು ಸರ್ಕಾರ ಒಟ್ಟೂ 37 ಬಾರ್‌ ಮತ್ತು ರೆಸ್ಟೊರೆಂಟ್‌ಗಳ ಪರವಾನಗಿಯನ್ನು ರದ್ದು ಮಾಡಿದೆ. ಜೊತೆಗೆ ಸ್ಥಳೀಯ ಭಾಂಗ್ ಗಳನ್ನು ಕೂಡ ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ಮಾರಾಟ ಮಾಡಲಾಗುತ್ತಿತ್ತು ಸರ್ಕಾರ ಅದನ್ನು ನಿಷೇಧಿಸಿದೆ.

ಎಣ್ಣೆ ಮಾರುತ್ತಿದ್ದ ಬಾರ್‌ ಓನರ್‌ಗಳಿಗೆ ಸರ್ಕಾರ ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದೆ, ಯಾವುದೆ ಕಾರಣಕ್ಕೂ ಕಾಳದಂಧೆಯಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ, ಮಾಡಿದರೆ ಕಠಿಣ ಶಿಕ್ಷೆ ವಿಧಿಸುವುದಾಗಿ ಸೂಚನೆ ನೀಡಲಾಗಿದೆ. ಮದ್ಯ ಮಾರುವ ಬದಲು ಹಾಲು ಮಾರಾಟ ಮಾಡಿ ಎಂಬ ಸಲಹೆಯುನ್ನು ಸರ್ಕಾರ ನೀಡಿದೆ. ಮಥುರಾದಲ್ಲಿ ಮೂರು ಹೋಟೆಲ್‌ಗಳಲ್ಲಿ ಬಾರ್‌ ಲೈಸನ್ಸ್‌ ಇತ್ತು, ಅದನ್ನು ಕೂಡ ಕ್ಯಾನ್ಸಲ್‌ ಮಾಡಲಾಗಿದೆ. 2021ರ ಸೆಪ್ಟೆಂಬರ್‌ನಲ್ಲಿ ಮಥುರಾ ಸುತ್ತಮುತ್ತ 10 ಸ್ಕ್ವೇರ್‌ ಕಿಲೊಮೀಟರ್‌ ಏರಿಯಾವನ್ನು ತೀರ್ಥಕ್ಷೇತ್ರ ಎಂದು ಘೋಷಣೆ ಮಾಡಿ ಸರ್ಕಾರಿ ಆದೇಶ ಹೊರಡಿಸಿತ್ತು.

ಜೊತೆಗೆ ಈ ಸ್ಥಳದಲ್ಲಿ ಮಾಂಸ – ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಕೃಷ್ಣೋತ್ಸವ ಆಚರಣೆಯ ದಿನ ಯೋಗಿ ಆದಿತ್ಯನಾಥ್‌ ಈ ಘೋಷಣೆಯನ್ನು ಮಾಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಆ ಪ್ರದೇಶದಲ್ಲಿ ಬಾರ್ ಗಳು ತಲೆ ಎತ್ತಿದ್ದವು. ಕಳೆದ ತಿಂಗಳು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮಸೀದಿ ಸೇರಿದಂತೆ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸುವಂತೆ ಆದೇಶಿಸಿದ ಬೆನ್ನಲ್ಲೆ ಪೀಲಿಭೀತ್‌ ಜಿಲ್ಲೆಯ ಧಾರ್ಮಿಕ ಮುಖಂಡರು, ಧಾರ್ಮಿಕ ಕ್ಷೇತ್ರಗಳಿಂದ ತೆರವುಗೊಳಿಸಿದ ಧ್ವನಿವರ್ಧಕಗಳನ್ನು ಶಾಲೆಗಳಿಗೆ ದಾನ ಮಾಡಿದ್ದಾರೆ.

ಪೋಲಿಸ್‌ ಸೂಪರಿಂಟೆಂಡೆಂಟ್‌ ದಿನೇಶ್‌ ಕುಮಾರ್‌ ಅವರ ನಿರ್ದೇಶನದ ಮೇರೆಗೆ ಜಿಲ್ಲೆಯ ದೇವಾಲಯಗಳು, ಮಸೀದಿ, ಗುರುದ್ವಾರಗಳಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ. ಇವುಗಳನ್ನು ಸ್ಥಳೀಯ ಶಾಲೆ ಹಾಗೂ ಕಾಲೇಜುಗಳಿಗೆ ಸ್ವ ಇಚ್ಛೆಯಿಂದ ಧಾರ್ಮಿಕ ಮುಖಂಡರು ದಾನವಾಗಿ ನೀಡಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಸಾಂಸ್ಕೃತಿಕ, ಕ್ರೀಡಾ ಚಟುಚಟಿಕೆಗಳ ಆಯೋಜನೆಗಳಲ್ಲಿ ಅಂದರೆ ಅಗಸ್ಟ್‌ 15, ಜನವರಿ 26 ಮೊದಲಾದ ವೇಳೆ ಇವುಗಳನ್ನು ಬಳಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಧಾರ್ಮಿಕ ಮುಖಂಡರ ಈ ನಡೆ ಜನರಿಂದ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ಮಸೀದಿಗಳಲ್ಲಿ ಲೌಡ್‌ಸ್ಪೀಕರ್‌ ಅಳವಡಿಕೆ ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪು ಪ್ರಕಟಿಸಿರುವುದು ಎಲ್ಲರಿಗೂ ತಿಳಿದಿದೆ. ದೇಶದ ಹಲವೆಡೆ ಮಸೀದಿಗಳಲ್ಲಿ ಅಕ್ರಮವಾಗಿ ಲೌಡ್‌ಸ್ಪೀಕರ್‌ ಹಾಕಿ ಆಜಾನ್‌ ಮೊಳಗಿಸಲಾಗುತ್ತಿದೆ ಎಂದು ಗಲಾಟೆಗಳ ನಡೆದಿರುವ ನಡುವೆಯೆ ಹೈಕೋರ್ಟ್ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ ಹಾಗೂ ಅಳವಡಿಕೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

ಬದಾಯೂ ಜಿಲ್ಲೆಯ ಧೋರನ್‌ಪುರ ಗ್ರಾಮದ ನೂರಾನಿ ಮಸೀದಿಯಲ್ಲಿ ಆಜಾನ್‌ ಮೊಳಗಿಸಲು ಲೌಡ್‌ಸ್ಪೀಕರ್‌ ಅಳವಡಿಕೆಗೆ ಅನುಮತಿ ಕೋರಿ, ಬಿಸೌಲಿ ಉಪವಿಭಾಗಾಧಿಕಾರಿಗಳಿಗೆ ಅರ್ಜಿ ಸಲ್ಲಿಸಲಾಗಿತ್ತು ಆದರೆ ಈ ಅರ್ಜಿಯನ್ನು ಉಪವಿಭಾಗಾಧಿಕಾರಿಗಳು 2021ರ ಡಿಸೆಂಬರ್ 3ರಂದು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಇರ್ಫಾನ್‌ ಎಂಬ ವ್ಯಕ್ತಿ ಹೈಕೋರ್ಟ್ ಮೊರೆ ಹೋಗಿದ್ದ. ಉಪವಿಭಾಗಾಧಿಕಾರಿಗಳ ನಿರ್ಧಾರದಿಂದ ನಮ್ಮ ಕಾನೂನಾತ್ಮಕ ಹಕ್ಕು ಹಾಗೂ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಎಂದು ವಾದಿಸಿದ್ದನು.

ಈ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್ ನ ದ್ವಿಸದಸ್ಯ ಪೀಠ ಮಸೀದಿ ಮೇಲೆ ಲೌಡ್‌ ಸ್ಪೀಕರ್‌ ಅಳವಡಿಕೆ ಮೂಲಭೂತ ಹಕ್ಕಲ್ಲ ಎಂಬ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಆದೇಶಿಸಿದ ಆದೇಶಗಳನ್ನು ನಮ್ಮ ಕರ್ನಾಟಕ ರಾಜ್ಯದಲ್ಲಿ ಕೂಡಾ ಆದೇಶಿಸಿದರೆ ಹೇಗಿರುತ್ತದೆ ನಿಮ್ಮ ಅಭಿಪ್ರಾಯವನ್ನು ತಿಳಿಸಿ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!